Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಬಿಬಿಎಂಪಿ ವಿಭಜನೆ’ ಪುನರುಚ್ಚರಿಸಿದ...

‘ಬಿಬಿಎಂಪಿ ವಿಭಜನೆ’ ಪುನರುಚ್ಚರಿಸಿದ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ8 Oct 2016 11:00 PM IST
share
‘ಬಿಬಿಎಂಪಿ ವಿಭಜನೆ’ ಪುನರುಚ್ಚರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ.8: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯನ್ನು ಸುಗಮ ಆಡಳಿತದ ದೃಷ್ಟಿಯಿಂದ ನಮ್ಮ ಅಧಿಕಾರವಧಿಯಲ್ಲೇ ವಿಭಜನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಶನಿವಾರ ನಗರದ ಕೊಟ್ಟಿಗೆಪಾಳ್ಯ ಹಾಗೂ ಲಕ್ಷ್ಮೀದೇವಿ ನಗರ ವಾರ್ಡ್‌ಗಳಲ್ಲಿ ಬಿಡಿಎ ವತಿಯಿಂದ ವಿವಿಧ ಅಭಿವೃದ್ಧಿ ಕಾಮ ಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಬೆಂಗಳೂರು ಮಹಾನಗರವು ಸಾಕಷ್ಟು ವಿಶಾಲವಾಗಿ ಬೆಳೆದಿದ್ದು, ಒಬ್ಬ ಮೇಯರ್‌ರಿಂದ ಆಡಳಿತ ನಿರ್ವಹಣೆ ಕಷ್ಟವಾಗಲಿದೆ ಎಂದರು.

ಬೆಂಗಳೂರಿನ ಜನಸಂಖ್ಯೆ ಒಂದು ಕೋಟಿಗೂ ಹೆಚ್ಚಿದೆ. ವಾಹನ ಗಳ ಸಂಖ್ಯೆ 55 ಲಕ್ಷ ದಾಟಿದೆ, ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಿದೆ. ಆದುದರಿಂದಲೇ, ಬಿಬಿಎಂಪಿಯನ್ನು ಆಡಳಿತಾತ್ಮಕವಾಗಿ 3-4 ವಿಭಾಗಗಳಾಗಿ ವಿಂಗಡಿಸಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಮ್ಮ ನಿರ್ಧಾರವನ್ನು ತಾತ್ಕಾಲಿಕ ವಾಗಿ ಮುಂದೂಡಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಪಾಲಿಕೆಯ ಆಸ್ತಿಯನ್ನು ಅಡವಿಟ್ಟಿದ್ದು, ನಗರದ ಜನತೆ ಕಸದ ಸಮಸ್ಯೆಎದುರಿಸುವಂತೆ ಮಾಡಿದ್ದು ಬಿಜೆಪಿಯ ಬಳುವಳಿ. ಹುಚ್ಚನ ಮದು ವೇಲಿ ಉಂಡೋಣೆ ಜಾಣ ಎಂಬಂತೆ ಇತ್ತು ಬಿಜೆಪಿ ಆಡಳಿತದ ಅವಧಿ. ಸಿಕ್ಕವರಿಗೆ ಸೀರುಂಡೆ ಎಂಬಂತೆ ಬಿಜೆಪಿ ನಾಯಕರು ವರ್ತಿಸುತ್ತಿದ್ದರು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ 30 ಲಕ್ಷ ಆಸ್ತಿಗಳಿವೆ, ಈಗ ಗುರುತಿಸಿರುವುದು 19 ಲಕ್ಷ ಮಾತ್ರ. ಇನ್ನು 11 ಲಕ್ಷ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಒಳಪಟ್ಟಿಲ್ಲ. ಅವುಗಳನ್ನೆಲ್ಲ ಗುರುತಿಸಿ ತೆರಿಗೆ ಸಂಗ್ರಹ ಮಾಡಿದರೆ, ಸರಕಾರಕ್ಕೆ ಈಗ ಬರುತ್ತಿರುವ ಆದಾಯ ದುಪ್ಪಟ್ಟಾಗುತ್ತದೆ. ಸುಮಾರು 2-3 ಸಾವಿರ ಕೋಟಿ ರೂ.ಹೆಚ್ಚುವರಿ ತೆರಿಗೆ ಸಂಗ್ರಹವಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.


