ಅರ್ಹರಿಗೆ ಶೀಘ್ರವೇ ಹಕ್ಕುಪತ್ರ ವಿತರಣೆ: ಪ್ರಮೋದ್
ಹೆಬ್ರಿ, ಅ.8: ಜಿಲ್ಲೆಯಲ್ಲಿ 94 ಸಿ ಮತ್ತು 94ಸಿಸಿ ಯೋಜನೆಯಡಿ ಅರ್ಜಿ ಸಲ್ಲಿಸಿರುವವರಿಗೆ ಶೀಘ್ರದಲ್ಲಿ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಹೆಬ್ರಿಯ ನಾರಾಯಣಗುರು ಸಭಾಭವನದಲ್ಲಿ ಗುರುವಾರ ನಡೆದ ಅಜೆಕಾರು ಹೋಬಳಿ ಮಟ್ಟದ ಜನಸ್ಪಂದನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಾರ್ಕಳದಲ್ಲಿ ಸುಮಾರು 6,900ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, ಸಲ್ಲಿಸಿರುವ ಅರ್ಜಿಗಳನ್ನು ತಿರಸ್ಕೃತ ಮಾಡುವ ಮೊದಲು ಸ್ಳಳೀಯ ಶಾಸಕರಿಗೆ ಮಾಹಿತಿ ನೀಡುವಂತೆ ಸೂಚಿಸಿದ ಸಚಿವರು, ತಿರಸ್ಕೃತಗೊಂಡ ಅರ್ಜಿಗಳ ಬಗ್ಗೆ ರಾಜ್ಯದ ಕಂದಾಯ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು. ಜನಸ್ಪಂದನ ಕಾರ್ಯಕ್ರಮದ ಮೂಲಕ ಜಿಲ್ಲೆಯ 9 ಹೋಬಳಿಗಳಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅವುಗಳನ್ನು ಶೀಘ್ರದಲ್ಲಿ ಇತ್ಯರ್ಥ ಪಡಿಸಲಾಗುವುದು. ಸಭೆಯಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಕಾಲಮಿತಿಯಲ್ಲಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ವಿ.ಸುನೀಲ್ ಕುಮಾರ್ ಮಾತನಾಡಿ, ತಾಲೂಕಿನಲ್ಲಿ 94 ಸಿ ಯೋಜನೆಯಡಿ ಡಿಸೆಂಬರ್‌ನೊಳಗೆ 2,000 ಹಕ್ಕುಪತ್ರ ಗಳನ್ನು ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್ ಕೋಟ್ಯಾನ್, ಕಾರ್ಕಳ ತಾಪಂ ಅಧ್ಯಕ್ಷೆ ಮಾಲಿನಿ ಜೆ ಶೆಟ್ಟಿ, ಹೆಬ್ರಿ ಗ್ರಾಪಂ ಅಧ್ಯಕ್ಷ ಸುಧಾಕರ ಹೆಗ್ಡೆ, ಜಿಪಂ ಸದಸ್ಯ ಜ್ಯೋತಿ ಹರೀಶ್, ತಾಪಂ ಸದಸ್ಯ ಚಂದ್ರಶೇಖರ ಶೆಟ್ಟಿ, ಅಮೃತ್ ಕುಮಾರ್ ಶೆಟ್ಟಿ, ಲಕ್ಷ್ಮೀ ದಯಾನಂದ, ರಮೇಶ್ ಪೂಜಾರಿ, ನಾಡ್ಪಾಲು ಗ್ರಾಪಂ ಅಧ್ಯಕ್ಷ ಜಲಜಾ ಪೂಜಾರ್ತಿ, ಮುದ್ರಾಡಿ ಗ್ರಾಪಂ ಅಧ್ಯಕ್ಷ ಶಶಿಕಲಾ ಡಿ. ಪೂಜಾರಿ, ಶಿವಪುರ ಗ್ರಾಪಂ ಅಧ್ಯಕ್ಷ ಸುಗಂಧಿ ನಾಯ್ಕಾ, ಜಿಪಂ ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್ ಉಪಸ್ಥಿತರಿದ್ದರು.
ಕಾರ್ಕಳ ತಹಶೀಲ್ದಾರ್ ಗುರುಪ್ರಸಾದ್ ಸ್ವಾಗತಿಸಿದರು.
ಕುದ್ರೋಳಿ: ‘ಸಮುದಾಯದತ್ತ ಶಾಲೆ’ ಕಾರ್ಯಕ್ರಮ
ಮಂಗಳೂರು, ಅ.8: ಕುದ್ರೋಳಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಪ್ರಸಕ್ತ ಸಾಲಿನ ಪ್ರಥಮ ಸಮುದಾಯದತ್ತ ಶಾಲೆ x





