ಆಟೊರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
![ಆಟೊರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ ಆಟೊರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ](https://www.varthabharati.in/sites/default/files/images/articles/2016/10/14/Ganja.jpg)
ಕಾಸರಗೋಡು, ಅ.14: ಆಟೊರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆಹಚ್ಚಿದ ಕುಂಬಳೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 30 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಮೊಗ್ರಾಲ್ ಪುತ್ತೂರಿನ ಸಂಶುದ್ದಿನ್ (22) ಮತ್ತು ಕುಂಬಳೆ ಶಿರಿಯದ ಮೊಯ್ದಿನ್ ಷಾ (23) ಎಂದು ಗುರುತಿಸಲಾಗಿದೆ.
ಬಂದ್ಯೋಡು ಸಮೀಪ ರಸ್ತೆ ಬದಿ ಸಂಶಯಾಸ್ಪದವಾಗಿ ಆಟೊವೊಂದು ಕಂಡುಬಂದಿತ್ತು. ಸಂಶಯದ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದಾಗ ಆಟೊದಲ್ಲಿ ಗಾಂಜಾ ಪತ್ತೆಯಾಗಿದೆ.
ಬಂಧಿತರನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
Next Story