ಸಮಾಜಮುಖಿ ಚಟುವಟಿಕೆಗೆ ತೊಡಗಲು ಕರೆ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು
ದ್ದ ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮ

ಸಾಗರ, ಅ.12: ನಾಡುನುಡಿ ಸಂರಕ್ಷಣೆಯ ಜೊತೆಗೆ ಸಮಾಜಮುಖಿ ಚಟುವಟಿಕೆಗಳಲ್ಲೂ ರಕ್ಷಣಾ ವೇದಿಕೆಗಳು ತೊಡಗಿಕೊಳ್ಳಬೇಕು ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ತಾಲೂಕಿನ ಗೆಣಿಸಿನಕುಣಿಯಲ್ಲಿ ಮಂಗಳವಾರ ವಿಜಯದಶಮಿ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೆಗೌಡ ಬಣ) ಹಾಗೂ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಘಟನೆಗಳು ನಿಸ್ವಾರ್ಥ ಸೇವೆಯನ್ನು ಮಾಡಬೇಕು. ಯುವಜನಾಂಗವು ಸಕ್ರಿಯವಾಗಿ ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ನಾಟಿ ವೈದ್ಯ ಜಿ.ಡಿ. ನಾಗಭೂಷಣ್, ಶೇಖರ್, ಸುಧಾಕರ ಗೌಡ ಅವರನ್ನು ಸನ್ಮಾನಿಸಲಾಯಿತು.
ಕರವೇ ತಾಲೂಕು ಅಧ್ಯಕ್ಷ ಕೆ. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಆಪ್ಸ್‌ಕೋಸ್ ಅಧ್ಯಕ್ಷ ಬಿ.ಎ. ಇಂದೂಧರ ಗೌಡ, ತಾಪಂ ಸದಸ್ಯೆ ಸುವರ್ಣ ಟೀಕಪ್ಪ, ಗ್ರಾಪಂ ಸದಸ್ಯರಾದ ಮೀನಾಕ್ಷಮ್ಮ, ಕುಮಾರ ಹಂಚಿಮನೆ, ಮಂಜುನಾಥ ಮೇಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.
Next Story





