‘ಸರಕಾರಿ ಶಾಲೆಗಳನ್ನು ಉಳಿಸಿ’ ನವೆಂಬರ್‌ನಲ್ಲಿ ಆಂದೋಲನ
ಬೆಂಗಳೂರು, ಅ. 14: ಖಾಸಗಿ ಶಾಲೆಗಳನ್ನು ಉತ್ತೇಜಿಸುವ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ)ಯನ್ನು ರಾಜ್ಯ ಸರಕಾರ ಒಪ್ಪಿಕೊಳ್ಳಬಾರದು. ಅವರಿಗೆ ನೀಡುವ ಹಣದಲ್ಲೆ ಸರಕಾರಿ ಶಾಲೆಗಳ ಸಬಲೀಕರಣಕ್ಕೆ ವಿಶೇಷ ಆದ್ಯತೆ ನೀಡಬೇಕೆಂದು ಜೆಡಿಎಸ್ ಆಗ್ರಹಿಸಿದೆ.
ಶುಕ್ರವಾರ ವಿಧಾನಸೌಧದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಎಚ್.ಡಿ.ರೇವಣ್ಣ, ವೈ.ಎಸ್.ವಿ. ದತ್ತ, ಆರ್‌ಟಿಇ ಅಡಿ ದಾಖಲಾದ ಮಕ್ಕಳಿಗಾಗಿ ರಾಜ್ಯ ಸರಕಾರ ವಾರ್ಷಿಕ 550 ಕೋಟಿ ರೂ.ಗಳನ್ನು ಖಾಸಗಿ ಶಾಲೆಗಳಿಗೆ ನೀಡುತ್ತಿದೆ. ಅದೇ ಮೊತ್ತವನ್ನು ಸರಕಾರಿ ಶಾಲೆಗಳಿಗೆ ಬಳಸಿಕೊಂಡರೆ ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದರು.ಂದೋಲನ: ಮಕ್ಕಳ ಕೊರತೆ ನೆಪದಲ್ಲಿ ಸರಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಕ್ರಮವನ್ನು ಖಂಡಿಸಿ ಕನ್ನಡ ಶಾಲೆಗಳನ್ನು ಉಳಿಸಲು ಆಗ್ರಹಿಸಿ ಜೆಡಿಎಸ್ ವತಿಯಿಂದ ನವೆಂಬರ್ 1ರಿಂದ ಕನ್ನಡಪರ ಸಂಘಟನೆಗಳೊಂದಿಗೆ ಸೇರಿ ಆಂದೋಲನವನ್ನು ರೂಪಿಸಲಾಗುವುದು ಎಂದರು.ರ್‌ಟಿಇಯನ್ನು ರಾಜ್ಯ ಸರಕಾರ ಒಪ್ಪಿಕೊಂಡಿರುವು ದರಿಂದಲೇ ಸರಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಉಂಟಾಗಿದೆ. ಅಲ್ಲದೆ, ಶಾಲೆಗಳ ವಿಲೀನ ಮತ್ತು ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೆಪದಲ್ಲಿ ಶಿಕ್ಷಣ ಇಲಾಖೆ ಅಕಾರಿಗಳಿಗೆ ಸರಕಾರವೇ ‘ಸುಗ್ಗಿ’ ಕಾಲವನ್ನು ತಂದುಕೊಟ್ಟಿದೆ ಎಂದು ಅವರು ಆರೋಪಿಸಿದರು.
ಪ್ರತಿ ತಾಲೂಕಿನಲ್ಲಿ 10ರಿಂದ 15 ಖಾಸಗಿ ಶಾಲೆಗಳನ್ನು ತೆರೆಯಲು ರಾಜ್ಯ ಸರಕಾರ ಅನುಮತಿ ನೀಡುತ್ತಿದ್ದು, ಇದರಿಂದ 3 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಬೇಕಾದ ದುಸ್ಥಿತಿ ಎದುರಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಗಂಭೀರವಾಗಿ ಆಲೋಚಿಸಬೇಕು. ಅಲ್ಲದೆ, ಸರಕಾರಿ ಶಾಲೆಗಳಿಗೆ ಅಗತ್ಯ ಶಿಕ್ಷಕರು, ಕಟ್ಟಡ ಸೇರಿದಂತೆ ಮೂಲಸೌಲಭ್ಯ ಕಲ್ಪಿಸಿ, ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕೆಂದು ಆಗ್ರಹಿಸಿದರು.
ನಿರ್ಬಂಧ ತೆರವಿಗೆ ಆಗ್ರಹ: ಅಂತರ್ಜಲ ಕೊರತೆ ನೆಪದಲ್ಲಿ ಕೊಳವೆಬಾವಿ ಕೊರೆಸಲು ಹೇರಿರುವ ನಿರ್ಬಂಧ ಸಡಿಲಿಸಬೇಕು. ಇಲ್ಲವಾದರೆ, ರಾಜ್ಯದಲ್ಲಿನ ಅಡಿಕೆ ಮತ್ತು ತೆಂಗಿನ ತೋಟಗಳು ಸಂಪೂರ್ಣ ನಾಶವಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದ ಮಾಜಿ ಸಚಿವ ರೇವಣ್ಣ, ನಿರ್ಬಂಧ ತೆರವುಗೊಳಿಸದಿದ್ದರೆ ಕಂದಾಯ ಇಲಾಖೆ ಕಾರ್ಯದರ್ಶಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.





