ಮೈಸೂರು ದಸರಾ ವಿಶೇಷ : ಆಕಾಶ ಅಂಬಾರಿ ಸೇವೆಗೆ ಸಿಎಂ ಚಾಲನೆ

ಮೈಸೂರು, ಅ.1: ಮೈಸೂರು ದಸರಾದ ಹಿನ್ನೆಲೆಯಲ್ಲಿ ವಿಶೇಷ ಆಕಾಶ ಅಂಬಾರಿ ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಸಂಕಷ್ಟದ ಪರಿಸ್ಥಿತಿಯಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಸರಳ ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುತ್ತಿದೆ ಎಂದರು.
ಕಾವೇರಿ ನದಿನೀರು ಹಂಚಿಕೆ ಕುರಿತ ತೀರ್ಪಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರಕಾರದ ವಿರುದ್ಧ ಟೀಕೆ ಮಾಡುವುದಿಲ್ಲ. ಈ ಹಂತದಲ್ಲಿ ಯಾವ ಪಕ್ಷದ ವಿರುದ್ಧವೂ ಆರೋಪ ಮಾಡುವುದಿಲ್ಲ. ಮಧ್ಯಾಹ್ನ ಸರ್ವಪಕ್ಷ ಸಭೆ ಕರೆದಿದ್ದೇನೆ. ರಾಜ್ಯದ ಜನರ ಹಿತ ರಕ್ಷಣೆಗೆ ಸರಕಾರ ಬದ್ಧವಾಗಿದೆ ಎಂದು ಹೇಳಿದರು.
ಇದೇ ಸಂದರ್ಭ ದಸರಾ ಹಬ್ಬವನ್ನು ಉದ್ಘಾಟಿಸಲು ಆಗಮಿಸಿದ ಚನ್ನವೀರ ಕಣವಿ ಅವರಿಗೆ ಮುಖ್ಯಮಂತ್ರಿಗಳು ಸ್ವಾಗತ ಕೋರಿದರು.
Next Story





