ಕೊಡಗಿಗೆ ಬಯಲು ಶೌಚ ಮುಕ್ತ ಜಿಲ್ಲೆ ಪ್ರಶಸ್ತಿ

ಮಡಿಕೇರಿ, ಅ.4: ಕೊಡಗನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡಿದ್ದು, ಈ ಸಂಬಂಧ ಇತ್ತೀಚೆಗೆ ದಿಲ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಾರುಲತಾ ಸೋಮಲ್ ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯನಾಯ್ಡು ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಗೋಯಲ್ ಪ್ರಮಾಣ ಪತ್ರವನ್ನು ವಿತರಿಸಿದರು. ರಾಷ್ಟ್ರದಲ್ಲಿ 27 ಜಿಲ್ಲೆಗಳನ್ನು ಬಯಲು ಬಹಿರ್ದೆಸೆ ಮುಕ್ತವೆಂದು ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ 5 ಜಿಲ್ಲೆಗಳನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಒಳಗೊಂಡಿವೆ.
Next Story





