ನಾಡು ಸಂಕಷ್ಟಗಳಿಂದ ಪಾರಾಗಲಿ: ಬಿಎಸ್‌ವೈ

ಬೆಂಗಳೂರು, ಅ. 9: ಜನರು ಎಲ್ಲ ರೀತಿಯ ಸಂಕಷ್ಟಗಳಿಂದ ಪಾರಾಗಿ ನಾಡಿನಲ್ಲಿ ಸಮೃದ್ಧಿ ನೆಲೆಸಿ, ಎಲ್ಲರ ಬದುಕು ಹಸನಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನಾಡಿನ ಜನತೆಗೆ ದಸರಾಗೆ ಶುಭ ಕೋರಿದ್ದಾರೆ.
ಆಯುಧ ಪೂಜೆ ಮತ್ತು ವಿಜಯ ದಶಮಿ ಇಂದಿಗೂ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ನಾಡಿನ ಜನ ಶ್ರದ್ಧೆಯಿಂದ ಇಂತಹ ಆಚರಣೆಯಲ್ಲಿ ಪಾಲ್ಗೊಳ್ಳುತ್ತಿರುವುದು ಸಂತಸದ ಸಂಗತಿ. ನಾಡಿನ ಶ್ರೀಮಂತ ಪರಂಪರೆಯನ್ನು ಈ ನಾಡ ಹಬ್ಬವಾದ ದಸರಾ, ಇಡೀ ವಿಶ್ವಕ್ಕೆ ಪರಿಚಯಿಸುತ್ತಿದ್ದು, ಇಂತಹ ಆಚರಣೆಗಳು ನಮಗೆಲ್ಲಾ ಹೆಮ್ಮೆಯ ಸಂಗತಿಯಾಗಿದೆ ಎಂದು ಯಡಿಯೂರಪ್ಪ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





