ಬಾಸ್ಟನ್: ಗುಂಡು ಹಾರಾಟದಲ್ಲಿ ಇಬ್ಬರು ಪೊಲೀಸರಿಗೆ ಗಾಯ

ಬಾಸ್ಟನ್, ಅ. 13: ಬಾಸ್ಟನ್‌ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾನೆ. ಬುಧವಾರ ತಡ ರಾತ್ರಿ ಪೊಲೀಸರಿಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿಯ ಮಾಹಿತಿ ತಕ್ಷಣಕ್ಕೆ ಲಭ್ಯವಾಗಿಲ್ಲ.
ವ್ಯಕ್ತಿಯೊಬ್ಬ ಬಂದೂಕು ಹಿಡಿದು ತಿರುಗಾಡುತ್ತಿದ್ದಾನೆ ಎಂಬ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಲುಪಿದ ಪೊಲೀಸರ ಮೇಲೆ ಗುಂಡಿನ ದಾಳಿ ನಡೆದಿದೆ. ಪೂರ್ವ ಬಾಸ್ಟನ್ ಉಪನಗರದಲ್ಲಿ ಪೊಲೀಸರು ದುಷ್ಕರ್ಮಿಗಾಗಿ ಶೋಧ ನಡೆಸುತ್ತಿದ್ದಾರೆ.
Next Story





