Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೆಡಿಎಸ್ ಸ್ವಂತ ಬಲದಿಂದ ಅಧಿಕಾರ ಪಡೆಯಲು...

ಜೆಡಿಎಸ್ ಸ್ವಂತ ಬಲದಿಂದ ಅಧಿಕಾರ ಪಡೆಯಲು ಸಂಘಟಿತ ಪ್ರಯತ್ನ: ಎಚ್.ಡಿ .ದೇವೇಗೌಡ

ದ.ಕ. ಜಿಲ್ಲಾ ಜೆಡಿಎಸ್ ಕಾರ್ಯಕರ್ತರ ಸಭೆ

ವಾರ್ತಾಭಾರತಿವಾರ್ತಾಭಾರತಿ15 Oct 2016 8:43 PM IST
share
ಜೆಡಿಎಸ್ ಸ್ವಂತ ಬಲದಿಂದ ಅಧಿಕಾರ ಪಡೆಯಲು ಸಂಘಟಿತ ಪ್ರಯತ್ನ: ಎಚ್.ಡಿ .ದೇವೇಗೌಡ

ಮಂಗಳೂರು, ಅ.15:ರಾಜ್ಯದಲ್ಲಿ ಜೆಡಿಎಸ್ ಸ್ವಂತ ಬಲದಿಂದ ಅಧಿಕಾರಕ್ಕೇರಲು ಸಂಘಟಿತ ಪ್ರಯತ್ನ ನಡೆಸಬೇಕಾಗಿದೆ ಎಂದು ಜಾತ್ಯತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ .ದೇವೇಗೌಡ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಅವರು ಇಂದು ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದ.ಕ ಜಿಲ್ಲಾ ಮಟ್ಟದ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಪ್ರಬಲ ಪ್ರಾದೇಶಿಕ ಪಕ್ಷವಾಗಿ ಜಾತ್ಯತೀತ ಜನತಾ ದಳವನ್ನು ಮತ್ತೆ ಅಧಿಕಾರಕ್ಕೆ ತರಲು ಮಂಗಳೂರಿನಿಂದ ಅಭಿಯಾನವನ್ನು ಆರಂಭಿಸಿದ್ದೇನೆ. ಈ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದ್ದೇನೆ. ಜೊತೆಗೆ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಪಕ್ಷವನ್ನು ಸಂಘಟಿಸುವ ಬಗ್ಗೆ ಸಮಾಲೋಚನೆ ನಡೆಸಲು ಜಿಲ್ಲೆಗೆ ಆಗಮಿಸಿರುವುದಾಗಿ ತಿಳಿಸಿದರು.

ಕರಾವಳಿಯಲ್ಲಿ ಅಡಿಕೆ ಬೆಳೆಗಾರರು, ರಬ್ಬರ್ ಬೆಳೆಗಾರರು ಬೆಲೆ ಕುಸಿತದಿಂದ ಬಸವಳಿದಿದ್ದಾರೆ. ನಿರುದ್ಯೋಗ, ಬಡತನದ ಸಮಸ್ಯೆ ನಮ್ಮನ್ನು ಕಾಡುತ್ತಿರುವಾಗ ಸರಕಾರ ನಡೆಸುವವರು ಅದನ್ನು ಪರಿಹರಿಸಲು ಹೆಚ್ಚಿನ ಗಮನಹರಿಸಬೇಕು ಹೊರತು ‘ದೇಶಕ್ಕೆ ಒಂದು ಕಾನೂನು-ಒಂದು ನಿಯಮ’ಎನ್ನುವ ವಿಚಾರಗಳಿಗಲ್ಲ ಎಂದು ದೇವೇಗೌಡ ತಿಳಿಸಿದರು.

ಜೆಡಿಎಸ್ ಪಕ್ಷದೊಳಗಿನ ಆಂತರಿಕ ಭಿನ್ನಮತಗಳನ್ನು ಮರೆತು ಜೆಡಿಎಸ್‌ನ್ನು ರಾಜ್ಯದಲ್ಲಿ ಮತ್ತೊಮ್ಮೆ ಪ್ರಬಲ ಪ್ರಾದೇಶಿಕ ಪಕ್ಷವಾಗಿ ಬೆಳೆಸಲು ಎಲ್ಲರ ಸಹಕಾರ ಅಗತ್ಯ. ಈ ಅಭಿಯಾನವನ್ನು ಮಂಗಳೂರಿನಿಂದಲೇ ಆರಂಭಿಸುವುದು ಸೂಕ್ತ ಎಂದು ಮಂಗಳೂರಿಗೆ ಆಗಮಿಸಿರುವುದಾಗಿ ದೇವೇಗೌಡ ತಿಳಿಸಿದರು.

