Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ತುಪ್ಪ ತಿಂದವರಿಂದ ದೇಶ ಅವನತಿ :...

ತುಪ್ಪ ತಿಂದವರಿಂದ ದೇಶ ಅವನತಿ : ನಿಜಗುಣಾನಂದ ಸ್ವಾಮೀಜಿ

‘ಉಡುಪಿ ಚಲೋ’ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ4 Oct 2016 7:12 PM IST
share
ತುಪ್ಪ ತಿಂದವರಿಂದ ದೇಶ ಅವನತಿ : ನಿಜಗುಣಾನಂದ ಸ್ವಾಮೀಜಿ

ಪುರೋಹಿತಶಾಹಿಗಳಿಂದ ದೇವರು, ಧರ್ಮದ ಮಹತ್ವ ಹಾಳು: ನಿಜಗುಣಾನಂದ ಸ್ವಾಮೀಜಿ

ಬೆಂಗಳೂರು, ಸೆ.3: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು ಎಂಬ ಹಾಡಿಗೆ ಅನ್ವರ್ಥವಾಗುವಂತೆ ನಗರದ ಫ್ರೀಡಂಪಾರ್ಕ್‌ನಲ್ಲಿ ದಲಿತ ದಮನಿತರ ಹೋರಾಟ ಸಮಿತಿ ಹಮ್ಮಿಕೊಂಡಿದ್ದ ‘ಉಡುಪಿ ಚಲೋ’ ಸ್ವಾಭಿಮಾನಿ ಸಂಘರ್ಷ ಜಾಥಾಕ್ಕೆ ಯುವಕರ ದಂಡು ಘೋಷಣೆ ಕೂಗುತ್ತಾ ಕಾರ್ಯಕ್ರಮಕ್ಕೆ ಆಗಮಿಸಿದರು.

ಜೈ ಭೀಮ್, ಲಾಲ್ ಸಲಾಮ್ ಘೋಷಣೆಗಳನ್ನು ಕೂಗುತ್ತಾ ತಂಡೋಪತಂಡವಾಗಿ ಆಗಮಿಸಿದ ಯುವಕರ ಗುಂಪು ಫ್ರೀಡಂ ಪಾರ್ಕ್‌ನಲ್ಲಿ ಒಟ್ಟಾದರು. ನಂತರ ಮೂಲಭೂತವಾದಿಗಳಿಂದ ಹತ್ಯೆಗೊಳಗಾದ ದಾಭೋಲ್ಕರ್, ಗೋವಿಂದ ಪನ್ಸಾರೆ ಹಾಗೂ ಎಂ.ಎಂ.ಕಲಬುರ್ಗಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಮುದಾಯ ರಂಗ ಕಲಾವಿದರು ‘ಫ್ರಿಜ್‌ನಲ್ಲಿ ಏನಿದೆ’ ಬೀದಿ ನಾಟಕವನ್ನು ಪ್ರದರ್ಶಿಸಿದರು.

ಯುವ ಮುನ್ನಡೆ, ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದವರಿಗೆ ಹೋರಾಟದ ಕಿಚ್ಚನ್ನು ಹತ್ತಿಸಿದರು. ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್, ಹಿರಿಯ ಸಾಹಿತಿ ದೇವನೂರ ಮಹಾದೇವ ಸೇರಿದಂತೆ ಹಲವು ಗಣ್ಯರು ಡೋಲು ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ನಂತರ ಮಂಡ್ಯದ ಯುವತಿಯರು ಡೋಲು ಬಾರಿಸಿ ಜಾಥಾಕ್ಕೆ ಹೊಸ ಸಂಚಲನ ಮೂಡಿಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಮಾತನಾಡಿ, 2011ನೆ ಜನಗಣತಿ ಪ್ರಕಾರ ರಾಜ್ಯದಲ್ಲಿ ಶಾಲೆ, ಕಾಲೇಜು, ಕಾರ್ಖಾನೆಗಳು, ಆಸ್ಪತ್ರೆಗಳಿಗಿಂತ ದೇವಸ್ಥಾನಗಳ ಸಂಖ್ಯೆ ಹೆಚ್ಚಿವೆ ಎಂಬ ಆತಂಕಕಾರಿ ಅಂಶ ವರದಿಯಾಗಿದೆ. ಈ ಮೂಲಕ ನಮ್ಮ ಸರಕಾರಗಳು ಯಾರಿಗೆ ಹಾಗೂ ಎಂತಹ ವಿಚಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಡುತ್ತಿವೆ ಎಂದು ಗೊತ್ತಾಗುತ್ತದೆ ಎಂದು ತಿಳಿಸಿದರು.

