ಪುತ್ತೂರು: ನೂತನ ಕೆಎಸ್ಸಾರ್ಟಿಸಿ ಬಸ್‌ಗೆ ಚಾಲನೆ

ಪುತ್ತೂರು, ಅ.1: ಪುತ್ತೂರಿನಲ್ಲಿ ಆರಂಭಿಸಲಾದ ಕೆಸ್ಸಾರ್ಟಿಸಿಯ ಹೊಸ ಬಸ್ಸು ಸಂಚಾರಕ್ಕೆ ಶಾಸಕಿ ಶಕುಂತಳಾ ಶೆಟ್ಟಿ ಶನಿವಾರ ಪುತ್ತೂರು ಕೆಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭಾ ಆಧ್ಯಕ್ಷೆ ಜಯಂತಿ ಬಲ್ನಾಡು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಝಲ್ ರಹೀಂ, ಕಾರ್ಯದರ್ಶಿ ಮಹೇಶ್ ರೈ ಅಂಕೊತ್ತಿಮಾರು, ಯುವ ಕಾಂಗ್ರೆಸ್ ಅಧ್ಯಕ್ಷ ಮೊಯ್ದೀನ್ ಅರ್ಶದ್ ದರ್ಬೆ, ಶರದಾ ಅರಸ್, ಝೊಹರಾ ನಿಸಾರ್, ತಾಹಿರಾ ಜುಬೇರ್, ಹರೀಣಾಕ್ಷಿ ಜೆ. ಶೆಟ್ಟಿ, ರೋಶನ್ ರೈ, ಕೃಷ್ಣಪ್ರಸಾದ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.
Next Story





