ನಾಳೆಯ ಬ್ಯಾರಿ ಕಾರ್ಯಕ್ರಮ ರದ್ದು
ಮಂಗಳೂರು, ಅ.7: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ವತಿಯಿಂದ ಅ.9ರಂದು ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಗಿದ್ದ ಬ್ಯಾರಿ ಭಾಷಾ ಸಪ್ತಾಹದ ಸಮಾರೋಪ ಸಮಾರಂಭವನ್ನು ಕಾರಣಾಂತರಗಳಿಂದ ರದ್ದುಪಡಿಸಲಾಗಿದೆ. ಬ್ಯಾರಿ ಸಪ್ತಾಹದ ಅಂಗವಾಗಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಮುಂದೆ ಸೂಚಿಸಿದ ದಿನಾಂಕದಂದು ಬಹುಮಾನ ವಿತರಿಸಲಾಗುವುದು ಎಂದು ಅಕಾಮಿಯ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