ದೇಶದಲ್ಲಿ ಅತಿ ದೊಡ್ಡ ಸಂಖ್ಯೆಯಲ್ಲಿದ್ದ ರೈತರು ಕುಸಿದು, ರೈತ ಕೂಲಿಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ. ಶೇ.94ರಷ್ಟು ಮಂದಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿದ್ದು, ಇವರ ಬದುಕಿಗೆ ಯಾವುದೆ ಭದ್ರತೆ ಇಲ್ಲವಾಗಿದೆ. ಹಾಗೂ ಇವರಲ್ಲಿ ಬಹುತೇಕ ಮಂದಿ ದಲಿತರೆ ಆಗಿದ್ದಾರೆ ಎಂದು ಮಾಹಿತಿ ನೀಡಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಲಿತರ ಮೇಲೆ ದೌರ್ಜನ್ಯ ಅವ್ಯಾಹತವಾಗಿ ನಡೆಯುತ್ತಿದೆ. ರಾಜಸ್ಥಾನದಲ್ಲಿ ಶೇ.6ರಷ್ಟಿರುವ ದಲಿತರ ಮೇಲೆ ಹಲ್ಲೆಗಳು ಹೆಚ್ಚಾಗಿವೆ. ದೇಶದಲ್ಲಿ 15 ನಿಮಿಷಕ್ಕೊಂದು ದಲಿತ ಮಹಿಳೆಯರ ಮೇಲೆ ಅತ್ಯಾಚಾರ ನಡೆದರೆ, ಗಂಟೆಗೆ ಒಂದರಂತೆ ಕೊಲೆಯಾಗುತ್ತಿದೆ ಎಂದು ರವಿವರ್ಮ ಕುಮಾರ್ ಆತಂಕ ವ್ಯಕ್ತಪಡಿಸಿದರು.

ಪೈಲೂರು ಮಠದ ನಿಜಗುಣಾನಂದ ಸ್ವಾಮೀಜಿ ಮಾತನಾಡಿ, ಪುರೋಹಿತಶಾಹಿಗಳು ದೇವರು, ಧರ್ಮದ ಮಹತ್ವವನ್ನು ಹಾಳುಮಾಡುತ್ತಿದ್ದಾರೆ. ಇಂತಹದ್ದೆ ಆಹಾರವನ್ನು ತಿನ್ನಬೇಕೆಂದು ಯಾವ ಧರ್ಮದಲ್ಲೂ ತಿಳಿಸಿಲ್ಲ. ಆದರೆ, ಸಂಪತ್ತು ಹಾಗೂ ಜ್ಞಾನವನ್ನು ಬಚ್ಚಿಟ್ಟುಕೊಂಡಿರುವ ಪುರೋಹಿಶಾಹಿಗಳು ಕುತಂತ್ರದಿಂದ ಆಹಾರದ ಹಕ್ಕಿನ ಮೇಲೆ ದಬ್ಬಾಳಿಕೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶೇ.1ರಷ್ಟಿರುವ ಮಂದಿ ಶೇ.99ರಷ್ಟರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ದಲಿತರು, ದಮನಿತರು ಹಾಗೂ ಅಲ್ಪಸಂಖ್ಯಾತರು ಚಿಂತಿಸಬೇಕು. ಹಾಗೂ ಒಗ್ಗಟ್ಟಾಗುವ ಮೂಲಕ ಮೂಲಭೂತವಾದಿಗಳಿಗೆ ಕಡಿವಾಣ ಹಾಕಬೇಕು. ಹೀಗಾಗಿ ಯುವಜನತೆಯೆ ಸೇರಿ ಮಾಡುತ್ತಿರುವ ಉಡುಪಿ ಚಲೋ ಜಾಥಾಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಚಿಂತಕ ದೇವನೂರ ಮಹಾದೇವ, ಸಂಶೋಧಕ ರಹಮತ್ ತರೀಕೆರೆ, ಅಂಬೇಡ್ಕರ್‌ವಾದಿ ಚಿಂತಕಿ ಇಂದಿರಾ ಕೃಷ್ಣಪ್ಪ, ಶಾಸಕ ಪುಟ್ಟಣ್ಣಯ್ಯ, ದಸಂಸ ಮಾವಳ್ಳಿ ಶಂಕರ್, ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಉಪಸ್ಥಿತರಿದ್ದರು.

ತುಪ್ಪ ತಿಂದವರಿಂದ ದೇಶ ಅವನತಿ

ದೇಶದಲ್ಲಿ ಹಲವು ಸಮಸ್ಯೆಗಳು ತಾಂಡವವಾಡುತ್ತಿದ್ದು ಅವನತಿಯತ್ತ ಸಾಗುತ್ತಿರುವುದಕ್ಕೆ ತುಪ್ಪ ತಿಂದ ಪುರೋಹಿತಶಾಹಿಗಳು ಕಾರಣವೆ ಹೊರತು ಮಾಂಸ ತಿಂದ ದಲಿತ, ಅಲ್ಪಸಂಖ್ಯಾತರಿಂದಲ್ಲ. ಹೀಗಾಗಿ ದೇಶವನ್ನು ಪುರೋಹಿತಶಾಹಿಗಳ ಬಿಗಿಮುಷ್ಟಿಯಿಂದ ಮುಕ್ತಿಗೊಳಿಸಬೇಕಾಗಿದೆ.

-ನಿಜಗುಣಾನಂದ ಸ್ವಾಮೀಜಿ, ಪೈಲೂರು ಮಠ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X