Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ ತಾಲೂಕು ಪ್ರಗತಿ ಪರಿಶೀಲನಾ ಸಭೆ:...

ಸುಳ್ಯ ತಾಲೂಕು ಪ್ರಗತಿ ಪರಿಶೀಲನಾ ಸಭೆ: ಮೆಸ್ಕಾಂ, ಸರ್ವೇ ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ತರಾಟೆ

ವಾರ್ತಾಭಾರತಿವಾರ್ತಾಭಾರತಿ7 Oct 2016 6:11 PM IST
share

ಸುಳ್ಯ, ಅ.7: ಸುಳ್ಯ ತಾಲೂಕು ಪಂಚಾಯತ್ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಪಂಚಾಯತ್‌ನ ಪಯಸ್ವಿನಿ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಶುಭದಾ ಎಸ್ ರೈ, ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಕಾರ್ಯನಿರ್ವಹಣಾದಿಕಾರಿ ಮಧುಕುಮರ್, ತಹಶೀಲ್ದಾರ್ ಎಂ.ಎಂ.ಗಣೇಶ್ ವೇದಿಕೆಯಲ್ಲಿದ್ದರು.

ಅಪಾಯಕಾರಿ ವಿದ್ಯುತ್ ಕಂಬಗಳನ್ನು ಬದಲಾಯಿಸಲು ಸೂಚಿಸಿ ಮೂರು ತಿಂಗಳಾದರೂ ಮೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ರಾಧಾಕೃಷ್ಣ ಬೊಳ್ಳೂರು ಆಕ್ರೋಶ ವ್ಯಕ್ತಪಡಿಸಿದರು.

ಕೇನ್ಯ ಫೀಡರ್‌ನ ಲೈನ್ ಬದಲಾಯಿಸುವಾಗ ಕಾಲನಿಯ ಮನೆಯೊಂದರ ಸಂಪರ್ಕ ಕಡಿತಗೊಂಡಿದ್ದು ಅದನ್ನು ಮರು ಜೋಡಿಸಲು ಕಳೆದ ಸಭೆಯಲ್ಲಿ ಸೂಚಿಸಿದ್ದು, ಇನ್ನೂ ಸಂಪರ್ಕ ನೀಡಿಲ್ಲ ಎಂದು ಅಧ್ಯಕ್ಷರು ಅಧಿಕಾರಿ ಮೇಲೆ ಹರಿಹಾಯ್ದರು. ತಾಲೂಕು ಪಂಚಾಯತ್‌ಗೆ ಸೇರಿದ 8.6 ಎಕರೆ ಜಮೀನಿನ ಸರ್ವೇ ಮಾಡಿ ಗಡಿಗುರುತು ಮಾಡದೇ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ ಎಂದು ರಾಧಾಕೃಷ್ಣ ಬೊಳ್ಳೂರು ಆಕ್ಷೇಪಿಸಿದರು. ಇದು ಪೂರ್ತಿ ಅಭಿವೃದ್ಧಿ ಹೊಂದಿದ ಪ್ರದೇಶವಾಗಿದ್ದು, ನಕ್ಷೆ ಲಭ್ಯ ಇಲ್ಲದೆ ಇರುವುದರಿಂದ ಕಾಲಾವಕಾಶ ಬೇಕು ಎಂದು ಅಧಿಕಾರಿ ಉತ್ತರಿಸಿದರು.

ಈ ಕುರಿತು ವ್ಯಾಪಕ ಚರ್ಚೆ ನಡೆಯಿತು. ಶಾಲೆಗಳಲ್ಲಿ ಪೌಷ್ಠಿಕ ತೋಟ ನಿರ್ಮಣದ ಕುರಿತು ಶಿಕ್ಷಣ ಇಲಾಖೆ ಹಾಗೂ ಎನ್‌ಆರ್‌ಇಜಿ ಅಧಿಕಾರಿಗಳ ಅಂಕಿ ಸಂಖ್ಯೆ ತಾಳೆಯಾಗುತ್ತಿಲ್ಲ. ಶಾಲೆಗಳ ಪಟ್ಟಿ ನೀಡುವಂತೆ ಕಳೆದ ಸಭೆಯಲ್ಲಿ ಸೂಚಿಸಿದ್ದರೂ ಬಿಇಒ ಪಟ್ಟಿಯನ್ನೂ ನೀಡಿಲ್ಲ ಅಲ್ಲದೆ ಸಭೆಗೆ ಗೈರು ಹಾಜರಾಗಿದ್ದಾರೆ ಎಂದು ಇಒ ಮಧುಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಸಿಆರ್‌ಪಿ ಪದ್ಮನಾಭ ಅತ್ಯಾಡಿ ಸಮಜಾಯಿಷಿ ನೀಡಿದರು.

ತಾಲೂಕು ಮಟ್ಟದ ಅಧಿಕಾರಿಗಳು ಕೆಡಿಪಿ ಸಭೆಗೆ ಕಡ್ಡಾಯವಾಗಿ ಹಾಜರಿರಬೇಕು. ಕಿರಿಯ ಅಧಿಕಾರಿಯನ್ನು ಕಳುಹಿಸುವುದಿದ್ದರೆ ಮೊದಲೇ ಅನುಮತಿ ಪಡೆಯಬೇಕು ಮತ್ತು ಸಭೆಗೆ ಬರುವ ಅಧಿಕಾರಿ ಪೂರ್ಣ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಇಒ ಮಧುಕುಮಾರ್ ಸೂಚಿಸಿದರು. ಮುಂದಿನ ಮೂರು ವರ್ಷಗಳನ್ನು ಗುರಿಯಾಗಿಟ್ಟು ಶಾಲೆ, ಅಂಗನವಾಡಿ, ರಸ್ತೆ ದುರಸ್ತಿಗೆ ಅನುದಾನಕ್ಕೆ ಅಂದಾಜು ಪಟ್ಟಿ ತಯಾರಿಸಿ ತಾಲೂಕು ಪಂಚಾಯತ್‌ಗೆ ನೀಡುವಂತೆ ಅವರು ಸೂಚಿಸಿದರು.

ಅಡ್ಪಂಗಾಯ ಶಾಲೆಯಲ್ಲಿ ಕೈತೋಟ ಮಾಡಲೇ ಇಲ್ಲ, ಕೊಳವೆ ಬಾವಿ ಕೆಟ್ಟು ಹೋಗಿದ್ದು, ದುರಸ್ತಿ ಮಾಡಿಲ್ಲ. ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಪರಿಶೀಲಿಸಿದಾಗ ಈ ಎಲ್ಲಾ ಅಂಶಗಳು ಬಹಿರಂಗಗೊಂಡಿವೆ ಎಂದು ಇಒ ಶಿಕ್ಷಣಾಧಿಕಾರಿಗಳ ಮೇಲೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಬೆಳ್ಳಾರೆ ಪೇಟೆಯ ಮಧ್ಯೆ ಇರುವ ಅಶ್ವತ್ಥ ಮರ ತೆರವುಗೊಳಿಸಲು ಸೂಚಿಸಿದ್ದರೂ ತೆರವು ಮಾಡದೇ ಇರುವ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮದ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X