Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವರಿಷ್ಠರಿಗೆ ಕವಡೆಕಾಸಿನ ಕಿಮ್ಮತ್ತು ನೀಡದ...

ವರಿಷ್ಠರಿಗೆ ಕವಡೆಕಾಸಿನ ಕಿಮ್ಮತ್ತು ನೀಡದ ಈಶ್ವರಪ್ಪ: ಬ್ರಿಗೇಡ್ ಮುಂದುವರಿಸಲು ಪಟ್ಟು

ವಾರ್ತಾಭಾರತಿವಾರ್ತಾಭಾರತಿ12 Oct 2016 10:18 PM IST
share
ವರಿಷ್ಠರಿಗೆ ಕವಡೆಕಾಸಿನ ಕಿಮ್ಮತ್ತು ನೀಡದ ಈಶ್ವರಪ್ಪ: ಬ್ರಿಗೇಡ್ ಮುಂದುವರಿಸಲು ಪಟ್ಟು

ದಾವಣಗೆರೆ, ಅ.12: ದಲಿತ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಬ್ರಿಗೇಡ್ ಸಹಕರಿಸಲಿದ್ದು, ರಾಜಕೀಯೇತರವಾಗಿ ಮುಂದುವರಿಯಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪಸ್ಪಷ್ಟಪಡಿಸಿದ್ದಾರೆ.

 ಮಾಜಿ ಸಚಿವ ರವೀಂದ್ರನಾಥ್ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತ ಹಿಂದುಳಿದ ಸ್ವಾಮೀಜಿಗಳ ಸೂಚನೆ ಮೇರೆಗೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆಯನ್ನು ರಾಜಕೀಯೇತರವಾಗಿ ಬೆಳೆಸಲು ನಿರ್ಧರಿಸಿದ್ದು, ಅಂತೆಯೇ ಮುಂದುವರಿಯಲಿದೆ ಎಂದಿದ್ದಾರೆ.

ಕಾಂಗ್ರೆಸ್‌ನಲ್ಲಿ ತಳಮಳ : ಬ್ರಿಗೇಡ್ ಸಂಘಟಿಸಿದ್ದರಿಂದ ಕಾಂಗ್ರೆಸ್ ಪಕ್ಷದಲ್ಲಿ ತಳಮಳ ಆರಂಭವಾಗಿದೆ. ಇಲ್ಲಿಯವರೆಗೆ ದಲಿತ ಮತ್ತು ಹಿಂದುಳಿದವರನ್ನು ತಮ್ಮ ಆಸ್ತಿ ಎಂಬುದಾಗಿ ಅವರು ಭಾವಿಸಿದ್ದರು. ಇದೀಗ ಹಿಂದುಳಿದವರು ಹಾಗೂ ದಲಿತರು ಸಂಘಟಿತರಾಗುತ್ತಿರುವುದನ್ನು ಕಂಡು ಕಾಂಗ್ರೆಸ್ಸಿಗರು ಕಳವಳಗೊಂಡಿದ್ದಾರೆ ಎಂದರು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕೆಂಬ ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಅದಕ್ಕೆ ಸಹಕರಿಸಬೇಕೆಂಬ ಷರತ್ತಿನೊಂದಿಗೇ ತಾವು ಬ್ರಿಗೇಡ್ ಜೊತೆ ಕೈ ಜೋಡಿಸಿದ್ದೆವು. ಆದರೆ, ದಲಿತ ಮತ್ತು ಹಿಂದುಳಿದ ವರ್ಗಗಳ ಮಠಾಧೀಶರರು ಸಂಗೊಳ್ಳಿ ರಾಯಣ್ಣ ಬ್ರಿಗೇಡ ನ್ನು ರಾಜಕೀಯೇತರ ಸಂಘಟನೆ ಮಾಡಿದಲ್ಲಿ ಮಾತ್ರ ಸಹಕರಿಸುವುದಾಗಿ ಹೇಳಿದ್ದಾರೆ ಎಂದರು.

ಸಮಸ್ಯೆ ಬಗೆಹರಿಸಿಕೊಳ್ಳಲು ಪಕ್ಷದ ವರಿಷ್ಠ ರಾಮಲಾಲ್‌ಜಿ ಸೂಚಿಸಿದ್ದಾರೆ. ಅದರಂತೆ, ಯಡಿಯೂರಪ್ಪಜೊತೆಗೆ ಶೀಘ್ರವೇ ಮಾತುಕತೆ ನಡೆಸಲಾಗುವುದು. ಹಲವು ಜಿಲ್ಲೆಗಳಲ್ಲಿ ಪದಾಧಿಕಾರಿಗಳನ್ನು ಏಕಪಕ್ಷೀಯವಾಗಿ ಆಯ್ಕೆ ಮಾಡಿರುವ ವಿಚಾರವೂ ಚರ್ಚೆಗೆ ಬರಲಿದೆ ಎಂದು ಅವರು ನುಡಿದರು.

ಈ ಸಂದರ್ಭ ಮಾಜಿ ಸಚಿವ ಎಸ್.ಎ. ರವೀಂದ್ರನಾಥ, ವಿಪ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ, ಮಾಜಿ ಶಾಸಕ ರಾ. ಎಂ. ಬಸವರಾಜ ನಾಯ್ಕ, ಡಿ.ಬಿ.ಗಂಗಪ್ಪ, ಮುಖಂಡರಾದ ಬಿ.ಲೋಕೇಶ, ಶಾಮನೂರು ಲಿಂಗರಾಜ, ಬಿ.ಎಸ್.ಜಗದೀಶ, ಧನಂಜಯ ಕಡ್ಲೇಬಾಳ್, ಕೆ.ಎನ್.ಓಂಕಾರಪ್ಪ, ಬಿ.ಎಂ. ಸತೀಶ, ಲಿಂಗರಾಜ ಗೌಳಿ, ಹರಿಹರದ ವೀರೇಶ ಹನಗವಾಡಿ, ಚನ್ನಗಿರಿಯ ಶಿವಕುಮಾರ್, ಹೊನ್ನಾಳಿಯ ಎ.ಬಿ. ಹನುಮಂತಪ್ಪ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X