Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಶ್ವವಿದ್ಯಾನಿಲಯಗಳ ಕಾಯ್ದೆಗೆ...

ವಿಶ್ವವಿದ್ಯಾನಿಲಯಗಳ ಕಾಯ್ದೆಗೆ ತಿದ್ದುಪಡಿ ಅಗತ್ಯ: ಐವನ್ ಡಿಸೋಜ

ವಾರ್ತಾಭಾರತಿವಾರ್ತಾಭಾರತಿ5 Oct 2016 9:25 PM IST
share
ವಿಶ್ವವಿದ್ಯಾನಿಲಯಗಳ ಕಾಯ್ದೆಗೆ ತಿದ್ದುಪಡಿ ಅಗತ್ಯ: ಐವನ್ ಡಿಸೋಜ

ಮಂಗಳೂರು, ಅ.5: ವಿಶ್ವವಿದ್ಯಾನಿಲಯಗಳ ಕಾಯ್ದೆಗೆ ಸಕಾಲದಲ್ಲಿ ತಿದ್ದುಪಡಿ ಅಗತ್ಯವಿದೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.

ಅವರು ಇಂದು ಮಂಗಳೂರು ವಿಶ್ವವಿದ್ಯಾನಿಲಯದ ಸಂಧ್ಯಾ ಕಾಲೇಜಿನ ನೂತನ ಕೋರ್ಸ್‌ಗಳ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಮಾತನಾಡುತ್ತಿದ್ದರು.

2000ನೆ ಇಸವಿಯ ನಂತರ ವಿಶ್ವ ವಿದ್ಯಾನಿಲಯ ಕಾಯ್ದೆಗೆ ತಿದ್ದುಪಡಿಯಾಗಿಲ್ಲ. ಪರಿಣಾಮವಾಗಿ ಬಹಳ ಹಿಂದಿನ ನಿಯಮಗಳನ್ನು ವಿಶ್ವವಿದ್ಯಾನಿಲಯಗಳು ಅನುಸರಿಸಿಕೊಂಡು ಬರುತ್ತಿವೆ. ಪ್ರಸಕ್ತ ಕಾಲ ಘಟ್ಟದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗುರುತಿಸದೆ ವಿಶ್ವವಿದ್ಯಾನಿಲಯಗಳು ಹಿಂದಿನ ಕ್ರಮದಲ್ಲಿ ಮುಂದುವರಿಯುತ್ತಿರುವ ಕಾರಣ ಹಲವು ವಿಷಯಗಳನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಸವಾಲುಗಳನ್ನು ಎದುರಿಸಲು ಪೂರಕವಾದ ವಾತವರಣವನ್ನು ವಿಶ್ವ ವಿದ್ಯಾನಿಲಯಗಳು ಕಲ್ಪಿಸಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯಗಳ ಕಾಯ್ದೆಯನ್ನು ಪ್ರತಿ ಆರು ತಿಂಗಳಿಗೊಮ್ಮೆಯಾದರೂ ತಿದ್ದುಪಡಿಯಾಗಬೇಕಾದ ಅಗತ್ಯವಿದೆ ಎಂದು ಐವನ್ ಡಿಸೋಜ ತಿಳಿಸಿದರು.

ಕ್ರೀಡಾ ಚಟುವಟಿಕೆ ಕುಂಠಿತ

ವಿಶ್ವ ವಿದ್ಯಾನಿಲಯಗಳ ಸೆಮಿಸ್ಟರ್ ಪದ್ಧತಿಯ ಪರಿಣಾಮವಾಗಿ ವಿದ್ಯಾರ್ಥಿಗಳಿಗೆ ಕ್ರೀಡಾಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ದೂರಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡುವ ಪದ್ಧತಿ ಜಾರಿಗೆ ಬರಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸಮಗ್ರ ಕ್ರೀಡಾ ನೀತಿ ಜಾರಿಯಾಗಬೇಕಾಗಿದೆ ಎಂದು ಐವನ್ ತಿಳಿಸಿದರು.

ಸಂಧ್ಯಾ ಕಾಲೇಜಿನ ಆರಂಭದಿಂದ ವಿದ್ಯಾರ್ಥಿಗಳು ಗಳಿಕೆಯೊಂದಿಗೆ ಕಲಿಕೆಯನ್ನು ಮುಂದುವರಿಸಬಹುದಾಗಿದೆ. ಪ್ರಸಕ್ತ ಉನ್ನತ ಶಿಕ್ಷಣ ಮುಂದುವರಿಸುವವರ ಸಂಖ್ಯೆ ಕಡಿಮೆ ಇದೆ. ಇದು ಉತ್ತಮ ಗೊಳ್ಳಲು ಮಾನವ ಸಂಪನ್ಮೂಲದ ಅಭಿವೃದ್ಧಿಗೆ ಸಂಧ್ಯಾ ಕಾಲೇಜು ಪೂರಕ ಎಂದರು.

