Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಬ್ಬದ ಜಿಲ್ಲೆಯಲ್ಲಿ ಸಾಮರಸ್ಯದ ಕೊರತೆ:...

ಹಬ್ಬದ ಜಿಲ್ಲೆಯಲ್ಲಿ ಸಾಮರಸ್ಯದ ಕೊರತೆ: ಸಚಿವ ರೈ ಬೇಸರ

ವಾರ್ತಾಭಾರತಿವಾರ್ತಾಭಾರತಿ11 Oct 2016 3:22 PM IST
share
ಹಬ್ಬದ ಜಿಲ್ಲೆಯಲ್ಲಿ ಸಾಮರಸ್ಯದ ಕೊರತೆ: ಸಚಿವ ರೈ ಬೇಸರ

ಬಂಟ್ವಾಳ, ಅ.11: ವರ್ಷ ಪೂರ್ತಿ ಒಂದಿಲ್ಲೊಂದು ಜಾತಿ, ಧರ್ಮಗಳ ಹಬ್ಬ ಹರಿದಿನಗಳು ನಡೆಯುವ ಕರಾವಳಿ ಜಿಲ್ಲೆಗಳು ಹಬ್ಬದ ಜಿಲ್ಲೆಗಳಾಗಿವೆ. ಆದರೆ ಇಲ್ಲಿ ಮನುಷ್ಯ ಮನುಷ್ಯರ ನಡುವೆ ಸಾಮರಸ್ಯದ ಕೊರತೆ ಎದ್ದು ಕಾಣುತ್ತಿರುವುದು ಖೇದಕರ ಸಂಗತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಅವರು ಬಂಟ್ವಾಳ ಬೈಪಾಸ್‌ನಲ್ಲಿರುವ ಲೆವಿನ್ ಸಮೂಹ ಸಂಸ್ಥೆಗಳ ಕಚೇರಿಯಲ್ಲಿ ವಿಶಿಷ್ಟವಾಗಿ ನಡೆದ ಆಯುಧ ಪೂಜಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಮಾತನಾಡಿದರು.

ಗೋವು, ಧರ್ಮ, ಭಾಷೆ, ದೇಶ ಪ್ರೇಮದ ಹೆಸರಿನಲ್ಲಿ ಮನುಷ್ಯ ಮನುಷ್ಯನನ್ನೇ ಕೊಲ್ಲುತ್ತಿದ್ದಾನೆ. ಮತಾಂತರದ ಸುಳ್ಳು ಪ್ರಚಾರ ಮಾಡಿ ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಿ ಮನುಷ್ಯರ ನಡುವೆ ಅಂತರ ಹೆಚ್ಚಿಸುವ ಕೆಲಸ ನಡೆಯುತ್ತಿದೆ. ಬಹಳ ವರ್ಷಗಳ ಹಿಂದೆ ಅಸಮಾನತೆಯ ಕಾರಣದಿಂದ ಹಾಗೂ ಆಮಿಷಕ್ಕೆ, ಬಲವಂತದ ಮತಾಂತರ ನಡೆಯುತ್ತಿದ್ದವು. ಆದರೆ ವರ್ತಮಾನದಲ್ಲಿ ಜನರು ಪ್ರಜ್ಞಾವಂತರಾಗಿದ್ದು ಮತಾಂತರದಂತಹ ಯಾವುದೇ ಕಾರ್ಯ ನಡೆಯುತ್ತಿಲ್ಲ ಎಂದು ಅವರು ಹೇಳಿದರು.

ಸಮಾಜದಲ್ಲಿ ಕೋಮು ದ್ವೇಷ, ಅಶಾಂತಿಯ ವಾತಾವರಣ ಸೃಷ್ಟಿಯಾದಾಗ ಬಡವರು, ಅಮಾಯಕರು, ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಕೋಮುವಾದ ಮತ್ತು ಮತೀಯವಾದಿಗಳ ಸುಳ್ಳು ಸುದ್ದಿಗಳಿಗೆ ಕಿವಿ ಕೊಡದೆ ಜನರು ಮನುಷ್ಯತ್ವವನ್ನು ಮೈಗೂಡಿಸಿ ಪರಸ್ಪರ ಪ್ರೀತಿ ಸೌಹಾರ್ದತೆಯಿಂದ ಬಾಳಬೇಕಾಗಿದೆ ಎಂದು ಅವರು ಕರೆ ನೀಡಿದರು.

ಸಾರ್ವಜನಿಕರ ಉತ್ತಮ ಸೇವೆಗೆ ಹೆಸರಾಗಿರುವ ಲೆವಿನ್ ಸಮೂಹ ಸಂಸ್ಥೆಯು ತನ್ನ ಕಾರ್ಮಿಕರಿಗೆ ಅನುಕೂಲವಾಗುವಂತೆ ಕ್ರೀಡೋತ್ಸವ, ಕಣ್ಣು ತಪಾಸಣೆ ಶಿಬಿರಗಳನ್ನು ಹಮ್ಮಿಕೊಂಡು ಅಗತ್ಯ ಚಿಕಿತ್ಸೆಗಳನ್ನು ನೀಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಯುಧ ಪೂಜೆ ನಡೆಸುತ್ತಾ ಬಂದಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಅವರು ಶಾಘ್ಲಿಸಿದರು.

ಅಗ್ರಾರ್ ಚರ್ಚ್‌ನ ಧರ್ಮಗುರು ಲಿಗೋರಿ ಡಿಸೋಜ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. ಬಳಿಕ ಧರ್ಮಗುರು ಎಲ್ಲ ಹೂವಿನಿಂದ ಆಲಂಕೃತವಾದ ವಾಹನಗಳು ಹಾಗೂ ಯಂತ್ರೋಪಕರಣಗಳಿಗೆ ತೀರ್ಥ ಪ್ರೋಕ್ಷಣೆ ಮಾಡುವುದರೊಂದಿಗೆ ಪೂಜಾ ವಿಧಿವಿಧಾನ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ಲೆವಿನ್ ಕ್ರೀಡಾಕೂಟದಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಿದರು. ಬಳಿಕ ಎಲ್ಲ ಕಾರ್ಮಿಕರಿಗೆ ಹಾಗೂ ಕಾರ್ಮಿಕರ ಕುಟುಂಬಗಳಿಗಾಗಿ ಮಂಗಳೂರಿನ ಪ್ರಸಾದ್ ನೇತ್ರಾಲಯದ ವೈದ್ಯರ ತಂಡ ಉಚಿತ ಕಣ್ಣು ಚಿಕಿತ್ಸಾ ಶಿಬಿರವನ್ನು ನಡೆಸಿಕೊಟ್ಟರು. 

 ಮೊನಿಕ ರೋಡ್ರಿಗಸ್, ರಾಜೇಶ್ ರೋಡ್ರಿಗಸ್, ವರದರಾಜ್, ಪ್ರಸಾದ್ ಆಸ್ಪತ್ರೆಯ ಡಾ. ಸವಿತಾ ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ಮಾಲಕ ಪಿಯೂಸ್ ರೋಡ್ರಿಗಸ್ ಸ್ವಾಗತಿಸಿದರು. ರಾಜೇಶ್ ಕಕ್ಯೆಪದವು ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X