ಮುಡಿಪು: ಜಿಲ್ಲಾಮಟ್ಟದ ಕುಸ್ತಿ ಪಂದ್ಯಕ್ಕೆ ಚಾಲನೆ

ಕೊಣಾಜೆ, ಸೆ.30: ದ.ಕ. ಜಿಲ್ಲಾ ಪಪೂ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕುಸ್ತಿ ಪಂದ್ಯವು ಮುಡಿಪುವಿನ ಸೂರಜ್ ಪಪೂ ಕಾಲೇಜಿನಲ್ಲಿಂದು ನಡೆಯಿತು.
ವಿಧಾನ ಪರಿಷತ್ ಮುಖ್ಯ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್ ಪಂದ್ಯವನ್ನು ಉದ್ಘಾಟಿಸಿದರು. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಪ್ರಶಸ್ತಿ ಫಲಕ ಅನಾವರಣಗೊಳಿಸಿದರು. ಮಿ. ವರ್ಲ್ಡ್ ಖ್ಯಾತಿಯ ದೇಹದಾರ್ಢ್ಯಪಟು ರೇಮಂಡ್ ಡಿಸೋಜ ಕುಸ್ತಿ ಪಂದ್ಯದ ಅಖಾಡಕ್ಕೆ ಚಾಲನೆ ನೀಡಿದರು. ಸೂರಜ್ ಎಜುಕೇಶನಲ್ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಮಂಜುನಾಥ್ ರೇವಣ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಂಸ್ಥೆಯ ಸಂಚಾಲಕಿ ಹೇಮಲತಾ ಎಂ.ರೇವಣ್ಕರ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ.ಕೃಪಾ ಆಳ್ವ, ಮುಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಜಿಪಂ ಸದಸ್ಯೆ ಮಮತಾ ಡಿ.ಎಸ್.ಕೊಟ್ಟಾರಿ, ಬಿಜೆಪಿ ಜಿಲ್ಲಾ ವಕ್ತಾರ ಜಿತೇಂದ್ರ ಎಸ್.ಕೊಟ್ಟಾರಿ, ಪಜೀರು ಗ್ರಾಪಂ ಅಧ್ಯಕ್ಷ ಸೀತಾರಾಮ ಶೆಟ್ಟಿ, ದ.ಕ.ಜಿಲ್ಲಾ ಅಮೆಚೂರು ಕುಸ್ತಿ ಸಂಘದ ಗೌರವಾಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ಮನಪಾ ಸ್ಥಾಯಿ ಸಮಿತಿಯ ಅಧ್ಯಕ್ಷೆ ಕವಿತಾ ಸನಿಲ್, ಮಂಗಳೂರು ಸಹಾಯಕ ಯುವ ಸಬಲೀಕರಣದ ಕ್ರೀಡಾಧಿಕಾರಿ ಲಿಲ್ಲಿ ಪಾಯಸ್, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಪದ್ಮನಾಭ ನರಿಂಗಾನ, ಗ್ರಾಪಂ ಮಾಜಿ ಅಧ್ಯಕ್ಷ ದೇವದಾಸ್ ಭಂಡಾರಿ, ಬಂಟ್ವಾಳ ತಾಪಂ ಸದಸ್ಯ ನವೀನ್ ಪಾದಲ್ಪಾಡಿ, ಎ.ಎ.ಹೈದರ್ ಪರ್ತಿಪ್ಪಾಡಿ, ಸುಹಾಸಿನಿ ಬಬ್ಬುಕಟ್ಟೆ , ಗೀತಾ ಎಸ್. ಹೆಗ್ಡೆ ಹಾಗೂ ದೈಹಿಕ ಶಿಕ್ಷಕ ಸಂದೀಪ್ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೆ ಮುನ್ನ ನಡೆದ ಕುಸ್ತಿ ಪಂದ್ಯದ ಮೆರವಣಿಗೆಗೆ ರಾಜ್ಯ ಸರಕಾರದ ಮುಖ್ಯ ಸಚೇತಕ ಐವನ್ ಡಿಸೋಜ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರಸನ್ನ ಕುಮಾರ್ ಸ್ವಾಗತಿಸಿದರು. ಸಹ ಶಿಕ್ಷಕಿ ರೇಣುಕಾ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಸುರೇಖಾ ವಂದಿಸಿದರು.