ಅಧಿಕಾರದ ಆಸೆಯಿಲ್ಲ

ನಾನು ದೇಶದ ಪ್ರಧಾನಿಯಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ ಕಳೆದ 25ವರ್ಷ ಸಂಸದನಾಗಿ ಕಾರ್ಯನಿರ್ವಹಿಸಿ ಅಧಿಕಾರವನ್ನು ಅನುಭವಿಸಿದ್ದೇನೆ. ಈಗ ಮತ್ತೆ ಅಧಿಕಾರದ ಆಸೆ ನನಗಿಲ್ಲ. ಆದರೆ ರಾಜ್ಯದಲ್ಲಿ ಜೆಡಿಎಸ್ ಒಂದು ಪ್ರಬಲ ಪ್ರಾದೇಶಿಕ ಪಕ್ಷವಾಗಿ ಉಳಿಯಬೇಕು ಎನ್ನುವ ಸ್ವಾರ್ಥ ನನ್ನಲ್ಲಿದೆ. ಇದು ನನ್ನ ಜೀವನದ ಕೊನೆಯ ಆಸೆಯೂ ಹೌದು.ಆ ಕಾರಣದಿಂದ ಈ ಇಳಿ ವಯಸ್ಸಿನಲ್ಲೂ ಪಕ್ಷದ ಸಂಘಟನೆಗೆ ಹೊರಟಿದ್ದೇನೆ. ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಕೇಳಲು ಬಂದಿದ್ದೇನೆ ಎಂದು ದೇವೇಗೌಡ ತಿಳಿಸಿದರು.

 ಸಮಾರಂಭದಲ್ಲಿ ಜೆಡಿಎಸ್ ಮುಖಂಡರಾದ ಅಮರನಾಥ ಶೆಟ್ಟಿ, ಜೇವಿಜಯ, ಝಫರುಲ್ಲಾ ಖಾನ್, ತನ್ವಿರ್ ಪಾಷಾ, ಮಧು ಬಂಗಾರಪ್ಪ, ವಿಟ್ಲ ಮುಹಮ್ಮದ್ ಕುಂಞ, ಎಂ.ಬಿ.ಸದಾಶಿವ, ಬಿ.ಎಂ.ಫಾರೂಕ್, ಅಝೀಝ್ ಕುದ್ರೋಳಿ, ರಮೀಝಾ ನಾಝಿರ್, ಅಶ್ವಿನ್ ಪಿರೇರಾ, ಸೌಂದರ್ಯ ರಮೇಶ್, ಜಗನ್ನಾಥ ಅರಸಿನ ಮಕ್ಕಿ, ಅಬೂಬಕರ್ ನಾಟೆಕಲ್, ವಸಂತ ಪೂಜಾರಿ, ಎಸ್.ಪಿ.ಚಂಗಪ್ಪ, ಪ್ರವೀಣ್ ಚಂದ್ರ, ಅಕ್ಷಿತ್ ಸುವರ್ಣ, ಇಮ್ರಾನ್ ಪಾಷಾ, ಅಬ್ದುರ್ರಹ್ಮಾನ್ ಬೆಳ್ತಂಗಡಿ, ಐ.ಸಿ.ಕೈಲಾಸ್, ದಯಾಕರ ಆಳ್ವ, ಡಿ.ಪಿ.ಹಮ್ಮಬ್ಬ, ಮೊಹನ್ ದಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪ್ರವೀಣ್ ನಾಯಕ್, ಗಣೇಶ್ ಪ್ರಸಾದ್, ಉದ್ಯಮಿ ಸಿ.ಎಂ.ಉಮರ್ ಮೊದಲಾದವರು ದೇವೇಗೌಡರ ಸಮ್ಮಖದಲ್ಲಿ ಜೆಡಿಎಸ್‌ಗೆ ಸೇರ್ಪಡೆಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X