Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಗರ್‌ಹುಕುಂ ಸಾಗುವಳಿದಾರರ ಮೂಲ ದಾಖಲೆ...

ಬಗರ್‌ಹುಕುಂ ಸಾಗುವಳಿದಾರರ ಮೂಲ ದಾಖಲೆ ಮಾಯ: ಶಾಸಕ ದತ್ತ

ಬಗರ್‌ಹುಕುಂ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ7 Oct 2016 10:14 PM IST
share
ಬಗರ್‌ಹುಕುಂ ಸಾಗುವಳಿದಾರರ ಮೂಲ ದಾಖಲೆ ಮಾಯ: ಶಾಸಕ ದತ್ತ

ಕಡೂರು, ಅ.7: ಇಂದಿನ ಬಗರ್‌ಹುಕುಂ ಸಮಿತಿಯಲ್ಲಿ ಸಾಗುವಳಿದಾರರ ದಾಖಲೆಗಳನ್ನು ಪರಿಶೀಲಿಸಿದಾಗ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆೆ. ಬಡರೈತರು ಬಗರ್‌ಹುಕುಂ ಸಾಗುವಳಿಗಾಗಿ ಫಾರಂ 50 ಮತ್ತು 53 ರಲ್ಲಿ ಅರ್ಜಿ ಹಾಕಿ 1991ರಿಂದಲೂ ಕಾಯುತ್ತಿದ್ದಾರೆ. ಆದರೆ ಮೂಲ ದಾಖಲೆಗಳ ಲಭ್ಯತೆ ಇಲ್ಲದಾಗಿದೆ. ಇವುಗಳು ಎಲ್ಲಿ, ಹೇಗೆ ಮಾಯವಾಗಿವೆ ಎಂಬುದು ಗೊತ್ತಿಲ್ಲದಾಗಿದೆ ಎಂದು ಶಾಸಕ ವೈ.ಎಸ್.ವಿ. ದತ್ತ ತಿಳಿಸಿದರು.

ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಕರೆಯಲಾಗಿದ್ದ ಬಗರ್‌ಹುಕುಂ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಈ ದಾಖಲೆಗಳು ಕಳೆದ 30 ವರ್ಷಗಳ ಹಿಂದೆ ನಾಶವಾಗಿದ್ದು, ಅದರ ಬಗ್ಗೆ ಮಾಹಿತಿ ಇಲ್ಲ. ಇದಕ್ಕೆ ಯಾರನ್ನು ಹೊಣೆ ಮಾಡಬೇಕು ಎಂಬುದರ ಬಗ್ಗೆ ತಿಳಿಯದಾಗಿದೆ. ಇದು ಆಗಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನವಾಗಿದೆ. ಈಗಿನ ಅಧಿಕಾರಿಗಳು ಚುರುಕಾಗಿ ಕೆಲಸ ಮಾಡುತ್ತಿದ್ದು, ಕಮಿಟಿಯ ಸದಸ್ಯರಲ್ಲಿ ಏನಾದರೂ ಮಾಡಬಹುದು ಎಂಬುದರ ಬಗ್ಗೆ ಹುಮ್ಮಸ್ಸಿದೆ ಎಂದು ಹೇಳಿದರು. ಹೊಸದಾಗಿ ದಾಖಲೆ ಮಾಡಲು ಪ್ರಾರಂಭಿಸಲಾಗಿದ್ದು, ಇದಕ್ಕಾಗಿ ಸರ್ವೇಯರ್‌ಗಳನ್ನು ಬಳಕೆ ಮಾಡಿಕೊಂಡು ಸರ್ವೇ ಸ್ಕೆಚ್ ನೀಡಲು ಒಂದು ತಿಂಗಳ ಗಡುವು ನೀಡಲಾಗಿದೆ. ಫಾರಂ.53ರ ಅಡಿಯಲ್ಲಿ 14,800 ಅರ್ಜಿಗಳು ಬಂದಿದ್ದು, ಮಂಜೂರಾತಿಯಾಗಿರುವುದು ಕೇವಲ 617. ಫಾರಂ.50ರಡಿಯಲ್ಲಿ 13,921 ಅರ್ಜಿಗಳು ಬಂದಿದ್ದು, ಮಂಜೂರಾತಿ ದೊರಕಿರುವುದು 4,028 ಮಾತ್ರ. ಮುಂದೆ ಸಾಗುವಳಿ ನೀಡಲು ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ವರದಿ ನೀಡಲು 15 ದಿನಗಳ ಸಮಯ ನೀಡಲಾಗಿದೆ. ಗೋಮಾಳ, ಹುಲ್ಲುಬನಿ ಜಮೀನಿನ ಬಗರ್‌ಹುಕುಂ ಸಾಗುವಳಿದಾರರು ಬಡವರಾಗಿದ್ದರೆ ಸಾಗುವಳಿ ಚೀಟಿ ನೀಡಲು ಸರಕಾರ ಹೊಸ ಸುತ್ತೋಲೆ ಹೊರಡಿಸಿದೆ. ಇವರಿಗೆ ಸಾಗುವಳಿ ಚೀಟಿ ನೀಡಬಹುದಾಗಿದೆ ಎಂದು ತಿಳಿಸಿದರು. ಹಿಂದಿನವರ ತಪ್ಪಿನಿಂದಾಗಿ ಕೆಲವು ಕಡೆಗಳಲ್ಲಿ ಕಂದಾಯ ಭೂಮಿ ಅರಣ್ಯ ಭೂಮಿ ಎಂದಾಗಿದೆ. ಇದನ್ನು ಮಾರ್ಪಾಡು ಮಾಡಲು ಜಿಲ್ಲಾಧಿಕಾರಿಗಳು ಒಪ್ಪಿಗೆ ಸೂಚಿಸಿದ್ದು, ಈ ತಿಂಗಳ 17ರ ಒಳಗೆ ಪಟ್ಟಿ ಮಾಡಿ ಜಿಲ್ಲಾಧಿಕಾರಿಗಳಿಗೆ ಕಳುಹಿಸಬೇಕಿದೆ. ಡಿಸೆಂಬರ್ ತಿಂಗಳ ಒಳಗಾಗಿ ಸಾಗುವಳಿದಾರರಿಗೆ ಚೀಟಿ ನೀಡಲಾಗುವುದು. ಅರ್ಜಿದಾರರಿಗೆ ಹೆಚ್ಚಿನ ಜಮೀನು ಇದ್ದರೆ ಅಂತವರ ಅರ್ಜಿಗಳನ್ನು ವಜಾಗೊಳಿಸಲಾಗುವುದು. ಇಂತಹ ಪ್ರಕರಣಗಳು 64 ಇದ್ದು, ಅವರ ಅರ್ಜಿ ವಜಾಗೊಳಿಸಲಾಗಿದೆ. ಅತೀ ಕಡುಬಡವರ ಅರ್ಜಿಗಳನ್ನು ಪರಿಶೀಲಿಸಿ ಸಾಗುವಳಿ ಚೀಟಿ ನೀಡಲಾಗುವುದು. ಮುಂದಿನ ಬಗರ್‌ಹುಕುಂ ಸಭೆಯನ್ನು ಇದೇ ತಿಂಗಳ 22ಕ್ಕೆ ಕರೆಯಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ತಹಶೀಲ್ದಾರ್ ಭಾಗ್ಯಾ, ಸಮಿತಿ ಸದಸ್ಯರಾದ ಪುಷ್ಪಾ ಕಾಂತರಾಜ್, ನಾಗರಾಜ್, ತಿಮ್ಮೇಗೌಡ ಹಾಗೂ ಸಂಬಂಧಿಸಿದ ಎಲ್ಲ ಇಲಾಖಾ ಅಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X