ದೇವೇಗೌಡರ ‘ಗಾಂಧಿಗಿರಿ’ಗೆ ಸದನದ ಅಭಿನಂದನೆ, ಕೇಂದ್ರದ ಕಳಕಳಿಗೂ ಧನ್ಯವಾದ
ಬೆಂಗಳೂರು, ಅ.3: ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧ ನ್ಯಾಯಾಲಯದ ಆದೇಶವನ್ನು ವಿರೋಧಿಸಿ ಮಾಜಿ ಪ್ರಧಾನಿ ದೇವೇಗೌಡ ನಡೆಸಿದ ಸತ್ಯಾಗ್ರಹಕ್ಕೆ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ರಚನೆ ನಿರ್ಧಾರದಿಂದ ಹಿಂದೆ ಸರಿದ ಪ್ರಧಾನಿ ಮೋದಿ ಅವರನ್ನು ವಿಧಾನಸಭೆಯಲ್ಲಿ ಒಕ್ಕೊರಲಿನಿಂದ ಅಭಿನಂದಿಸಲಾಯಿತು.
ಸೋಮವಾರ ವಂದೇ ಮಾತರಂ ಗೀತೆಯೊಂದಿಗೆ ಬೆಳಗ್ಗೆ 11:40ರ ಸುಮಾರಿಗೆ ಆರಂಭಗೊಂಡ ವಿಧಾನಸಭೆ ಅಧಿವೇಶದಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೇಂದ್ರ ಸರಕಾರ ಅಟಾರ್ನಿ ಜನರಲ್ ಮೂಲಕ ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿದೆ ಎಂದು ಮಾಹಿತಿ ನೀಡಿದರು.
ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು, ಪ್ರಧಾನಿ ಮೋದಿಯವರು ಕಳಕಳಿಯಿಂದ ಕರ್ನಾಟಕ ನಿರ್ವಹಣಾ ಮಂಡಳಿ ತೂಗುಗತ್ತಿಯಿಂದ ಪಾರಾದಂತೆ ಆಗಿದೆ ಎಂದ ಅವರು, ಕೇಂದ್ರ ಸರಕಾರ ಹಾಗೂ ಪ್ರಧಾನಿ ಮೋದಿಯವರಿಗೆ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದರು.ಹಂತದಲ್ಲಿ ಮಧ್ಯ ಪ್ರವೇಶಿಸಿದ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ವೈಎಸ್‌ವಿ ದತ್ತ, ಕೇಂದ್ರ ಸರಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆಯಿಂದ ಹಿಂದೆೆ ಸರಿಯಲು ಗಾಂಧಿ ಮಾರ್ಗದಲ್ಲಿ ದೇವೇಗೌಡ ಅಹಿಂಸಾ ಸತ್ಯಾಗ್ರಹ ನಡೆಸಿದ್ದೇ ಕಾರಣ. ಗೌಡರ ನೈತಿಕ ಒತ್ತಡದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಕ್ರಮ ಕೈಗೊಂಡಿದೆ ಎಂದರು. ಇದಕ್ಕೆ ಬಿಜೆಪಿ ಸದಸ್ಯರು ಏರಿದ ಧ್ವನಿಯಲ್ಲಿ ಹೋ..ಎಂದು ಕೂಗುವ ಮೂಲಕ ಲೇವಡಿ ಮಾಡಿದರು.ೂಡಲೇ ಮಧ್ಯ ಪ್ರವೇಶಿಸಿ ಆರೋಗ್ಯ ಸಚಿವ ಕೆ.ಆರ್.ರಮೇಶ್ ಕುಮಾರ್, ಮಾಜಿ ಪ್ರಧಾನಿ ದೇವೇಗೌಡ ತಮ್ಮ ಈ ಇಳಿ ವಯಸ್ಸಿನಲ್ಲಿ ರಾಜ್ಯದ ಹಿತದೃಷ್ಟಿಯಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಅದೇ ರೀತಿ ದೇಶದ ಪ್ರಧಾನಿ ಮೋದಿಯವರು ರಾಜ್ಯದ ನೆರವಿಗೆ ಧಾವಿಸಿದ್ದಾರೆ. ಹೀಗಾಗಿ ನಮ್ಮ ಪಕ್ಷದ ನೆಲೆಯಲ್ಲಿ ವಿಶ್ಲೇಷಣೆ ಸರಿಯಲ್ಲ ಎಂದರು.ೇಂದ್ರ ಸರಕಾರ ಅಟಾರ್ನಿ ಜನರಲ್ ಮೂಲಕ ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿದ್ದು, ದೇವೇಗೌಡ ಮತ್ತು ಪ್ರಧಾನಿ ಮೋದಿಗೆ ರಾಜ್ಯದ ಜನತೆ ಮತ್ತು ನಾವೆಲ್ಲರೂ ಋಣಿಯಾಗಿರಬೇಕು ಎಂದಾಗ ಆಡಳಿತ ಮತ್ತು ವಿಪಕ್ಷ ಸದಸ್ಯರೆಲ್ಲ ಮೇಜು ಕುಟ್ಟಿ ಸ್ವಾಗತಿಸಿದರು.
ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ತಮ್ಮ ಪಕ್ಷಗಳನ್ನು ಮೀರಿ ಬೆಳೆದಿರುವ ನಮ್ಮ ರಾಷ್ಟ್ರದ ನಾಯಕರು. ಅವರನ್ನು ಇನ್ನು ಎತ್ತರಕ್ಕೆ ಬೆಳೆಸಬೇಕೇ ಹೊರತು ಪಕ್ಷಗಳಿಗೆ ಸೀಮಿತಗೊಳಿಸುವ ಸಣ್ಣತನ ಸರಿಯಲ್ಲ ಎಂದು ಆಕ್ಷೇಪಿಸಿದ ಅವರು, ರಾಜ್ಯದ ಜನತೆಯ ಹಿತ ಕಾಪಾಡುವುದು ನಮ್ಮ ಮುಖ್ಯ ಉದ್ದೇಶ ಆಗಬೇಕೆಂದರು.
ಇದಕ್ಕೆ ಧ್ವನಿಗೂಡಿಸಿದ ಸ್ಪೀಕರ್ ಕೆ.ಬಿ.ಕೋಳಿವಾಡಿ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿ ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯದ ಹಿತರಕ್ಷಣೆಗೆ ಹೋರಾಟ ನಡೆಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಲಾಗುವುದೆಂದು ಪ್ರಕಟಿಸಿ, ಕಲಾಪವನ್ನು ಕೆಲಕಾಲ ಮುಂದೂಡಿದರು.





