Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲವಲವಿಕೆ ಕವಿತೆಯ ಮೂಲ ಉದ್ದೇಶ:...

ಲವಲವಿಕೆ ಕವಿತೆಯ ಮೂಲ ಉದ್ದೇಶ: ಹಿರೇಮಗಳೂರು ಕಣ್ಣನ್

ಕವನ ವಾಚನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ7 Oct 2016 10:27 PM IST
share
ಲವಲವಿಕೆ ಕವಿತೆಯ ಮೂಲ ಉದ್ದೇಶ: ಹಿರೇಮಗಳೂರು ಕಣ್ಣನ್

ಚಿಕ್ಕಮಗಳೂರು, ಅ.7: ಕಳೆದು ಹೋದ ಚೈತನ್ಯವನ್ನು ಒಂದು ಕವನ ತಂದು ಕೊಡುತ್ತದೆ. ಕವಿತೆಯ ಮೂಲ ಉದ್ದೇಶವೇ ಲವಲವಿಕೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ತಾಲೂಕು ಕಸಾಪ ರಾಯಭಾರಿ ಹಿರೇಮಗಳೂರು ಕಣ್ಣನ್ ಅಭಿಪ್ರಾಯ ಪಟ್ಟರು.

ನಗರದ ಎಸ್‌ಟಿಜೆ ಮಹಿಳಾ ಪದವಿ ಕಾಲೇಜಿನಲ್ಲಿ ಶುಕ್ರವಾರ ಚಿಕ್ಕಮಗಳೂರು ತಾಲೂಕು ಕಸಾಪ ವತಿಯಿಂದ ಆಯೋಜಿಸಿದ ವಿದ್ಯಾರ್ಥಿಗಳ ಸ್ವರಚಿತವಾದ ಕವನ ವಾಚನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಸ್‌ಟಿಜೆ ಮಹಿಳಾ ಪದವಿ ಕಾಲೇಜು ಪ್ರಾಂಶುಪಾಲೆ ಪ್ರೊ.ಜೆ.ಕೆ. ಭಾರತಿ ಮಾತನಾಡಿ, ಜಗತ್ತಿನಲ್ಲಿ ಕಾಣುವ ಯಾವುದೇ ವಸ್ತುಗಳಿಗೆ, ಕಲ್ಪನೆಗಳಿಗೆ ರೂಪ, ಜೀವ ತುಂಬುವವರೇ ನಿಜವಾದ ಕವಿಗಳು. ನಿರ್ಜೀವ ವಸ್ತುಗಳೊಡನೆ ಸಂವಾದವನ್ನು ಕವಿಗಳು ನಡೆಸುತ್ತಾರೆ ಎಂಬುದಕ್ಕೆ ಕವಿಗಳ ಕವನಗಳು ಸಾಕ್ಷಿಯಾಗಿವೆ ಎಂದು ಉದಾಹರಣೆ ಸಹಿತ ವಿವರಿಸಿದರು.

ವಿದ್ಯಾರ್ಥಿನಿಯರು ರಚಿಸಿದ ಕವನಗಳನ್ನು ಕುರಿತು ವಿಮರ್ಶಿಸಿದ ನಿವೃತ್ತ ಉಪನ್ಯಾಸಕ ಹಾಗೂ ಕವಿ ಎ.ಜಿ. ವಿಶ್ವಮೂರ್ತಿ ಮಾತನಾಡಿ, ಒಂದು ಕವನ ಹೊರ ಬರಬೇಕುಎಂದರೆ ಮೊದಲು ಭಾವನೆಗಳನ್ನು ಮೆಲುಕು ಹಾಕಬೇಕಾಗುತ್ತದೆ. ಭಾವನೆಗಳು, ಘಟನೆಗಳು, ವಸ್ತುಗಳನ್ನು ನೋಡುವ ಆಸಕ್ತಿ ಬೆಳೆಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

