ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಮಿತಿ
ಬೆಂಗಳೂರು, ಸೆ. 30: 2016ನೆ ಸಾಲಿನ ರಾಜ್ಯೋತ್ಸವ ಸಂದರ್ಭದಲ್ಲಿ ನಾಡಿನ ವಿವಿಧ ಕ್ಷೇತ್ರಗಳಲ್ಲಿನ ಗಣ್ಯರನ್ನು ಗುರುತಿಸಿ ನೀಡುವ ಪ್ರತಿಷ್ಟಿತ ‘ರಾಜ್ಯೋತ್ಸವ ಪ್ರಶಸ್ತಿ’ ಆಯ್ಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 20 ಮಂದಿಯನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ.
ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಕನ್ನಡ ಮತ್ತು ಸಂಸ್ಕೃತಿ, ಕಾರ್ಮಿಕ, ಇಂಧನ, ಜಲ ಸಂಪನ್ಮೂಲ, ಗೃಹ ಸಚಿವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸೇರಿದಂತೆ ಒಟ್ಟು ಹತ್ತು ಅಕಾಡಮಿ ಮತ್ತು ಕಸಾಪ ಅಧ್ಯಕ್ಷರು ಆಯ್ಕೆ ಸಮಿತಿಯಲ್ಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಇದ್ದಾರೆ ಎಂದು ಸಚಿವೆ ಉಮಾಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





