Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಕೊನೆಗೂ ಸಿಕ್ಕಿಬಿದ್ದರು ಒಂದು...

ಬಂಟ್ವಾಳ: ಕೊನೆಗೂ ಸಿಕ್ಕಿಬಿದ್ದರು ಒಂದು ವರ್ಷದಿಂದ ಮಹಿಳೆಯರ ಸರ ಎಗರಿಸುತ್ತಿದ್ದ ಖದೀಮರು

ವಾರ್ತಾಭಾರತಿವಾರ್ತಾಭಾರತಿ1 Oct 2016 8:02 PM IST
share
ಬಂಟ್ವಾಳ: ಕೊನೆಗೂ ಸಿಕ್ಕಿಬಿದ್ದರು ಒಂದು ವರ್ಷದಿಂದ ಮಹಿಳೆಯರ ಸರ ಎಗರಿಸುತ್ತಿದ್ದ ಖದೀಮರು

ಬಂಟ್ವಾಳ, ಅ. 1: ಬಂಟ್ವಾಳ ವೃತ್ತ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ವರ್ಷದಿಂದ ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರಗಳನ್ನು ಕಿತ್ತು ಪರಾರಿಯಾಗುತ್ತಿದ್ದ ಪ್ರಕರಣಗಳನ್ನು ಭೇದಿಸಿರುವ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಎರಡು ಬೈಕ್, 2 ಲಕ್ಷ ರೂ. ವೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ ತಿಳಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶನಿವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ದೈಯುಂಬು ಎಂಬಲ್ಲಿನ ಬಲ್ಲೂರು ಗುಡ್ಡೆ ನಿವಾಸಿ ಬಶೀರ್ ಎಂಬವರ ಪುತ್ರ ನುಮಾನ್(20), ಕಣ್ಣೂರು ಬೀಡು ನಿವಾಸಿ ಅಬ್ದುಲ್ ಕರೀಂ ಎಂಬವರ ಪುತ್ರ ಶಬಾಝ್ (19), ಕಣ್ಣೂರು ಕುಂಡಾಲ ನಿವಾಸಿ ಬದ್ರುದ್ದೀನ್ ಎಂಬವರ ಪುತ್ರ ಶಬಾಝ್(20), ಪುದು ಗ್ರಾಮದ ಕುಂಪನಮಜಲು ನಿವಾಸಿ ಅಬ್ದುಲ್ ಲತೀಫ್ ಎಂಬವರ ಪುತ್ರ ತೌಸೀಪ್(23) ಎಂಬವರನ್ನು ಬಂಧಿಸಲಾಗಿದೆ ಎಂದರು.

ಆರೋಪಿಗಳು ಒಂದು ವರ್ಷದಿಂದ ಬಂಟ್ವಾಳ ವೃತ್ತ ವ್ಯಾಪ್ತಿಯ ಬಂಟ್ವಾಳ ನಗರ, ಗ್ರಾಮಾಂತರ, ವಿಟ್ಲ ಹಾಗೂ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿರುವ ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಎಳೆದು ಪರಾರಿಯಾಗುತ್ತಿದ್ದರು. ಒಂದು ವರ್ಷದ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯ ಅಡ್ಯಾರ್ ಪದವು ಮತ್ತು ಕಣ್ಣೂರು ಚೆಕ್ ಪೋಸ್ಟ್ ಬಳಿಯಿಂದ ಪಲ್ಸರ್ ಬೈಕ್‌ಗಳನ್ನು ಕಳ್ಳತನ ನಡೆಸಿದ್ದ ಆರೋಪಿಗಳು ಆ ಬೈಕ್‌ನಲ್ಲಿ ಸರ ಎಗರಿಸುವ ಕೃತ್ಯಕ್ಕೆ ಬಳಸುತ್ತಿದ್ದರು ಎಂದು ತಿಳಿಸಿದ ಅವರು, ಇಂದು ಬೆಳಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬೆಂಜನಪದವಿನಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ನುಮಾನ್ ಮತ್ತು ತೌಸೀಫ್‌ನನ್ನು ಬಂಧಿಸಿದ್ದಾರೆ. ಅವರು ನೀಡಿದ ಸುಳಿವಿನಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಆರೋಪಿಗಳ ಪೈಕಿ ನುಮಾನ್ ವಿರುದ್ಧ ಜಿಲ್ಲೆಯಾದ್ಯಂತ ವಿವಿಧ ಠಾಣೆಯಲ್ಲಿ 7 ಸುಳಿಗೆ, ಕನ್ನ, ಕಳವು ಪ್ರಕರಣಗಳು ದಾಖಲಾಗಿದ್ದು ಆ ಪೈಕಿ ಕೆಲವು ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನವಾಗಿ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದಾನೆ. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿರುವ ಎರಡು ಬೈಕ್‌ಗಳು, ಒಂದು ಚೂರಿ ಹಾಗೂ ಮಹಿಳೆಯರ ಕುತ್ತಿಗೆಯಿಂದ ಎರಗಿಸಿರುವ ನಾಲ್ಕು ಚಿನ್ನದ ಸರಗಳನ್ನು ವಶಪಡಿಕೊಳ್ಳಲಾಗಿದೆ. ಆರೋಪಿಗಳು ಚಿನ್ನಾಭರಣಗಳನ್ನು ಮಾರಾಟ ಮಾಡದೆ ಮನೆಯಲ್ಲೇ ಇಟ್ಟಿದ್ದರು ಎಂದು ಅವರು ತಿಳಿಸಿದರು.

ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್. ಮಾರ್ಗದರ್ಶನದಂತೆ ವೃತ್ತ ನಿರೀಕ್ಷಕ ಬಿ.ಕೆ.ಮಂಜಯ್ಯರ ನೇತೃತ್ವದಲ್ಲಿ ಗ್ರಾಮಾಂತರ ಎಸ್ಸೈ ರಕ್ಷಿತ್ ಎ.ಕೆ.ಸಿಬ್ಬಂದಿ ಜನಾರ್ದನ, ಜಗದೀಶ, ಜಯಕುಮಾರ್, ನಝೀರ್, ಸುರೇಶ್, ಪ್ರಶಾಂತ್, ಸುನಿತಾ, ಬಂಟ್ವಾಳ ವೃತ್ತ ನಿರೀಕ್ಷಕರ ತಂಡದ ಗಿರೀಶ್, ನರೇಶ್ ಹಾಗೂ ಚಾಲಕರಾದ ವಿಜಯೇಶ್ವರ ಹಾಗೂ ಜಿಲ್ಲಾ ಕಂಪ್ಯೂಟರ್ ವಿಭಾಗದ ಸಂಪತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಮತ್ತು ಸಿಬ್ಬಂದಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಎಸ್ಪಿಭೂಷಣ್ ಜಿ. ಬೊರಸೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಎಸ್ಪಿ ವೇದಮೂರ್ತಿ, ಬಂಟ್ವಾಳ ವೃತ್ತ ನಿರೀಕ್ಷಕ ಬಿ.ಕೆ.ಮಂಜಯ್ಯ, ಬಂಟ್ವಾಳ ಗ್ರಾಮಾಂತರ ಎಸ್ಸೈ ಎ.ಕೆ.ರಕ್ಷಿತ್ ಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X