ಮಂಗಳೂರು ಕಾರಗೃಹದ ಬಳಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯ ಬಂಧನ
ಮಂಗಳೂರು, ಅ.11: ಮಂಗಳೂರು ಕಾರಗೃಹದ ಬಳಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಸುಹಾಸ್ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಬಗ್ಗೆ ಜೈಲಿನ ಭದ್ರತೆಯನ್ನು ನೋಡಿಕೊಳ್ಳುತ್ತಿರುವ ಕೆಎಸ್‌ಐಎಸ್ ಎಫ್ ಸಿಬ್ಬಂದಿಗಳು ಈತನನ್ನು ಪ್ರಶ್ನಿಸಲು ತೊಡಗಿದಾಗ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದನು. ಕೂಡಲೆ ಆತನನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿಗಳು ಬಂಧಿಸಿದ್ದಾರೆ. ಈತ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಇತ್ತೀಚೆಗಷ್ಟೆ ಬಿಡುಗಡೆಗೊಂಡಿದ್ದನು.
ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story





