Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಡವರ ಸೇವೆಯಿಂದ ದೇವರನ್ನು ಕಾಣೋಣ:...

ಬಡವರ ಸೇವೆಯಿಂದ ದೇವರನ್ನು ಕಾಣೋಣ: ಕೇಮಾರು ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ7 Oct 2016 9:24 PM IST
share
ಬಡವರ ಸೇವೆಯಿಂದ ದೇವರನ್ನು ಕಾಣೋಣ: ಕೇಮಾರು ಸ್ವಾಮೀಜಿ

ಮಂಗಳೂರು, ಅ. 8: ಸಾಮಾಜಿಕ ಶಾಂತಿ, ಸಹಬಾಳ್ವೆಗೆ ಶ್ರಮಿಸುವ ಜೊತೆಗೆ ಸಮಾಜದ ದುರ್ಬಲ ವರ್ಗದವರಿಗೆ ಸೇವೆ ಮಾಡುವ ಮೂಲಕ ದೇವರನ್ನು ಕಾಣಲು ಸಾಧ್ಯವಿದೆ ಎಂದು ಕೇಮಾರು ಸಾಂದೀಪನಿ ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಇಂದು ಸಂಜೆ ನಗರದ ಪುರಭವನದಲ್ಲಿ ನಡೆದ ‘ಶಾಂತಿ ಮತ್ತು ಮಾನವೀಯತೆ’ ಅಭಿಯಾನ ಕಾರ್ಯಕ್ರಮದಲ್ಲಿ ‘ಸದ್ಭಾವನಾ ಸಮ್ಮಾನ್’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಎರಡು ಧರ್ಮಗಳ ನಡುವೆ ಎಂದೂ ಗಲಾಟೆಗಳು ಸಂಭವಿಸುವುದಿಲ್ಲ. ಆದರೆ, ಎರಡು ಅಧರ್ಮಗಳ ನಡುವೆ ಗಲಾಟೆಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಹಿಂಸೆಯಿಂದ ಶಾಂತಿ ಸ್ಥಾಪನೆಯಾಗುವುದಿಲ್ಲ ಎಂಬುದನ್ನು ಸಮಾಜ ಅರಿತುಕೊಳ್ಳಬೇಕು ಎಂದು ಸ್ವಾಮೀಜಿ ಹೇಳಿದರು.

ಪ್ರೀತಿಯ ದೀಪವನ್ನು ಹೊತ್ತಿಸುವ ಮೂಲಕ ಸಮಾಜದಲ್ಲಿ ಸೌಹಾರ್ದ ಮತು ಸಹೋದರತೆಯ ವಾತಾವರಣವನ್ನು ಸೃಷ್ಟಿಸೋಣ. ಈ ಮೂಲಕ ದ್ವೇಷವೆಂಬ ಬೆಂಕಿಯನ್ನು ನಂದಿಸೋಣ ಎಂದು ಕೇಮಾರು ಸ್ವಾಮೀಜಿ ನುಡಿದರು.

ನಾನು ಸನ್ಮಾನ ಸ್ವೀಕರಿಸುವವನಲ್ಲ. ನನ್ನ ಆಧ್ಯಾತ್ಮಿಕ ಬದುಕೇ ನನಗೆ ನಿಜವಾದ ಸನ್ಮಾನವಾಗಿದೆ. ಧಾರ್ಮಿಕ ಮತ್ತು ಆಧ್ಯಾತ್ಮ ಬದುಕಿನ ಹಾದಿಯೇ ನನಗೆ ಸನ್ಮಾನವಾಗಿದ್ದು, ಇದುವೇ ನನಗೆ ಸಂತೃಪ್ತಿಯನ್ನು ನೀಡಿದೆ ಎಂದರು.

‘ಸದ್ಭಾವನಾ ಸಮ್ಮಾನ್’ ಸ್ವೀಕರಿಸಿದ ಕ್ರೈಸ್ತ ಧರ್ಮ ಅಧ್ಯಯನ ಪೀಠದ ಮಾಜಿ ಅಧ್ಯಕ್ಷ ರೆ.ಫಾ.ಜಾನ್ ಫೆರ್ನಾಂಡಿಸ್ ಮಾತನಾಡಿ, ಸಹೋದರತೆ ಮತ್ತು ಸಹಬಾಳ್ವೆಯ ಕೆಲಸದಲ್ಲಿ ಎಲ್ಲರೂ ಕೈಜೋಡಿಸಿದರೆ ಗುರಿ ಮುಟ್ಟಲು ಸಾಧ್ಯವಿದೆ ಎಂದರು.

ಯುನಿಟಿ ಅಕಾಡಮಿ ಆಫ್ ಎಜುಕೇಶನ್‌ನ ಅಧ್ಯಕ್ಷ ಡಾ.ಸಿ.ಪಿ.ಹಬೀಬ್ ರಹ್ಮಾನ್, ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ಇದರ ಅಧ್ಯಕ್ಷ ಮುಹಮ್ಮದ್ ಕುಂಞಿ, ಶಾಂತಿ ಮತ್ತು ಮಾನವೀಯತೆ ಅಭಿಯಾನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಹಾಗೂ ಮಂಗಳೂರು ವಿವಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಮಲ್ಲಿಪಟ್ಣ, ಉಳ್ಳಾಲ ಸದ್ಭಾವನಾ ವೇದಿಕೆಯ ಅಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರ್, ಉಳ್ಳಾಲ ಮೊಗವೀರ ಸಂಘದ ಮಾಜಿ ಅಧ್ಯಕ್ಷ ಸದಾನಂದ ಬಂಗೇರ, ನಗರ ಸಂಶೋಧನಾ ಕೇಂದ್ರದ ಪ್ರೊಜೆಕ್ಟ್ ಕೋ ಆರ್ಡಿನೇಟರ್ ಹರಿಣಿ, ಸ್ವಾಗತ ಸಮಿತಿಯ ಕಾರ್ಯದರ್ಶಿ ಉಮರ್ ಯು.ಎಚ್. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X