ದೇವೇಗೌಡರ ಹೆಲಿಕಾಪ್ಟರ್ ಮಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಮಂಗಳೂರು, ಅ. 7: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಶುಕ್ರವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ದೇವೇಗೌಡ ದಂಪತಿ ಗುರುವಾರ ಶೃಂಗೇರಿಗೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಅಲ್ಲಿಂದ ಶುಕ್ರವಾರ ಬೆಳಗ್ಗೆ ಕೊಲ್ಲೂರು ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಪೂಜೆ ಸಲ್ಲಿಸಿ ಮಧ್ಯಾಹ್ನ ಕೊಲ್ಲೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್ ಮೂಲಕ ಹೊರಟಿದ್ದರು. ಈ ವೇಳೆ ಪಶ್ಚಿಮ ಘಟ್ಟದಲ್ಲಿ ಪ್ರತಿಕೂಲ ಹವಾಮಾನ ಇದ್ದುದರಿಂದ ಹೆಲಿಕಾಪ್ಟರ್ ಮೈಸೂರು ಮಾರ್ಗವನ್ನು ಬದಲಾಯಿಸಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.
ದೇವೇಗೌಡರು ಮೈಸೂರು ಭೇಟಿಯನ್ನು ಮೊಟಕುಗೊಳಿಸಿಸಂಜೆ 5:15ರ ಸುಮಾರಿಗೆ ವಿಮಾನದಲ್ಲಿ ನೇರವಾಗಿ ಬೆಂಗಳೂರಿಗೆ ಪ್ರಯಾಣಿಸಿದರು.
Next Story





