Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದಲ್ಲಿ ಶಿಶು ಮರಣ ಪ್ರಮಾಣ ಹೆಚ್ಚಳ:...

ದೇಶದಲ್ಲಿ ಶಿಶು ಮರಣ ಪ್ರಮಾಣ ಹೆಚ್ಚಳ: ಕೋಳಿವಾಡ ಆತಂಕ

ಮಕ್ಕಳ ವೈದ್ಯರ 30ನೆ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ15 Oct 2016 10:19 PM IST
share
ದೇಶದಲ್ಲಿ ಶಿಶು ಮರಣ ಪ್ರಮಾಣ ಹೆಚ್ಚಳ: ಕೋಳಿವಾಡ ಆತಂಕ

ಶಿವಮೊಗ್ಗ, ಅ. 15: ದೇಶದಲ್ಲಿ ಶಿಶು ಮರಣ ಹೆಚ್ಚುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಅಂಕಿ-ಅಂಶದಲ್ಲಿ ಭಾರತಕ್ಕೆ ಪ್ರಥಮ ಸ್ಥಾನ ಇರುವುದು ಎಲ್ಲರನ್ನೂ ಚಿಂತೆಗೀಡುಮಾಡಿದೆ ಎಂದು ವಿಧಾನಸಭಾ ಅಧ್ಯಕ್ಷ ಕೆ.ಬಿ. ಕೋಳಿವಾಡ ಹೇಳಿದ್ದಾರೆ.

 ಸಿಮ್ಸ್ ಸಭಾಂಗಣದಲ್ಲಿ ದಕ್ಷಿಣ ಭಾರತ ರಾಜ್ಯಗಳ ಮಕ್ಕಳ ವೈದ್ಯರ 30ನೆಯ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮ್ಮೇಳನಗಳು ಹೊಸ ಸಂಶೋಧನೆ ಮತ್ತು ಆವಿಷ್ಕಾರಗಳ ಕುರಿತು ಚರ್ಚೆ ನಡೆಸಬೇಕು. ಪ್ರಬಂಧಗಳ ಮಂಡನೆ ಮೂಲಕ ತಜ್ಞರು ತಮ್ಮಲ್ಲಿರುವ ವಿಚಾರಧಾರೆಗಳನ್ನು ಇತರ ಪ್ರತಿನಿಧಿಗಳಿಗೆ ತಿಳಿಯಪಡಿಸಬೇಕು.ಹೀಗಾದಾಗ ಮಾತ್ರ ಸಂಶೋಧನೆ ಎಲ್ಲೆಡೆ ಪ್ರತಿಫಲಿಸಲು ಸಾಧ್ಯಎಂದರು.

ವೈದ್ಯಕೀಯ ವಿಜ್ಞಾನ ದಿನೇ ದಿನೇ ಜಗತ್ತಿನಾದ್ಯಂತ ಬೆಳೆಯುತ್ತಿದ್ದರೂ, ವಿದೇಶಿ ತಜ್ಞರನ್ನು ಮೀರಿಸುವ ಪ್ರತಿಭೆಗಳು ನಮ್ಮಲ್ಲಿದ್ದರೂ ವೈದ್ಯಕೀಯ ವ್ಯವಸ್ಥೆ ಭಾರತದಲ್ಲಿ ಹೇಳಿಕೊಳ್ಳುವಂತಹ ಸ್ಥಿತಿಯನ್ನು ತಲುಪಿಲ್ಲ ಎಂದು ಹೇಳಿದರು.

ನಮ್ಮಲ್ಲಿರುವ ವೈದ್ಯರಿಗೆ ಆಧುನಿಕ ವೈದ್ಯಕೀಯ ಸೌಲಭ್ಯಗಳು ಮತ್ತು ಅವುಗಳ ಮೂಲಕ ಜನರಿಗೆ ನೀಡಬಹುದಾದ ಚಿಕಿತ್ಸೆ ಬಗ್ಗೆ ಹೆಚ್ಚಿನ ಜ್ಞ್ಞಾನ ಅಗತ್ಯವಿದೆ. ಯಾವುದೇ ಆಸ್ಪತ್ರೆಯಲ್ಲಿ ಸೌಲಭ್ಯವಿದ್ದಾಗ ಮಾತ್ರ ಹೆಚ್ಚಿನ ರೋಗಿಗಳು ಬರುತ್ತಾರೆ. ಸೌಲಭ್ಯಗಳ ಕೊರತೆ ಆಸ್ಪತ್ರೆಗಳಿಗೆ ಎಂದೂ ಎದುರಾಗಬಾರದು ಎಂದು ಹೇಳಿದರು.

ಚರ್ಚೆ: ವೈದ್ಯರಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ನೀಡುವ ಕಾಯ್ದೆಗೆ ತಿದ್ದುಪಡಿ ಅಗತ್ಯ. ಯಾವರೀತಿ ತಿದ್ದುಪಡಿ ಅಗತ್ಯ ಎನ್ನುವುದನ್ನು ಭಾರತೀಯ ವೈದ್ಯರ ಸಂಘ ಸರಕಾರಕ್ಕೆ ಮಾಹಿತಿ ನೀಡಬೇಕು. ಈ ರೀತಿ ಮಾಹಿತಿ ನೀಡಿದಲ್ಲಿ ತಾನು ಸಂಬಂಧಿಸಿದ ಸಚಿವರೊಡನೆ ಚರ್ಚಿಸಿ ತಿದ್ದುಪಡಿ ತರಲು ಎಲ್ಲ ಪ್ರಯತ್ನ ನಡೆಸುತ್ತೇನೆ ಎಂದರು.

 ಸಮಾವೇಶದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಮಕ್ಕಳ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ಎಚ್.ವಿ.ಕೊಟ್ಟೂರೇಶ ರಸ್ತಾಪುರಮಠ ವಹಿಸಿದ್ದರು. ಅತಿಥಿಗಳಾಗಿ ಶಿವಮೊಗ್ಗ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ. ಬಿ.ವಿ.ಸುಶೀಲ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗೀ ಹಳ್ಳಿ, ಶಿವಮೊಗ್ಗ ಐಎಂಎ ಅಧ್ಯಕ್ಷ ಡಾ. ಯು.ಶಿವಯೋಗಿ, ಶಿವಮೊಗ್ಗ ಮಕ್ಕಳ ತಜ್ಞರ ಅಧ್ಯಕ್ಷ ಡಾ. ಆರ್.ಬಿ.ಪಾಟೀಲ್, ರಾಜೀವ್‌ಗಾಂಧಿ ವೈದ್ಯಕೀಯವಿಜ್ಞಾನ ಸಂಸ್ಥೆಯ ಸಿಂಡಿಕೇಟ್ ಸದಸ್ಯ ಡಾ. ಮಲ್ಲೇಶ್ ಹುಲ್ಲಮನಿ, ಭಾರತೀಯ ವೈದ್ಯಕೀಯ ಸಂಸ್ಥೆಯ ಸದಸ್ಯ ಡಾ. ಎಚ್.ಎಲ್. ಬಿದರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X