ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ: ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ
ಕೊಯ್ಲದಲ್ಲಿ ಪಶು ವೈದ್ಯಕೀಯ ಕಾಲೇಜಿಗೆ ಶಿಲಾನ್ಯಾಸ

ಪುತ್ತೂರು, ಅ.9: ರಾಜ್ಯದಲ್ಲಿ ಬೇಡಿಕೆಗೆ ಅನುಗುಣವಾಗಿ 650 ಪಶು ವೈದ್ಯರನ್ನು ನೇಮಕ ಮಾಡಲಾಗಿದ್ದು, ಇನ್ನೂ 692 ಪಶು ವೈದ್ಯರು ಮತ್ತು ಸಹಾಯಕ ನಿರ್ದೇಶಕರ ಹುದ್ದೆ ಖಾಲಿಯಿದ್ದು, ಪಶು ಸಂಗೋಪನಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ಹುದ್ದೆಗಳಿಗೆ ನೇಮಕಾತಿ ಮಾಡಲು ಸರಕಾರ ಕ್ರಮ ಕೈಗೊಳ್ಳಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಮೀನುಗಾರಿಕಾ ವಿಶ್ವ ವಿದ್ಯಾನಿಲಯ ಬೀದರ್ ಇದರ ನೇತೃತ್ವದಲ್ಲಿ ಪುತ್ತೂರು ತಾಲೂಕಿನ ಕೊಯ್ಲದಲ್ಲಿ 142 ಕೋ.ರೂ ವೆಚ್ಚದಲ್ಲಿ ನಿರ್ಮಿಸಲಿರುವ ಪಶು ವೈದ್ಯಕೀಯ ಕಾಲೇಜಿನ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯದ ಜನತೆಗೆ ತುರ್ತಾಗಿ ಆಗಬೇಕಾದ ಕೆಲಸಗಳಿಗೆ ಆರ್ಥಿಕ ನಿಯಮಾವಳಿಯನ್ನು ಸಡಿಲಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಪಶು ವೈದ್ಯಕೀಯ ಹಾಗೂ ಇನ್ನಿತರ ತುರ್ತು ಸೇವಾ ಇಲಾಖೆಗಳಿಗೆ ನೇಮಕಾತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದವರು ತಿಳಿಸಿದರು.
ಸರಕಾರವು ಹಸಿವು ಮುಕ್ತ ರಾಜ್ಯದ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಬಡವರಿಗೆ ಉಚಿತ ಅಕ್ಕಿ ಮತ್ತು ಗೋಧಿಯನ್ನು ವಿತರಣೆ ಮಾಡುತ್ತಿದೆ. ಮುಂದಿನ ವರ್ಷಗಳಿಂದ ಕ್ಷೀರಭಾಗ್ಯ ಯೋಜನೆಯನ್ನು 3ರಿಂದ 5ದಿನಕ್ಕೆ ವಿಸ್ತರಣೆ ಹಾಗೂ ಪಡಿತರ ಅಕ್ಕಿ ಮತ್ತು ಗೋಧಿಯನ್ನು 3 ಕಿಲೋದಿಂದ 5ಕಿಲೋಗೆ ಹೆಚ್ಚಿಸಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಅಂಗಾರ ಮಾತನಾಡಿ, ಮುಂದಿನ ದಿನಗಳಲ್ಲಿ ಪ್ರಸ್ತಾವಿತ ಕಡಬ ತಾಲೂಕು ರಚನೆ ಹಾಗೂ ಕುಮಾರಧಾರಾ ನದಿಯಿಂದ ಕೊಯ್ಲ ಮತ್ತು ರಾಮಕುಂಜ ಗ್ರಾಮಕ್ಕೆ ಕುಡಿಯುವ ನೀರಿನ ಬೃಹತ್ ಕುಡಿಯುವ ನೀರಿನ ಯೋಜನೆ ಪೂರ್ಣವಾಗುವಲ್ಲಿ ಮುಖ್ಯಮಂತ್ರಿಗಳು ಪ್ರಯತ್ನಿಸಬೇಕು ಎಂದರು. ಈ ವೇಳೆ ಮಾತನಾಡಿದ ಪಶುಸಂಗೋಪನಾ ಸಚಿವ ಎ.ಮಂಜು, ಕೊಯ್ಲದಲ್ಲಿ ಮಲೆನಾಡು ಗಿಡ್ಡತಳಿಯ ರಾಸು ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಸಚಿವ ಬಿ.ರಮಾನಾಥ ರೈ ಮಾತನಾಡಿ, ಕಡಬ ತಾಲೂಕು ಹಾಗೂ ಕಡಬಕ್ಕೆ ಪ್ರತ್ಯೇಕ ಪದವಿ ಕಾಲೇಜು ಜನರ ಬಹುದಿನಗಳ ಬೇಡಿಕೆಯಾಗಿದೆ ಎಂದರು. ಸಚಿವ ಯು.ಟಿ.ಖಾದರ್ ಮಾತನಾಡಿ, ಕೊಯ್ಲದಲ್ಲಿ ಕೆಎಂಎಫ್ ಒಂದು ಘಟಕವನ್ನು ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.
