Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್‌ಮುಕ್ತ ರಾಜ್ಯಕ್ಕಾಗಿ...

ಕಾಂಗ್ರೆಸ್‌ಮುಕ್ತ ರಾಜ್ಯಕ್ಕಾಗಿ ‘ಸರ್ಜಿಕಲ್ ಸ್ಟ್ರೈಕ್’: ಡಿ.ವಿ.ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ7 Oct 2016 11:38 PM IST
share

ಬೆಂಗಳೂರು, ಅ.7: ರಾಜ್ಯದಲ್ಲಿ ಅಭಿವೃದ್ಧಿ ಪರ್ವವನ್ನು ಮತ್ತೆ ಆರಂಭಿಸಲು, ಕಾಂಗ್ರೆಸ್‌ನ್ನು ಅಧಿಕಾರದಿಂದ ಕಿತ್ತೊಗೆಯಲು ರಾಜಕೀಯವಾದ ‘ಸರ್ಜಿಕಲ್ ಸ್ಟ್ರೈಕ್’ಗಳನ್ನು ನಡೆಸಬೇಕಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಶುಕ್ರವಾರ ನಗರದ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಗೆ ಕೇವಲ 500 ದಿನಗಳು ಮಾತ್ರ ಬಾಕಿಯಿದೆ. ಕಾರ್ಯಕರ್ತರು ಈ ಕ್ಷೇತ್ರವನ್ನು ಮತ್ತೆ ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲು ಇಂದಿನಿಂದಲೆ ತಯಾರಿ ಆರಂಭಿಸಬೇಕು ಎಂದರು.
ದೇಶದ 14 ರಾಜ್ಯಗಳಲ್ಲಿ ಬಿಜೆಪಿ ಹಾಗೂ ಅವುಗಳ ಮಿತ್ರಪಕ್ಷಗಳು ಅಧಿಕಾರದಲ್ಲಿದ್ದಾರೆ. ದಕ್ಷಿಣ ಭಾರತದ ದೊಡ್ಡ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಇದೆ. ಪ್ರಧಾನಿ ನರೇಂದ್ರಮೋದಿ ಆಶಯದಂತೆ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡಲು ಬಿಜೆಪಿ ಕಾರ್ಯಕರ್ತರು ಪಣ ತೊಡಬೇಕು ಎಂದು ಅವರು ಕರೆ ನೀಡಿದರು.
ಬಿಜೆಪಿಯನ್ನು ಸೋಲಿಸುವ ತಾಕತ್ತು ಕಾಂಗ್ರೆಸ್‌ಗಿಲ್ಲ. ಆದರೆ, 2013ರಲ್ಲಿ ನಮ್ಮಿಂದ ಆದ ತಪ್ಪುಗಳು, ಬಿಜೆಪಿ ಮೂರು ಪಕ್ಷಗಳಾಗಿ ವಿಭಜನೆಯಾಗಿದ್ದು, ನಾಯಕರು ಹಾಗೂ ಕಾರ್ಯಕರ್ತರ ನಡುವಿನ ಗೊಂದಲದಿಂದಾಗಿ ನಾವು ಸೋಲುವಂತಾಯಿತು. ಭವಿಷ್ಯದಲ್ಲಿ ಇಂತಹ ತಪ್ಪುಗಳು ಮರುಕಳಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಸದಾನಂದಗೌಡ ಭರವಸೆ ನೀಡಿದರು.
ಬಿಜೆಪಿಯು ದೇಶಾದ್ಯಂತ 12 ಕೋಟಿ ಸದಸ್ಯರನ್ನು ಹೊಂದಿದೆ. ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಸದಸ್ಯರನ್ನು ಹೊಂದಿರುವ ಮತ್ತೊಂದು ರಾಜಕೀಯ ಪಕ್ಷ ಜಗತ್ತಿನಲ್ಲಿ ಎಲ್ಲೂ ಇಲ್ಲ. ಕಾರ್ಯಕರ್ತರೆ ನಮ್ಮ ಶಕ್ತಿ. ನಿಮ್ಮ ಉತ್ಸಾಹ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯೆ ನಮಗೆ ಶ್ರೀರಕ್ಷೆ ಎಂದು ಅವರು ಹೇಳಿದರು.
ಮಾಜಿ ಶಾಸಕ ಎನ್.ಎಸ್.ನಂದೀಶ್‌ರೆಡ್ಡಿ ಮಾತನಾಡಿ, ಬಿಜೆಪಿ ಸರಕಾರದ ಅವಧಿಯಲ್ಲಿ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ ಒಳಚರಂಡಿ ವ್ಯವಸ್ಥೆ, ಕಾವೇರಿ ನೀರು ಸಂಪರ್ಕ, ರಸ್ತೆಗಳ ಡಾಂಬರೀಕರಣ, ಬಡವರಿಗೆ ಮನೆಗಳು ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು ಎಂದರು.
ಸಮಾರಂಭದಲ್ಲಿ ಸಂಸದ ಪಿ.ಸಿ.ಮೋಹನ್, ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯಾಧ್ಯಕ್ಷ ಅಬ್ದುಲ್ ಅಝೀಮ್, ಮಾಜಿ ಶಾಸಕ ನಾರಾಯಣ ಸ್ವಾಮಿ, ಪಾಲಿಕೆ ಸದಸ್ಯರಾದ ಪೂರ್ಣಿಮಾ ಶ್ರೀನಿವಾಸ್, ಪದ್ಮಾವತಿ ಶ್ರೀನಿವಾಸ್, ಎಸ್.ರಾಜು, ಮುಖಂಡರಾದ ಎನ್.ವೀರಣ್ಣ, ಸಚ್ಚಿದಾನಂದಮೂರ್ತಿ, ಸಿದ್ದಲಿಂಗಯ್ಯ, ಮಂಜುಳಾದೇವಿ ಶ್ರೀನಿವಾಸ್, ರಮೇಶ್, ಚಿದಾನಂದಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X