Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅರ್ಚಕನಿಂದ ಬಾಲಕಿಯ ಅತ್ಯಾಚಾರ

ಅರ್ಚಕನಿಂದ ಬಾಲಕಿಯ ಅತ್ಯಾಚಾರ

ವಾರ್ತಾಭಾರತಿವಾರ್ತಾಭಾರತಿ1 Oct 2016 8:40 PM IST
share
ಅರ್ಚಕನಿಂದ ಬಾಲಕಿಯ ಅತ್ಯಾಚಾರ

ಶಿವಮೊಗ್ಗ, ಅ.1: ಪೂಜೆ ಮಾಡಿಸಲೆಂದು ಆಗಮಿಸಿದ್ದ 15 ವರ್ಷದ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದ ಕಿರಾತಕ ಅರ್ಚಕನೋರ್ವನನ್ನು ಶಿವಮೊಗ್ಗ ಮಹಿಳಾ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶನಿವಾರ ನಡೆದಿದೆ.

ಬಂಧಿತನನ್ನು ಜೈಲ್ ಸರ್ಕಲ್ ಸಮೀಪದ ಕುವೆಂಪು ರಸ್ತೆಯ ಬಳಿಯ ದುರ್ಗಾ ಚೌಡೇಶ್ವರಿ ದೇವಾಲಯದ ಅರ್ಚಕನಾಗಿರುವ ಕುಮಾರ ಯಾನೆ ತೊದ್ಲ ಕುಮಾರ (52) ಎಂದು ಗುರುತಿಸಲಾಗಿದೆ.

ಆರೋಪಿ ಕುಮಾರ ಮನೆಯ ಬಳಿಯೇ ದೇವಾಲಯವೊಂದನ್ನು ನಿರ್ಮಿಸಿಕೊಂಡು ಅಲ್ಲೇ ಅರ್ಚಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ಕೆಲ ದಿನಗಳ ಹಿಂದೆ ಆತನ ಮನೆಯಲ್ಲಿಯೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಆರೋಪಿಯ ವಿರುದ್ಧ ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಎರಡು ಪ್ರತ್ಯೇಕ ಪ್ರಕರಣಗಳು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಆಪಾದಿತನನ್ನು ನ್ಯಾಯಾಂಗ ವಶಕ್ಕೆ ಪೊಲೀಸರು ಒಪ್ಪಿಸಿದ್ದಾರೆ. ಪೊಲೀಸ್ ಉಪ ನಿರೀಕ್ಷಕಿ ಅನಿತಾ ಕುಮಾರಿ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬೆಳಕಿಗೆ ಬಂದ ಪ್ರಕರಣ

ಇತ್ತೀಚೆಗೆ ಮಹಿಳೆಯೋರ್ವರು ಪೂಜಾರಿ ಕುಮಾರನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ದೂರೊಂದನ್ನು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡ ಪಿಎಸ್ಸೈ ಅನಿತಾ ಕುಮಾರಿ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದರು. ಈ ವೇಳೆ ಆಪಾದಿತನು ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದ ಮಾಹಿತಿ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಆಪಾದಿತ ನೀಡಿದ ಮಾಹಿತಿಯ ಆಧಾರದ ಮೇಲೆ ಸಂತ್ರಸ್ತ ಬಾಲಕಿಯನ್ನು ಪಿಎಸ್ಸೈ ಅನಿತಾಕುಮಾರಿಯವರು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ಈ ವೇಳೆ ಅರ್ಚಕ ಕುಮಾರ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ತಿಳಿಸಿದ್ದಾಳೆ. ತಾಯತ ಕಟ್ಟುವುದಾಗಿ ನಂಬಿಸಿ ಪೂಜಾರಿ ಆತನ ಮನೆಯಲ್ಲಿಯೇ ತನ್ನ ಮೇಲೆ ಅತ್ಯಾಚಾರ ಎಸಗಿದ್ದ. ಬಳಿಕ ಯಾರಿಗೂ ವಿಷಯ ತಿಳಿಸದಂತೆ ಜೀವ ಬೆದರಿಕೆ ಹಾಕಿದ್ದ. ಇದರಿಂದ ಈ ವಿಷಯ ಯಾರಿಗೂ ತಿಳಿಸಿರಲಿಲ್ಲ ಎಂದು ಬಾಲಕಿ ಪೊಲೀಸರಿಗೆ ಮಾಹಿತಿ ನೀಡದ ಕಾರಣ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ವೇಳೆ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದನ್ನು ಹೇಳಿದ್ದಾಳೆ. ತದನಂತರ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿತು. ಇದರ ಆಧಾರದ ಮೇಲೆ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರದ ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಂಚನೆ

