ಬೈಕ್‌ಗೆ ಬುಲೆಟ್ ಟ್ಯಾಂಕರ್ ಢಿಕ್ಕಿ: ಸವಾರ ಗಂಭೀರ

ಬಂಟ್ವಾಳ, ಅ.11: ಬೈಕೊಂದಕ್ಕೆ ಬುಲೆಟ್ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಲ್ಲಡ್ಕ ಸಮೀಪದ ಮಾಣಿಯಲ್ಲಿ ಸಂಭವಿಸಿದೆ.
ಮಾಣಿ ಬಳಿಯ ಸೂರಿಕುಮೇರು ಪೆಟ್ರೋಲ್ ಪಂಪ್ ಬಳಿಯ ನಿವಾಸಿ, ಮಾಣಿಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಶಾಲಾಬಸ್ ಚಾಲಕ ವಲ್ಟಿ (40) ಗಂಭೀರ ಗಾಯಗೊಂಡ ಬೈಕ್ ಸವಾರ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಲ್ಟಿ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬೆಂಗಳೂರು ಕಡೆಯಿಂದ ಮಂಗಳೂರಿನತ್ತ ಆಗಮಿಸುತ್ತಿದ್ದ ಬುಲೆಟ್ ಟ್ಯಾಂಕರ್ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಟ್ಯಾಂಕರ್ ಚಾಲಕ ಮತ್ತು ಕ್ಲೀನರ್ ಟ್ಯಾಂಕರ್‌ನ್ನು ಅಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲಹೊತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