ತಾಲೂಕು ಕಸಾಪ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ಪರಿಷತ್ತು ಆಯೋಜಿಸಿದ ಈ ಕಾರ್ಯಕ್ರಮಕ್ಕೆ ನಿರೀಕ್ಷೆ ಮೀರಿದ ಸ್ಪಂದನೆ ವಿದ್ಯಾರ್ಥಿಗಳಿಂದ ವ್ಯಕ್ತವಾಗಿರುವುದು ಮತ್ತಷ್ಟು ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲು ಸ್ಪೂರ್ತಿದೊರೆತಿದೆಂದರು. ಕಾಲೇಜಿನ 57 ವಿದ್ಯಾರ್ಥಿನಿಯರು ವಿವಿಧ ವಿಚಾರಗಳ ಕುರಿತು ಕವನಗಳನ್ನು ರಚಿಸಿದ್ದರು. 57 ಕವನಗಳಲ್ಲಿ ಉತ್ತಮವಾದ 15 ಕವನಗಳನ್ನು ವಾಚನ ಮಾಡಲು ವಿದ್ಯಾರ್ಥಿನಿಯರಿಗೆ ಅವಕಾಶ ಮಾಡಿಕೊಡಲಾಗಿತ್ತು.15 ಕವನಗಳಲ್ಲಿ ಅತ್ಯುತ್ತಮವಾದ ಮೂರು ಕವನಗಳನ್ನು ಆರಿಸಿ ಬಹುಮಾನಗಳನ್ನು ನೀಡಲಾಯಿತು.

ಇದೇ ಸಂದರ್ಭದಲ್ಲಿ ತರಳಬಾಳು ಶಿಕ್ಷಣ ಸಂಸ್ಥೆಯ ಕೇಂದ್ರ ಸಮಿತಿ ಸದಸ್ಯ ಎಲ್.ವಿ.ಬಸವರಾಜು ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ 57 ವಿದ್ಯಾರ್ಥಿನಿಯರು ವಿವಿಧ ವಿಚಾರಗಳ ಕುರಿತು ಕವನಗಳನ್ನು ರಚಿಸಿದ್ದರು.

57 ಕವನಗಳಲ್ಲಿ ಉತ್ತಮವಾದ 15 ಕವನಗಳನ್ನು ವಾಚನ ಮಾಡಲು ವಿದ್ಯಾರ್ಥಿನಿಯರಿಗೆ ಅವಕಾಶ ಮಾಡಿಕೊಡಲಾಗಿತ್ತು. ಅತ್ಯುತ್ತಮವಾದ ಮೂರು ಕವನಗಳಿಗೆ ಬಹುಮಾನಗಳನ್ನು ನೀಡಲಾಯಿತು.

 ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಮಂಜುಳಾ ಹುಲ್ಲಹಳ್ಳಿ, ಪರಿಷತ್ ನಿಕಟ ಪೂರ್ವಅಧ್ಯಕ್ಷ ಬಿ.ಆರ್. ಜಗದೀಶ್, ಗೌರವ ಕೋಶಾಧ್ಯಕ್ಷ ಎಚ್.ಎಸ್. ಜಗದೀಶ್, ನೆಹರು ಯುವ ಕೇಂದ್ರದ ಸಂಯೋಜಕ ಮಂಜುನಾಥ ರಾವ್, ಉಪನ್ಯಾಸಕ ನಾಗೇಶ್, ಸಿದ್ದೇಗೌಡ, ಕೆ.ವಿ.ಶಿವರಾಜ್, ಎಲ್.ಜೆ.ಮಂಜುನಾಥ್, ಜಾಗರ ಹೋಬಳಿ ಅಧ್ಯಕ್ಷ ಕೆ.ವಿ. ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಶಿಲ್ಪಾ ಪ್ರಾರ್ಥಿಸಿದರು. ಉಪನ್ಯಾಸಕ ಹೇಮರಾಜ್ ಸ್ವಾಗತಿಸಿದರು. ವಿದ್ಯಾ ವಂದಿಸಿದರು. ಗೀತಾ ಮತ್ತು ಮಮತ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X