ನಿರ್ಮಾಣ ಹಂತದ ಕಟ್ಟಡ ಕುಸಿತ: ಮೃತರ ಸಂಖ್ಯೆ ನಾಲ್ಕಕ್ಕೇರಿಕೆ

ಬೆಂಗಳೂರು, ಅ.6: ಇಲ್ಲಿನ ಬೆಳ್ಳಂದೂರು ಗೇಟ್ ಬಳಿ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡ ಕುಸಿತದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ.
ಕಟ್ಟಡದಲ್ಲಿ ಒಟ್ಟು 16 ಜನರಿದ್ದ ಬಗ್ಗೆ ಮಾಹಿತಿ ಲಭಿಸಿದ್ದು, ಇನ್ನೂ ನಾಲ್ವರು ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ. 16 ಜನರ ಪೈಕಿ ನಾಲ್ವರು ಸಾವನ್ನಪ್ಪಿದ್ದು, 6 ಜನರನ್ನು ರಕ್ಷಣೆ ಮಾಡಲಾಗಿದೆ.
ಅವಶೇಷಗಳಡಿ ಸಿಲುಕಿರುವವವರ ಪತ್ತೆಗಾಗಿ ಶ್ವಾನ ದಳ ಸಿಬ್ಬಂದಿ ತೀವ್ರ ತಪಾಸಣೆ ನಡೆಸುತ್ತಿದೆ. ಬುಧವಾರ ಓರ್ವ ಭದ್ರತಾ ಸಿಬ್ಬಂದಿ ಹಾಗೂ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದರು. ಇಂದು ಇನ್ನೋರ್ವ ಕೂಲಿ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
Next Story





