ಅ.22: ರಾಜ್ಯಮಟ್ಟದ ಅಂತರ್ ವೈದ್ಯಕೀಯ
ಕಾಲೇಜು ರಸಪ್ರಶ್ನೆ ಸ್ಪರ್ಧಾಕೂಟ,
ಮಂಗಳೂರು, ಅ. 13: ನಗರದ ಎ.ಜೆ. ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಅ.22ರಂದು ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಅಂತರ್‌ವೈದ್ಯಕೀಯ ಕಾಲೇಜು ರಸಪ್ರಶ್ನೆ ಸ್ಪರ್ಧಾಕೂಟ ‘ಮೆಡಿಕ್ವಿಜ್-2016’ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಬೆಳಗ್ಗೆ 9ಕ್ಕೆ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಮಹಾ ವಿದ್ಯಾಲಯದ ಪ್ರಾಂಶುಪಾಲರು ತಮ್ಮ ಕಾಲೇಜಿನ ಇಬ್ಬರು ಎಮ್.ಬಿ.ಬಿ.ಎಸ್ ವಿದ್ಯಾರ್ಥಿಗಳನ್ನೊಳಗೊಂಡ ತಂಡದ ಹೆಸರುಗಳನ್ನು ಸ್ಪರ್ಧಾಕೂಟದಲ್ಲಿ ಭಾಗವಹಿಸಲು ನೋಂದಾಯಿಸಬಹುದಾಗಿದ್ದು, ಸ್ಪರ್ಧಾಕೂಟವು ಕೇವಲ ವೈದ್ಯಕೀಯ ಶಿಕ್ಷಣ ವಿಷಯ ಮತ್ತು ಶಾಸ್ತ್ರದ ಬಗ್ಗೆ ಸೀಮಿತವಾಗಿದೆ.
ಕಾರ್ಯಕ್ರಮದಲ್ಲಿ ಎ.ಜೆ. ವೈದ್ಯಕೀಯ ಕಾಲೇಜಿನ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಪ್ರೊ.ಡಾ. ಅಶೋಕ್ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸ್ಪರ್ಧಾ ವಿಜೇತರಿಗೆ ಆಕರ್ಷಕ ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ವಿತರಿಸುವರು. ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ.ಜಯರಾಮ್ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸ್ಪರ್ಧಾಕೂಟದ ಸಂಘಟಕ ಡಾ.ದೇವದಾಸ್ ರೈ ಮೊ.ಸಂ.: 98450 81145ರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.





