Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಗೋ ಭಯೋತ್ಪಾದನೆ ಹೆಚ್ಚುತ್ತಿದೆ: ದೇವನೂರು...

ಗೋ ಭಯೋತ್ಪಾದನೆ ಹೆಚ್ಚುತ್ತಿದೆ: ದೇವನೂರು ಮಹಾದೇವ

ವಾರ್ತಾಭಾರತಿವಾರ್ತಾಭಾರತಿ4 Oct 2016 5:35 PM IST
share
ಗೋ ಭಯೋತ್ಪಾದನೆ ಹೆಚ್ಚುತ್ತಿದೆ: ದೇವನೂರು ಮಹಾದೇವ

ಬೆಂಗಳೂರು, ಅ.4: ಭಾರತದಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ಅದರ ಜೊತೆಗೆ ಇಂದು ನಕಲಿ ಗೋ ರಕ್ಷಕರಿಂದ ಗೋ ಭಯೋತ್ಪಾದನೆ ಹೆಚ್ಚುತ್ತಿದೆ. ವಿಶ್ವಕ್ಕೆ ಹೊಸದೊಂದು ಗೋ ಭಯೊತ್ಪಾದನೆಯನ್ನು ಭಾರತ ನೀಡುತ್ತಿದೆ. ಭಾರತದಲ್ಲಿ ಸತ್ತಿರುವ ಪ್ರೇತಾತ್ಮಗಳು ಹೆಚ್ಚು ಕ್ರಿಯಾಶೀಲವಾಗಿವೆ. ಅವು ಮನುಷ್ಯನ ಮೈದುಂಬಿಕೊಂಡು ಚೇಷ್ಟೆ ಮಾಡುತ್ತಿವೆ. ಇಂದು ಬದುಕಿರುವವರು ಎಚ್ಚರಗೊಳ್ಳಬೇಕಿದೆ. ಪ್ರಜ್ಞೆ ಪಡೆದುಕೊಳ್ಳಬೇಕಿದೆ. ಇಲ್ಲದೆ ಇದ್ದರೆ ಯಾರು ಬದುಕಿದ್ದಾರೆ ಯಾರು ಸತ್ತಿದ್ದಾರೆ ಗೊತ್ತಾಗುವುದಿಲ್ಲ ಎಂದು ದೇವನೂರು ಮಹಾದೇವ ಹೇಳಿದರು.

ಅವರು  ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಚಲೋ ಉಡುಪಿ -ಸ್ವಾಭಿಮಾನಿ ಸಂಘರ್ಷ ಜಾಥಾದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಭಾರತದಲ್ಲಿ ಒಂದು ಆತ್ಮ ತುಂಡು ಬಿದ್ದಿದೆ. ಅದು ವರ್ಷಕ್ಕೊಮ್ಮೆ ಭೂಮಿ ಮೇಲಕ್ಕೆ ಬರುತ್ತದೆ. ಅದು ಯಾವುದಪ್ಪ ಅಂದರೆ ಬಲಿ ಚಕ್ರವರ್ತಿ. ಒಂದು ಮಲೆಯಾಳಂನ ಒಣಂ ಪದ್ಯದ ಪ್ರಕಾರ ಬಲಿ ರಾಜ್ಯವಾಳುವಾಗ ಎಲ್ಲರೂ ಸಮಾನರಾಗಿದ್ದರು. ಅವರಿಗೆ ಕೆಡಕು ಆಗುತ್ತಿರಲಿಲ್ಲ. ಆ ಕಾಲದಲ್ಲಿ ಸುಳ್ಳು ಆಸ್ವಾಶನೆಗಳು ಇರಲಿಲ್ಲ ಮತ್ತು ವಂಚನೆ ಇರಲಿಲ್ಲ. ಎಲ್ಲಾ ಜನ ಸೇರಿ ಒಂದೇ ಜಾತಿಯಾಗಿದ್ದರು. ಇದೊಂದು ಹಾಡು ಸಾಕು ನಮಗೆ ನಾಡು ಕಟ್ಟಲಿಕ್ಕೆ. ಇಂತಹ ಬಲಿ ಚಕ್ರವರ್ತಿಯನ್ನು ಭಾರತ ತುಳಿದು ಹಾಕಿ ಬಿಟ್ಟಿದೆ. ನಾನು ಯೋಚನೆ ಮಾಡಿದೆ. ಏನೇನು ಇರಬಹುದು ಆವಾಗ ಅಂತ. ಮಾತಿಗೆ ತಪ್ಪದ, ವಚನಭ್ರಷ್ಟನಾಗದ ಬಲಿ ಚಕ್ರವರ್ತಿಯನ್ನು ಒಂದು ಮುಗ್ಧ ಮಗುವಿನ ಮೂಲಕ ಮಾತಿಗೆ ಸಿಕ್ಕಿಸಿಬಿಟ್ಟು, ವಶ ತಗೊಂಡು ಆತನನ್ನು ನೆಲಮಾಳಿಗೆಯಲ್ಲಿಟ್ಟಿಬಿಟ್ಟರು. ಜನಸಮುದಾಯ ಭುಗಿಲೆದ್ದಾಗ ಅವರ ಆಕ್ರೋಶ ತಣಿಸಲಿಕ್ಕೆ ಆಯ್ತಪ್ಪ ವರ್ಷಕ್ಕೊಮ್ಮೆ ಬಂದು ಮುಖ ತೋರಿಸ್ತಾನೆ ಅಂತ ಜನಗಳಿಗೆ ಹೇಳಿ ಸಮಾಧಾನ ಮಾಡಿದ್ದಾರೆ. ಆ ಬಲಿ ಚಕ್ರವರ್ತಿ ಒಣಂ ದಿನ ಸಂಭ್ರಮದಿಂದ ನೃತ್ಯ ಮಾಡುತ್ತಾರೆ. ನೀವು ನನ್ನನ್ನು ಹೊರಗಡೆ ಬಿಡುವ ದಿನ ಯಾರು ಅಳಬಾರದು ಎಂದಿದ್ದಾನೆ. ಅಂತಹ ದೊಡ್ಡ ವ್ಯಕ್ತಿತ್ವ ಆತನದು. ಇಂದು ಭಾರತದಲ್ಲಿ ಪ್ರೀತಿಸಲು ಸಹ ಬಿಡದ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ನೀವು ಹೊಸ ಅಕ್ಷರಗಳನ್ನು ಬರೆಯುತ್ತಿದ್ದೀರಿ ಎಂದರು. 

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X