ಅ.15ರಂದು ಯುನೈಟೆಡ್ ನಂದಿಗುಡ್ಡೆ ವತಿಯಿಂದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

ಮಂಗಳೂರು,ಅ.14: ಯುನೈಟೆಡ್ ನಂದಿಗುಡ್ಡೆ ವತಿಯಿಂದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ ಅ.15 ರಂದು ನಾಯಕ್ಸ್ ಗ್ರೌಂಡ್ ನಂದಿಗುಡ್ಡದಲ್ಲಿ ನಡೆಯಲಿದ್ದು, ಸಂಜೆ 6:30ಕ್ಕೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಹರಿನಾಥ್ ಎಂ. ಉದ್ಘಾಟಿಸಲಿದ್ದಾರೆ.
ಈ ಪಂದ್ಯಾಟದಲ್ಲಿ ಆಹ್ವಾನಿತ ರಾಷ್ಟ್ರೀಯ ಮಟ್ಟದ 8 ತಂಡಗಳು ಪಾಲ್ಗೊಳ್ಳಲಿವೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ ಉಪಸ್ಥಿತರಿರುವರು.
ಪಂದ್ಯಾವಳಿಯಲ್ಲಿ ಏಕಲವ್ಯ ಪ್ರಶಸ್ತಿ ವಿಜೇತ ಅನೂಪ್ ಡಿ’ಕೋಸ್ತ ಅವರು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಖ್ಯಾತ ವಾಲಿಬಾಲ್ ಆಟಗಾರ ಗಣೇಶ್ ಪುತ್ತೂರು ಹಾಗೂ ರಾಷ್ಟ್ರೀಯ ವಾಲಿಬಾಲ್ ತೀರ್ಪುಗಾರ ನಾಗೇಶ್.ಎ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.
Next Story