ಜ್ಯುವೆಲ್ಲರಿಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು, ಅ.12: ನಗರದ ಕಾರ್‌ಸ್ಟ್ರೀಟ್‌ನಲ್ಲಿರುವ ವೈಷ್ಣವಿ ಜ್ಯುವೆಲ್ಲರಿಗೆ ಮಂಗಳವಾರ ರಾತ್ರಿ ನುಗ್ಗಿದ ಕಳ್ಳನೊಬ್ಬ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಡೆದಿದೆ.
ಕಳವುಗೈದ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುಧವಾರ ಬೆಳಗ್ಗೆ ಅಂಗಡಿಯನ್ನು ತೆರೆದಾಗ ಕಳವು ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story