ಸಚೇತಕ ಐವನ್ ಡಿಸೋಜಾ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ಶಕುಂತಳಾ ಟಿ.ಶೆಟ್ಟಿ, ಅಭಯ ಚಂದ್ರ ಜೈನ್, ಮುಹಿಯುದ್ದೀನ್ ಬಾವ, ಪ್ರತಾಪ್‌ಚಂದ್ರ ಶೆಟ್ಟಿ, ಗ್ರಾಪಂ ಅಧ್ಯಕ್ಷರಾದ ಮೀನಾಕ್ಷಿ, ಪ್ರಶಾಂತ್ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಪಶುಪಾಲನಾ ಇಲಾಖೆಯ ನಿರ್ದೇಶಕ ಡಾ.ಕೆ.ಮುಹಮ್ಮದ್ ಝಫ್ರುಲ್ಲಾ ಖಾನ್, ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ವಸಂತ ಎಂ.ಶೆಟ್ಟಿ ಭಾಗವಹಿಸಿದ್ದರು.
ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಸ್ವಾಗತಿಸಿದರು. ಪತ್ರಕರ್ತ ಮನೋಹರ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಪುತ್ತೂರು, ಅ.9: ರಾಜ್ಯದಲ್ಲಿ ಬೇಡಿಕೆಗೆ ಅನುಗುಣವಾಗಿ 650 ಪಶು ವೈದ್ಯರನ್ನು ನೇಮಕ ಮಾಡಲಾಗಿದ್ದು, ಇನ್ನೂ 692 ಪಶು ವೈದ್ಯರು ಮತ್ತು ಸಹಾಯಕ ನಿರ್ದೇಶಕರ ಹುದ್ದೆ ಖಾಲಿಯಿದ್ದು, ಪಶು ಸಂಗೋಪನಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ಹುದ್ದೆಗಳಿಗೆ ನೇಮಕಾತಿ ಮಾಡಲು ಸರಕಾರ ಕ್ರಮ ಕೈಗೊಳ್ಳಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಮೀನುಗಾರಿಕಾ ವಿಶ್ವ ವಿದ್ಯಾನಿಲಯ ಬೀದರ್ ಇದರ ನೇತೃತ್ವದಲ್ಲಿ ಪುತ್ತೂರು ತಾಲೂಕಿನ ಕೊಯ್ಲದಲ್ಲಿ 142 ಕೋ.ರೂ ವೆಚ್ಚದಲ್ಲಿ ನಿರ್ಮಿಸಲಿರುವ ಪಶು ವೈದ್ಯಕೀಯ ಕಾಲೇಜಿನ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯದ ಜನತೆಗೆ ತುರ್ತಾಗಿ ಆಗಬೇಕಾದ ಕೆಲಸಗಳಿಗೆ ಆರ್ಥಿಕ ನಿಯಮಾವಳಿಯನ್ನು ಸಡಿಲಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಪಶು ವೈದ್ಯಕೀಯ ಹಾಗೂ ಇನ್ನಿತರ ತುರ್ತು ಸೇವಾ ಇಲಾಖೆಗಳಿಗೆ ನೇಮಕಾತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದವರು ತಿಳಿಸಿದರು.