ನಾನು ತೆರಿಗೆಯನ್ನು ಹೆಚ್ಚಳ ಮಾಡುವಂತೆ ಪ್ರಸ್ತಾಪ ಮಾಡು ವುದಿಲ್ಲ. ಆದರೆ, ನ್ಯಾಯ ಸಮ್ಮತವಾಗಿ ತೆರಿಗೆ ಸಂಗ್ರಹವಾದರೆ, ಪಾಲಿಕೆಗೆ ಹೆಚ್ಚಿನ ಆದಾಯ ಬರುತ್ತದೆ. ಇದರಿಂದ, ನಗರದ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.ೆಂಪೇಗೌಡ ಬಡಾವಣೆಯಲ್ಲಿ 15 ದಿನಗಳಲ್ಲಿ 5 ಸಾವಿರ ನಿವೇಶನ ಗಳನ್ನು ಹಂಚಿಕೆ ಮಾಡುತ್ತೇವೆ. ಅಲ್ಲದೆ, ಹೆಚ್ಚುವರಿಯಾಗಿ 5 ಸಾವಿರ ನಿವೇಶನಗಳನ್ನು ನಿರ್ಮಾಣ ಮಾಡುವಂತೆ ಬಿಡಿಎಗೆ ಸೂಚನೆ ನೀಡಿದ್ದೇನೆ. ಸಂಚಾರ ದಟ್ಟಣೆ ನಿವಾರಣೆಗೆ ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೆ 1761 ಕೋಟಿ ರೂ.ವೆಚ್ಚದಲ್ಲಿ ಉಕ್ಕಿನ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.ುಡಿಯುವ ನೀರು: ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಇನ್ನಿತರ ನಗರ, ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸಲು 24 ಟಿಎಂಸಿ ಅಗತ್ಯವಿದೆ. ಇದಕ್ಕಿಂತ ಹೆಚ್ಚಿನ ನೀರು ಸಂಗ್ರಹವಾದರೆ ಮಾತ್ರ ತಮಿಳುನಾಡಿಗೆ ನೀರು ಹರಿಸಲಾಗುವುದು. ಹೆಚ್ಚುವರಿ ನೀರು ಬರದಿದ್ದರೆ, ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆಯಾದರೂ ನೀರು ಹರಿಸಲು ಆಗುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಣೆ ನೀಡಿದರು.
ನಗರದಲ್ಲಿ ರಸ್ತೆಗಳನ್ನು ನಿರ್ಮಿಸಲು ಮರಗಳನ್ನು ಕಡಿಯಬೇಕಾದ ಅನಿವಾರ್ಯತೆಯಿದೆ. ಆದರೆ, ಎಲ್ಲ ಮರಗಳನ್ನು ಕಡಿದು ಬೆಂಗಳೂರನ್ನು ಬೋಳು ನಗರವನ್ನಾಗಿ ಮಾಡುವುದಿಲ್ಲ. ಒಂದು ಮರಕ್ಕೆ ಬದಲಾಗಿ 10-20 ಸಸಿಗಳನ್ನು ನೆಟ್ಟು, ಅವುಗಳ ಪೋಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಸಂಸದ ಡಿ.ಕೆ.ಸುರೇಶ್, ಶಾಸಕರಾದ ಮುನಿರತ್ನ, ಭೈರತಿ ಬಸವರಾಜ, ಮೇಯರ್ ಪದ್ಮಾವತಿ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.


ಸುಮ್ಮನೆ ಹಣ ಖರ್ಚು ಮಾಡುತ್ತಿಲ್ಲ
ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೆ 1,761 ಕೋಟಿ ರೂ.ವೆಚ್ಚದಲ್ಲಿ ಉಕ್ಕಿನ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ನಾವು ಸಮ್ಮನೆ ಹಣ ಖರ್ಚು ಮಾಡುತ್ತಿದ್ದೀವಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಂತೆ, ಮಧ್ಯ ಪ್ರವೇಶಿಸಿದ ವ್ಯಕ್ತಿಯೊಬ್ಬರು ಅದೇ ದುಡ್ಡನ್ನು ಬಡವರಿಗೆ ಕೊಟ್ಟರೆ ಆಗಲ್ವಾ ಸಾರ್ ಎಂದರು.
ಸೇತುವೆ ನಿರ್ಮಾಣ ಮಾಡದಿದ್ದರೆ ನೀನು ಹಾರಿಕೊಂಡು ಹೋಗುತ್ತೀಯಾ, ನಿನ್ನ ಊರು ಯಾವುದು ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು. ಅದಕ್ಕೆ ಆತ ರಾಯಚೂರು ಸಾರ್ ಎಂದನು. ಕೂಡಲೇ ಆತನನ್ನು ಸ್ಥಳದಿಂದ ಹೊರಗೆ ಕಳುಹಿಸಲು ಮುಂದಾದ ಪೊಲೀಸರನ್ನು ತಡೆದ ಮುಖ್ಯಮಂತ್ರಿ, ಆತ ದಸರಾ ಹಬ್ಬದ ಖುಷಿಯಲ್ಲಿದ್ದಾನೆ. ಹಬ್ಬ ಎಂದು ಬೆಳಗ್ಗೆನೆ ಹೊಸ ಬಟ್ಟೆ ಹಾಕಿಕೊಂಡು ಬಂದಿದ್ದಾನೆ ಇರಲಿ ಬಿಡಿ ಎಂದು ಕಿಚಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X