Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರವಾರ: ಭಾರೀ ಮಳೆಗೆ ಗುಡ್ಡ ಕುಸಿತ

ಕಾರವಾರ: ಭಾರೀ ಮಳೆಗೆ ಗುಡ್ಡ ಕುಸಿತ

ಟ್ರಾಫಿಕ್ ಜಾಮ್‌ಗೆ ಪ್ರಯಾಣಿಕರು ಕಂಗಾಲು

ವಾರ್ತಾಭಾರತಿವಾರ್ತಾಭಾರತಿ11 Oct 2016 10:37 PM IST
share
ಕಾರವಾರ: ಭಾರೀ ಮಳೆಗೆ ಗುಡ್ಡ ಕುಸಿತ

ಕಾರವಾರ, ಅ.11: ಕಳೆದ ಎರಡು ದಿನಗಳಲ್ಲಿ ಸುರಿದ ಭಾರೀ ಮಳೆಗೆ ತಾಲೂಕಿನ ಮುದಗಾದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಡ್ಡ ಕುಸಿದು ಹೆದ್ದಾರಿಯ ಸಂಚಾರ ಮಂಗಳವಾರ ಅಸ್ತವ್ಯಸ್ತಗೊಂಡಿತು.

ಎಡೆಬಿಡದೆ ಸುರಿದ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಗುಡ್ಡದಲ್ಲಿನ ಬಂಡೆಕಲ್ಲುಗಳು ಸಹಿತ ಮಣ್ಣು ಬಿದ್ದ ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡವು.ಅಲ್ಲದೆ, ಜಿಲ್ಲೆಯ ಕರಾವಳಿಯ ಅಲ್ಲಲ್ಲಿ ಗುಡ್ಡ ಕುಸಿತ, ತಗ್ಗು ಪ್ರದೇಶ ಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ ಘಟನೆಗಳೂ ವರದಿಯಾಗಿವೆ. ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿಯನ್ನು ವಹಿಸಿಕೊಂಡಿರುವ ಐಆರ್‌ಬಿ ಕಂಪೆನಿ ಮುದಗಾದ ಹೆದ್ದಾರಿ ಮೇಲೆ ಬಿದ್ದಿದ್ದ ಬೃಹತ್ ಬಂಡೆಕಲ್ಲು, ಮಣ್ಣನ್ನು ತೆರವುಗೊಳಿಸುವ ಕಾರ್ಯಾ ಚರಣೆ ನಡೆಸಿತು. ಮಧ್ಯಾಹ್ನದ ವೇಳೆ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಈ ಸಂದರ್ಭದಲ್ಲಿ ಗುಡ್ಡ ಕುಸಿತಗೊಂಡ ಎರಡು ಕಡೆ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಗೋವಾ, ಮಂಗಳೂರು, ಹುಬ್ಬಳ್ಳಿ ಭಾಗಕ್ಕೆ ತೆರಳಬೇಕಾಗಿದ್ದ ಪ್ರಯಾಣಿಕರು ತೀವ್ರ ತೊಂದರೆ ಪಡುವಂತಾಯಿತು. ತಾಲೂಕಿನಲ್ಲಿ ಕಳೆದ ಒಂದು ತಿಂಗಳಿಂದ ಸೂಕ್ತ ಮಳೆಯಾಗಿರಲಿಲ್ಲ. ಸಂಬಂಧಪಟ್ಟ ಇಲಾಖೆಗಳ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಈ ಬಾರಿ ಶೇ.20ರಷ್ಟು ಮಳೆ ಕಡಿಮೆಯಾಗಿದೆ. ಆದರೆ, ಕಳೆದ ಎರಡು ದಿನಗಳಿಂದ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿದ್ದರಿಂದ ಮುದಗಾದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ರಸ್ತೆ ಪಕ್ಕದಲ್ಲಿ ಬೃಹತ್ ಗುಡ್ಡದಂತೆ ನಿಂತಿದ್ದ ಈ ಬಂಡೆಗಲ್ಲುಗಳನ್ನು ಐಆರ್‌ಬಿ ಕಂಪೆನಿಗಳು ಸ್ಫೋಟಕಗಳನ್ನು ಬಳಸಿ ತೆರವುಗೊಳಿಸಿದ್ದ ಸಂದರ್ಭದಲ್ಲಿ ಸಡಿಲಗೊಂಡ ಗುಡ್ಡದ ಭಾಗಗಳು ಮಳೆಯ ಆರ್ಭಟಕ್ಕೆ ಕುಸಿಯಲು ಕಾರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ನದಿಗೆ ಬಿದ್ದು ಯುವಕ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X