ಆಪಾದಿತ ಕುಮಾರ ಮೊದಲು ಗ್ಯಾರೇಜ್‌ವೊಂದನ್ನು ನಡೆಸುತ್ತಿದ್ದ. ಕಳೆದ ಹಲವು ವರ್ಷಗಳ ಹಿಂದೆ ತನ್ನ ಮೇಲೆ ಚೌಡೇಶ್ವರಿ ದೇವಿ ಬರುತ್ತಾಳೆ ಎಂದು ನಂಬಿಸಿ, ಭಕ್ತರ ಸಂಕಷ್ಟ ಪರಿಹರಿಸುತ್ತೇನೆ ಎಂದು ಹೇಳಿಕೊಂಡು ಗ್ಯಾರೇಜ್ ಕೆಲಸ ನಿಲ್ಲಿಸಿ ತನ್ನ ಮನೆಯ ಬಳಿಯೇ ದುರ್ಗಾ ಚೌಡೇಶ್ವರಿ ದೇವಾಲಯ ನಿರ್ಮಾಣ ಮಾಡಿ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದ. ನೂರಾರು ಭಕ್ತರು ತಮ್ಮ ಸಂಕಷ್ಟ ಪರಿಹಾರಕ್ಕಾಗಿ ಈತನ ದೇವಾಲಯ ಮತ್ತು ಮನೆಗೆ ಬಂದು ಹೋಗುತ್ತಿದ್ದರು. ಈ ವೇಳೆ ಅಮಾಯಕ ಮಹಿಳೆಯರನ್ನು ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಳ್ಳುತ್ತಿದ್ದ ಎಂಬ ಮಾಹಿತಿ ತಿಳಿದು ಬಂದಿದೆ.

ದೂರು ನೀಡಲು ಮಹಿಳೆಯರ ಹಿಂದೇಟು...?!

ಪೊಲೀಸರ ವಿಚಾರಣೆಯ ವೇಳೆ ಆರೋಪಿ ಹಲವು ಮಹಿಳೆಯರನ್ನು ತನ್ನ ಕಾಮತೃಷೆಗೆ ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆದರೆ, ಕೆಲ ಸಂತ್ರಸ್ತ ಮಹಿಳೆಯರು ಈತನ ವಿರುದ್ಧ ದೂರು ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪೊಲೀಸ್ ಇಲಾಖೆಯ ಮೂಲಗಳು ಪತ್ರಿಕೆಗೆ ಮಾಹಿತಿ ನೀಡಿದೆ. ಪ್ರಕರಣ ಬಯಲಾಗುತ್ತಿದ್ದಂತೆಯೇ ದೌರ್ಜನ್ಯಕ್ಕೊಳಗಾದ ಕೆಲವು ಮಹಿಳೆಯರು ಪೂಜಾರಿಯ ವಿರುದ್ಧ ದೂರು ನೀಡಲು ಮುಂದೆ ಬಂದಿದ್ದಾರೆ ಎನ್ನಲಾಗಿದ್ದು, ಇನ್ನಷ್ಟೆ ಇದು ದೃಢವಾಗಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X