ಮಿತ್ತಬೈಲು ಶಾದಿಮಹಲ್‌ಗೆ ಹೆಚ್ಚುವರಿ ಅನುದಾನಕ್ಕೆ ಮುಖ್ಯಮಂತ್ರಿಗೆ ಮನವಿ,

ವಿಟ್ಲ, ಅ.3: ಬಿ.ಸಿ.ರೋಡು-ಮಿತ್ತಬೈಲು ಮುಹಿಯುದ್ದೀನ್ ಜುಮಾ ಮಸೀದಿ ಅಧೀನದಲ್ಲಿ ಸುಮಾರು 3.5 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾದಿಮಹಲ್‌ಗೆ ಸರಕಾರದಿಂದ ಹೆಚ್ಚುವರಿ ಅನುದಾನ ನೀಡುವಂತೆ ಮಸೀದಿಯ ಅಧ್ಯಕ್ಷರ ನಿಯೋಗ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ಮನವಿ ಸಲ್ಲಿಸಿತು. ನಿಯೋಗದಲ್ಲಿ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷ ಹಬೀಬುಲ್ಲಾ, ಪ್ರ.ಕಾರ್ಯದರ್ಶಿ ಮುಹಮ್ಮದ್ ಅದ್ದೇಡಿ, ಸದಸ್ಯರಾದ ಹಮೀದ್ ಹಾಜಿ ಕೆ., ಸೈಯದ್ ಫಳುಲ್ ತಂಙಳ್, ಬಂಟ್ವಾಳ ಪುರಸಭಾ ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಸದಸ್ಯ ಮುಹಮ್ಮದ್ ಶರೀಫ್ ಉಪಸ್ಥಿತರಿದ್ದರು.
Next Story





