ಚೀನಾ ಓಪನ್: ವಿಶ್ವದ ನಂ.1 ಆಟಗಾರ್ತಿ ಕೆರ್ಬರ್‌ಗೆ ಸೋಲು

ಬೀಜಿಂಗ್, ಅ.6: ಚೀನಾ ಓಪನ್‌ನ ಮೂರನೆ ಸುತ್ತಿನ ಪಂದ್ಯದಲ್ಲಿ ವಿಶ್ವದ ನಂ.1 ಆಟಗಾರ್ತಿ ಆ್ಯಂಜೆಲಿಕ್ ಕೆರ್ಬರ್ ಅವರು ಉಕ್ರೇನ್‌ನ ಎಲಿನಾ ಸ್ವಿಟೊಲಿನಾ ವಿರುದ್ಧ ನೇರ ಸೆಟ್‌ಗಳಿಂದ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ.
ಗುರುವಾರ ಇಲ್ಲಿ ನಡೆದ ಮಹಿಳೆಯರ ಸಿಂಗಲ್ಸ್‌ನ ಅಂತಿಮ 16ರ ಸುತ್ತಿನ ಪಂದ್ಯದಲ್ಲಿ ಸ್ವಿಟೊಲಿನಾ ಅವರು ಕೆರ್ಬರ್ ವಿರುದ್ಧ 6-3, 7-5 ಸೆಟ್‌ಗಳ ಅಂತರದಿಂದ ಗೆಲುವು ಸಾಧಿಸಿದರು. ಸ್ವಿಟೊಲಿನಾ ಈ ವರ್ಷ 2ನೆ ಬಾರಿ ಕೆರ್ಬರ್ ವಿರುದ್ಧ ಜಯ ಸಾಧಿಸಿದ್ದಾರೆ.
ಮತ್ತೊಂದು ಸಿಂಗಲ್ಸ್ ಪಂದ್ಯದಲ್ಲಿ ಬ್ರಿಟನ್‌ನ ಜೊಹನ್ನಾ ಕಾಂಟಾ ಯುಎಸ್ ಓಪನ್ ಫೈನಲಿಸ್ಟ್ ಕಾರೊಲಿನಾ ಪ್ಲಿಸ್ಕೋವಾ ವಿರುದ್ಧ 6-1, 3-6, 7-6(7/2) ಸೆಟ್‌ಗಳ ಅಂತರದಿಂದ ಜಯ ಸಾಧಿಸಿದ್ದಾರೆ.
Next Story





