Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎತ್ತಿನ ಹೊಳೆ ಯೋಜನೆ ವಿರುದ್ಧ ಅ. 6ರಂದು...

ಎತ್ತಿನ ಹೊಳೆ ಯೋಜನೆ ವಿರುದ್ಧ ಅ. 6ರಂದು ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ರಾಸ್ತಾ ರೋಕೋ

ವಾರ್ತಾಭಾರತಿವಾರ್ತಾಭಾರತಿ1 Oct 2016 5:22 PM IST
share
ಎತ್ತಿನ ಹೊಳೆ ಯೋಜನೆ ವಿರುದ್ಧ ಅ. 6ರಂದು ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ರಾಸ್ತಾ ರೋಕೋ

ಮಂಗಳೂರು, ಅ.1: ಎತ್ತಿನಹೊಳೆ ಯೋಜನೆಯನ್ನು ನಿಲ್ಲಿಸಬೇಕೆಂಬ ದ.ಕ. ಜಿಲ್ಲೆಯ ಜನರ ಕೂಗಿಗೆ ರಾಜ್ಯ ಸರಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಅ. 6ರಂದು ರಾಸ್ತಾ ರೋಕೋ ಚಳವಳಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಸಂಘದ ಕಾನೂನು ಸಲಹೆಗಾರ ದಿನಕರ ಶೆಟ್ಟಿ ಮಾತನಾಡಿ, ಎತ್ತಿನಹೊಳೆ ಯೋಜನೆಯ ಕುರಿತಂತೆ ಜಿಲ್ಲೆಯ ಜನರ ವಿರೋಧದ ಬಗ್ಗೆ ರಾಜ್ಯ ಸರಕಾರದ ವರ್ತನೆ ನೋವು ತಂದಿದೆ ಎಂದರು.

ಅ.6ರಂದು ಪೂರ್ವಾಹ್ನ 11:30ಕ್ಕೆ ಬೆಸೆಂಟ್ ಸರ್ಕಲ್‌ನಲ್ಲಿ ಬೃಹತ್ ರಾಸ್ತಾ ರೋಕೋ ಚಳವಳಿ ನಡೆಯಲಿದೆ. ಕಾವೇರಿ ಹೋರಾಟಕ್ಕೆ ಸ್ಪಂದಿಸಿದ ಸರಕಾರದ ರೀತಿ ಹಾಗೂ ಎತ್ತಿನ ಹೊಳೆ ಕುರಿತಂತೆ ಸರಕಾರ ನಿಲುವು ವಿಭಿನ್ನವಾಗಿದೆ. ಈ ಮೂಲಕ ಸರಕಾರ ತುಳುನಾಡಿನ ಜನರ ಭಾವನೆಗಳನ್ನು ಕಡೆಗಣಿಸಿದೆ. ದ.ಕ. ಜಿಲ್ಲೆ ರಾಜ್ಯದಲ್ಲಿಲ್ಲವೋ ಎಂಬ ಭಾವನೆಯಂತಿದೆ. ಜಿಲ್ಲೆಯ ಜನತೆಗೆ ಅಪಮಾನ ಮಾಡುತ್ತಿದೆ ಎಂಬ ಹೋರಾಟಗಾರರ ಭಾವನೆಯನ್ನು ಸರಕಾರದ ಮುಂದಿಡಲು ವಿದ್ಯಾರ್ಥಿ ಸಂಘ ತೀರ್ಮಾನಿಸಿ ಚಳವಳಿಯನ್ನು ಆಯೋಜಿಸಿದೆ ಎಂದು ಹೇಳಿದರು.

ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸಭೆ ಕರೆಯುವ ಭರವಸೆ ನೀಡಿದ್ದರು. ಆದರೆ ಆ ಬಳಿಕ ಮೂರು ಬಾರಿ ಮುಖ್ಯಮಂತ್ರಿ ಜಿಲ್ಲೆಗೆ ಭೇಟಿ ನೀಡಿದರೂ ಸಭೆ ಮಾತ್ರ ನಡೆಸಿಲ್ಲ. ಜಿಲ್ಲೆಯ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಹಾಗೂ ವಿವಿಧ ಧರ್ಮಗಳ ಧರ್ಮಗುರುಗಳ ಮಾತಿಗೂ ಸರಕಾರ ಬೆಲೆ ನೀಡುತ್ತಿಲ್ಲ ಎಂದವರು ಹೇಳಿದರು.

ಆಸ್ಕರ್ ಮನೆ ಮುಂದೆ ಪ್ರತಿಭಟನೆಗೆ ಯೋಜನೆ

ಬಿಜೆಪಿ ನಾಯಕ ಯಡಿಯೂರಪ್ಪ ಹಾಗೂ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರು ಯೋಜನೆ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆಯನ್ನು ಸಾರ್ವಜನಿಕವಾಗಿ ನೀಡಿದ್ದರು. ಜಿಲ್ಲೆಯ ಜನತೆಯೂ ಅವರ ಮೇಲೆ ವಿಶ್ವಾಸವಿರಿಸಿದ್ದರು. ಇದೀಗ ಇಬ್ಬರೂ ನಾಯಕರು ಮೌನವಾಗುವ ಮೂಲಕ ಅನ್ಯಾಯ ಮಾಡಿದ್ದಾರೆ. ಅಲ್ಲದೇ ಯೋಜನೆಗೆ ಕಾರಣರಾದ ಮಾಜಿ ಮುಖ್ಯಮಂತ್ರಿಗಳಿಬ್ಬರು ಜಿಲ್ಲೆಗೆ ಕದ್ದುಮುಚ್ಚಿ ಆಗಮಿಸುತ್ತಿದ್ದಾರೆ. ಇವರ ವಿರುದ್ದ ಈಗಾಗಲೇ ಪ್ರತಿಭಟನೆ ನಡೆದಿದೆ. ಇನ್ನುಮುಂದೆ ಆಸ್ಕರ್, ಯಡಿಯೂರಪ್ಪ ಸಹಿತ ಮಾಜಿ ಮುಖ್ಯಮಂತ್ರಿಗಳಿಬ್ಬರ ವಿರುದ್ಧವೂ ವಿದ್ಯಾರ್ಥಿ ಸಂಘದ ಪ್ರತಿರೋಧ ನೀಡಲು ತೀರ್ಮಾನಿಸಿದೆ. ಇದೇ ವೇಳೆ ಮುಖ್ಯಮಂತ್ರಿಗಳು ಭೇಟಿ ನೀಡುವ ವೇಳೆಯೂ ಪ್ರತಿರೋಧಕ್ಕೆ ಸಿದ್ಧತೆ ನಡೆಸಿದೆ ಎಂದು ದಿನಕರ ಶೆಟ್ಟಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿದ್ಯಾಥಿ ಸಂಘದ ನಾಯಕರಾದ ಶಿಫಾಲ್‌ರಾಜ್, ಅಶ್ವತ್ ಕೊಟ್ಟಾರಿ, ಅಮಿತ್‌ರಾಜ್ ಬೇಕಲ, ಮಾಲಾ ಕೆ.ಜೆ., ನಿಶಿತ್ ದೇವಾಡಿಗ, ಶೈಲೇಶ್ ಕೋಟ್ಯಾನ್, ಪ್ರಜ್ವಲ್ ಪೂಜಾರಿ, ಕಾರ್ಯಾಧ್ಯಕ್ಷ ತುಷಾರ್ ಕದ್ರಿ, ಧನುಶ್ರೀ, ಜೀತರಾಜ್, ವಿವೇಕ್, ಅಂಕಿತ, ಅರ್ಚನಾ ಹಾಗೂ ನಝೀಮ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X