ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು
ಸುಬ್ರಹ್ಮಣ್ಯ, ಸೆ.30: ಬೈಕ್ ಮತ್ತು ಲಾರಿ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುತ್ತಿಗಾರು ಸಮೀಪದ ಕಡ್ತಲಕಜೆ ಎಂಬಲ್ಲಿ ಶುಕ್ರವಾರ ನಡೆದಿದೆ.
ಮೃತಪಟ್ಟವರನ್ನು ಗುತ್ತಿಗಾರು ಪೈಕ ನಿವಾಸಿ ಲಕ್ಷ್ಮಣ ಗೌಡ ಎಂಬವರ ಪುತ್ರ ಭರತ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸವಾರ ಭರತ್ ಹಾಗೂ ಸಹಸವಾರ ಪೈಕ ಸೀತಾರಾಮ ಗೌಡ ಎಂಬವರ ಪುತ್ರ ಮಧುಕರನನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭರತ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಧುಕುಮಾರ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರಿಬ್ಬರು ಮುಂಜಾನೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಇವರಿಬ್ಬರಲ್ಲದೆ ಸಂಬಂಧಿ ಸಣ್ಣ ಬಾಲಕ ಇದ್ದು, ಅವನು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





