Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೈಕ್‌ನಲ್ಲೇ ಮೂರು ದೇಶಗಳನ್ನು ಸುತ್ತಿದ...

ಬೈಕ್‌ನಲ್ಲೇ ಮೂರು ದೇಶಗಳನ್ನು ಸುತ್ತಿದ ಸ್ನೇಹಿತರು

ವಾರ್ತಾಭಾರತಿವಾರ್ತಾಭಾರತಿ4 Oct 2016 8:59 PM IST
share
ಬೈಕ್‌ನಲ್ಲೇ ಮೂರು ದೇಶಗಳನ್ನು ಸುತ್ತಿದ ಸ್ನೇಹಿತರು

ಕಾಸರಗೋಡು, ಅ.4: ಕಾಸರಗೋಡು ಮೂಲದ ಇಬ್ಬರು ಸ್ನೇಹಿತರು  ಬೈಕ್‌ನಲ್ಲಿ ಮೂರು ದೇಶಗಳನ್ನು ಸುತ್ತುವ ಮೂಲಕ ಗಮನ ಸೆಳೆದಿದ್ದಾರೆ.

ಕಾಸರಗೋಡು ಅಡೂರಿನ ಕೆ.ಎಚ್.ಜಾಫರ್ ಮತ್ತು ಕೋಝಿಕ್ಕೋಡ್‌ನ ಶಬರಿನಾಥ್ ಈ ಸಾಧನೆ ಮಾಡಿದವರು. 50 ದಿನಗಳ ಅವಧಿಯಲ್ಲಿ ಇವರು ಯಮಹಾ ಬೈಕ್‌ನಲ್ಲಿ ಭಾರತ, ನೇಪಾಳ ಮತ್ತು ಭೂತಾನ್ ದೇಶ ಸುತ್ತಿದ ಸಾಧನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮ್ಯಾನೇಜ್ಮೆಂಟ್ ಅಧ್ಯಯನ ಮಾಡುತ್ತಿದ್ದ ಇವರಿಗೆ ಬೈಕ್‌ನಲ್ಲಿ ವಿದೇಶಗಳನ್ನು ಸುತ್ತಬೇಕೆಂಬುದು ಕನಸಾಗಿತ್ತು. ಅಧ್ಯಯನದ ನಡುವೆ ಸ್ವಲ್ಪ ಸಮಯಾವಕಾಶ ಲಭಿಸಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಈ ಇಬ್ಬರು ಸ್ನೇಹಿತರು ಒಟ್ಟು 50 ದಿನಗಳಲ್ಲಿ ಮೂರು ದೇಶಗಳನ್ನು ಸುತ್ತಿ ಬಂದಿದ್ದಾರೆ.

ಕಾಸರಗೋಡಿನಿಂದ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳಿದ ಇವರು ಅಲ್ಲಿಂದ ಹಂಪಿ, ಔರಂಗಾಬಾದ್ ಮೂಲಕ ಇಂಡಿಯಾ ಗೇಟ್ ತಲುಪಿದರು. ಅಲ್ಲಿಂದ ಕುಲು ಮನಾಲಿ ಮೂಲಕ ಲಡಾಖ್‌ಗೆ ಪ್ರಯಾಣ ಬೆಳೆಸಿದರು. ಮರುದಿನ ಗೋರಖ್‌ಪುರದ ಮೂಲಕ ನೇಪಾಳಕ್ಕೆ ಪ್ರವೇಶಿಸಿದರು. ಬಳಿಕ ಕಾಠ್ಮಂಡುವಿನಿಂದ ಡಾರ್ಜಿಲಿಂಗ್‌ಗೆ ತೆರಳಿದ್ದು, ಅಲ್ಲಿಂದ ಭೂತಾನ್‌ಗೆ ಪ್ರವೇಶಿಸಿದರು.

ಅಂದಹಾಗೆ ಮನೆಮಂದಿ ಬೈಯಬಹುದು ಎನ್ನುವ ಕಾರಣಕ್ಕಾಗಿ ಮನೆಮಂದಿಯ ಬಳಿ ಇವರು ಪ್ರವಾಸದ ವಿಷಯವನ್ನು ಮುಚ್ಚಿಟ್ಟಿದ್ದರು. 50 ದಿನಗಳ ಇವರ ಪ್ರವಾಸಕ್ಕೆ ತಗಲಿದ್ದು 90 ಸಾವಿರ ರೂ. ಮಾತ್ರ.

ಹಲವಡೆ ನಮಗೆ ಉತ್ತಮ ಸ್ವಾಗತ ಲಭಿಸಿದೆ. ಇದು ನಮ್ಮ ಜೀವನದ ಕನಸಾಗಿತ್ತು. ಇನ್ನಷ್ಟು ದೇಶವನ್ನು ಮುಂದೆ ಸುತ್ತುವ ಬಗ್ಗೆಯೂ ಯೋಚನೆ ಮಾಡುತ್ತಿದ್ದೇವೆ ಎನ್ನುವುದು ಈ ಇಬ್ಬರ ಮಾತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X