ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

ಮಂಗಳೂರು, ಅ.7: ದೇಶದ ಪ್ರಧಾನಿ ನರೇಂದ್ರ ಮೋದಿಯವರು 'ರಕ್ತದ ದಲ್ಲಾಳಿ' ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಭಾರತೀಯ ಜನತಾ ಪಾರ್ಟಿ ಮತ್ತು ಯುವ ಮೋರ್ಚಾ ದ.ಕ. ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಪೂಂಜ, ಪ್ರಧಾನ ಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ಮೂಡುಶೆಡ್ಡೆ, ರಾಜ್ಯ ಉಪಾಧ್ಯಕ್ಷ ಶಿವರಂಜನ್ ಪುತ್ತೂರು, ಬಿಜೆಪಿ ಹಾಗೂ ಯುವ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Next Story