ಕಾಲೇಜಿಗೆ ಸೇರಬೇಕೆಂಬ ಕನಸು ನನಸಾಗಿದೆ

ಮಂಗಳೂರಿನಲ್ಲಿ ರಸ್ತೆ ಬದಿಯಲ್ಲಿ ವ್ಯಾಪಾರ ವೃತ್ತಿಯಲ್ಲಿ ತೊಡಗಿಕೊಂಡ ನನಗೆ ಮಂಗಳೂರು ಕಾಲೇಜಿನಲ್ಲಿ ಓದಬೇಕು, ಪತ್ರಕರ್ತನಾಗಬೇಕು ಎಂಬ ಕನಸಿತ್ತು. ಆದರೆ ಹಗಲು ಹೊತ್ತು ದುಡಿಮೆ ಅನಿವಾರ್ಯವಾಗಿತ್ತು. ಅದೇ ಸಂದರ್ಭದಲ್ಲಿ ಸಂಧ್ಯಾಕಾಲೇಜು ಆರಂಭಗೊಂಡ ಕಾರಣ ನನಗೆ ಕಾಲೇಜು ಸೇರುವ ಕನಸು ನನಸಾಗಿದೆ ಎಂದು ಸಂಧ್ಯಾಕಾಲೇಜು ಸೇರಿದ ಮುಹಮ್ಮದ್ ನಝೀರ್ ಅನಿಸಿಕೆ ವ್ಯಕ್ತಪಡಿಸಿದರು.

ಕಾಲೇಜಿನ ಆವರಣ ಸುರಕ್ಷಿತವಾಗಿದೆ

ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಪದವಿ ಮಾಡಬೇಕೆಂಬ ಆಸೆ ಇದ್ದರೂ ಆರ್ಥಿಕ ಸಂಕಷ್ಟದಿಂದ ಸಾಧ್ಯವಾಗಲಿಲ್ಲ. ಈಗ ಮದುವೆಯಾದ ಬಳಿಕ ಗಂಡನ ಪ್ರೋತ್ಸಾಹದಿಂದ ಬಿ.ಕಾಂ ಓದಲು ಅವಕಾಶವಾಗಿದೆ. ಸಂಜೆ ಕಾಲೇಜಿಗೆ ಹೋಗುವ ಭಯ ಇದ್ದರೂ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜು ಹೆಣ್ಣು ಮಕ್ಕಳಿಗೆ ಸುರಕ್ಷಿತ ಕಾಲೇಜು ಎಂಬ ಭಾವನೆ ಮೂಡಿಸಿದೆ ಎಂದು ಸಂಧ್ಯಾಕಾಲೇಜಿನ ವಿದ್ಯಾರ್ಥಿ ಆಶ್ವಿನಿ ಪ್ರಭು ತಿಳಿಸಿದ್ದಾರೆ.

ಸಮಾರಂಭದಲ್ಲಿ ಸಂಧ್ಯಾ ಕಾಲೇಜಿನ ಬಿ.ಎ, ಬಿ.ಕಾಂ, ಎಂ.ಎ(ಕೊಂಕಣಿ), ಫ್ರೆಂಚ್ ಮತ್ತು ಜರ್ಮಿನಿ ಡಿಪ್ಲೋಮಾ ಕೋರ್ಸ್‌ಗಳನ್ನು ಶಾಸಕ ಐವನ್ ಡಿ ಸೋಜ ಉದ್ಘಾಟಿಸಿದರು.

ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಸಚಿವ ಪ್ರೊ.ಕೆ.ಎಂ. ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸಮಿತಿ ಸದಸ್ಯರಾದ ಜಯಪ್ರಕಾಶ್ ರಾವ್, ಮೋಹನ್ ಚಂದ್ರ ನಂಬಿಯಾರ್, ಹರೀಶ್ ಆಚಾರ್, ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ, ಮಂಗಳೂರು ವಿಶ್ವ ವಿದ್ಯಾನಿಲಯದ ಪ್ರಾಂಶುಪಾಲ ಡಾ.ಉದಯ ಕುಮಾರ್, ಮಂಗಳೂರು ವಿಶ್ವ ವಿದ್ಯಾನಿಲಯ ಸಂಧ್ಯಾಕಾಲೇಜಿನ ಪ್ರಾಂಶುಪಾಲೆ ಡಾ.ಸುಭಾಷಿಣಿ ಶ್ರೀವತ್ಸ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X