ಸರಕಾರವು ಹಸಿವು ಮುಕ್ತ ರಾಜ್ಯದ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಬಡವರಿಗೆ ಉಚಿತ ಅಕ್ಕಿ ಮತ್ತು ಗೋಧಿಯನ್ನು ವಿತರಣೆ ಮಾಡುತ್ತಿದೆ. ಮುಂದಿನ ವರ್ಷಗಳಿಂದ ಕ್ಷೀರಭಾಗ್ಯ ಯೋಜನೆಯನ್ನು 3ರಿಂದ 5ದಿನಕ್ಕೆ ವಿಸ್ತರಣೆ ಹಾಗೂ ಪಡಿತರ ಅಕ್ಕಿ ಮತ್ತು ಗೋಧಿಯನ್ನು 3 ಕಿಲೋದಿಂದ 5ಕಿಲೋಗೆ ಹೆಚ್ಚಿಸಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಅಂಗಾರ ಮಾತನಾಡಿ, ಮುಂದಿನ ದಿನಗಳಲ್ಲಿ ಪ್ರಸ್ತಾವಿತ ಕಡಬ ತಾಲೂಕು ರಚನೆ ಹಾಗೂ ಕುಮಾರಧಾರಾ ನದಿಯಿಂದ ಕೊಯ್ಲ ಮತ್ತು ರಾಮಕುಂಜ ಗ್ರಾಮಕ್ಕೆ ಕುಡಿಯುವ ನೀರಿನ ಬೃಹತ್ ಕುಡಿಯುವ ನೀರಿನ ಯೋಜನೆ ಪೂರ್ಣವಾಗುವಲ್ಲಿ ಮುಖ್ಯಮಂತ್ರಿಗಳು ಪ್ರಯತ್ನಿಸಬೇಕು ಎಂದರು. ಈ ವೇಳೆ ಮಾತನಾಡಿದ ಪಶುಸಂಗೋಪನಾ ಸಚಿವ ಎ.ಮಂಜು, ಕೊಯ್ಲದಲ್ಲಿ ಮಲೆನಾಡು ಗಿಡ್ಡತಳಿಯ ರಾಸು ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಸಚಿವ ಬಿ.ರಮಾನಾಥ ರೈ ಮಾತನಾಡಿ, ಕಡಬ ತಾಲೂಕು ಹಾಗೂ ಕಡಬಕ್ಕೆ ಪ್ರತ್ಯೇಕ ಪದವಿ ಕಾಲೇಜು ಜನರ ಬಹುದಿನಗಳ ಬೇಡಿಕೆಯಾಗಿದೆ ಎಂದರು. ಸಚಿವ ಯು.ಟಿ.ಖಾದರ್ ಮಾತನಾಡಿ, ಕೊಯ್ಲದಲ್ಲಿ ಕೆಎಂಎಫ್ ಒಂದು ಘಟಕವನ್ನು ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.
ಸಚೇತಕ ಐವನ್ ಡಿಸೋಜಾ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ಶಕುಂತಳಾ ಟಿ.ಶೆಟ್ಟಿ, ಅಭಯ ಚಂದ್ರ ಜೈನ್, ಮುಹಿಯುದ್ದೀನ್ ಬಾವ, ಪ್ರತಾಪ್‌ಚಂದ್ರ ಶೆಟ್ಟಿ, ಗ್ರಾಪಂ ಅಧ್ಯಕ್ಷರಾದ ಮೀನಾಕ್ಷಿ, ಪ್ರಶಾಂತ್ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಪಶುಪಾಲನಾ ಇಲಾಖೆಯ ನಿರ್ದೇಶಕ ಡಾ.ಕೆ.ಮುಹಮ್ಮದ್ ಝಫ್ರುಲ್ಲಾ ಖಾನ್, ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ವಸಂತ ಎಂ.ಶೆಟ್ಟಿ ಭಾಗವಹಿಸಿದ್ದರು.
ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಸ್ವಾಗತಿಸಿದರು. ಪತ್ರಕರ್ತ ಮನೋಹರ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಕೊಯ್ಲದ ಪಶು ಸಂಗೋಪನಾ ಇಲಾಖೆಯಲ್ಲಿ ಇರುವ 895 ಎಕರೆ ಜಮೀನಿನಲ್ಲಿ 247 ಎಕರೆ ಜಮೀನಿನಲ್ಲಿ ಪ್ರಸಾವಿತ ಪಶು ವೈದ್ಯಕೀಯ ಕಾಲೇಜು, ಪಶುವೈದ್ಯಕೀಯ ಆಸ್ಪತ್ರೆ, ವಿದ್ಯಾರ್ಥಿನಿಲಯ ಹಾಗೂ ಪಶು ಸಂಗೋಪನಾ ಕೇಂದ್ರವನ್ನು ನಿರ್ಮಿಸಲಾಗುವುದು. ಇದಕ್ಕಾಗಿ 142 ಕೋ.ರೂ. ಮಂಜೂರುಗೊಳಿಸಲಾಗಿದ್ದು, ಪ್ರಥಮ ಹಂತದಲ್ಲಿ 110.5 ಕೋ.ರೂ. ಕಾಮಗಾರಿ ನಡೆಯಲಿದೆ. ಇಲ್ಲಿ 60 ವಿದ್ಯಾರ್ಥಿಗಳ ಕಲಿಕೆಗೆ ಅವಕಾಶವಾಗಲಿದೆ. ಅಲ್ಲದೆ ಇದರೊಂದಿಗೆ ಗದಗ ಮತ್ತು ಅಥಣಿ ಜಿಲ್ಲೆಗಳಲ್ಲಿಯೂ ಪಶು ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ. ಜಾನುವಾರು ನಮ್ಮ ಸಂಪತ್ತಾಗಿದ್ದು, ಅದನ್ನು ಅಭಿವೃದ್ಧಿ ಪಡಿಸುವುದು ಈ ಯೋಜನೆ ಮೂಲ ಉದ್ದೇಶ.
-ಸಿದ್ದರಾಮಯ್ಯ, ಮುಖ್ಯಮಂತ್ರಿ ಕೋಮುವಾದ ಸಹಿಸಲಾಗದು
ರಾಜ್ಯದಲ್ಲಿ ಸಂವಿಧಾನ ಬದ್ಧವಾದ ಜಾತ್ಯತೀತ ನೆಲೆಯಲ್ಲಿ ಸೌಹಾರ್ದ ಕಾಪಾಡಲು ಸರಕಾರ ಬದ್ಧವಾಗಿದೆ. ಕೋಮುವಾದವನ್ನು ಯಾರೂ ಮಾಡಿದರೂ ಸಹಿಸಲು ಸಾಧ್ಯವಿಲ್ಲ. ಸರಕಾರ ಜನರಿಗೆ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ತಲುಪಬೇಕೇ ಹೊರತು ಕೋಮುವಾದದ ಮೂಲಕ ಅಲ್ಲ. ಎಲ್ಲಾ ಜಾತಿ ಧರ್ಮದ ಜನರು ಒಂದು ತಾಯಿಯ ಮಕ್ಕಳಂತೆ ಬದುಕುವ ವಾತಾವರಣ ನಿರ್ಮಿಸುವುದು ರಾಜ್ಯ ಸರಕಾರದ ಗುರಿ.
‘ಮುಂದಿನ ಹಂತದಲ್ಲಿ ಕಡಬ ತಾಲೂಕು ಘೋಷಣೆ’
ರಾಜ್ಯದಲ್ಲಿ 43 ಹೊಸ ತಾಲೂಕು ರಚನೆ ಯೋಜನೆ ಸರಕಾರದ ಮುಂದಿದ್ದು, ಈ ಭಾಗದ ಜನರ ಬೇಡಿಕೆಯಾಗಿರುವ ಕಡಬ ತಾಲೂಕು ರಚನೆಗೆ ಮುಂದಿನ ಘೋಷಣೆ ಸಂದರ್ಭ ಆದ್ಯತೆ ನೀಡಲಾಗುವುದು. ಅಲ್ಲದೆ ಕಡಬಕ್ಕೆ ನೂತನ ಪದವಿ ಕಾಲೇಜು ಮಂಜೂರುಗೊಳಿಸಲು ಕ್ರಮ ಕೈಗೊಳ್ಳಲಾಗುವುದು.