ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮೈಸೂರು ಅರಮನೆಯ ಬಲರಾಮ ದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ 406ನೆ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದರು. ಇದೇವೇಳೆ ಅಂಬಾರಿಯಲ್ಲಿರುವ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿದರು. ವಿಜಯದಶಮಿ ಮೆರವಣಿಗೆಯಲ್ಲಿ ಸ್ತಬ್ದಚಿತ್ರಗಳ ವೈಶಿಷ್ಟ ನೋಡುಗರ ಮನಸೂರೆಗೊಳಿಸಿತು.