ಉಪ್ಪೂರು ಮೋಹನ್ ರಾವ್

ಉಡುಪಿ, ಅ.5: ಕರ್ಣಾಟಕ ಬ್ಯಾಂಕ್‌ನ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಉಪ್ಪೂರು ಮೋಹನ್ ರಾವ್(70) ಮಂಗಳವಾರ ಇಂದ್ರಾಳಿಯ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಉಡುಪಿ ರಂಗಭೂಮಿಯ ಪ್ರಮುಖ ನಟನಾಗಿ, ಜೊತೆ ಕಾರ್ಯದರ್ಶಿಯಾಗಿ ಹಾಗೂ ಉಪ್ಪೂರು ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ್ ರಾವ್, ಕಾರ್ಯದರ್ಶಿ ಮುರಳಿ ಕಡೆಕಾರ್ ಸಂತಾಪ ಸೂಚಿಸಿದ್ದಾರೆ.
Next Story





