Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಜಾಪ್ರಭುತ್ವ ವ್ಯವಸ್ಥೆ ದಾರಿ...

ಪ್ರಜಾಪ್ರಭುತ್ವ ವ್ಯವಸ್ಥೆ ದಾರಿ ತತಪ್ಪುತ್ತಿದೆ: ವಿಶ್ರಾಂತ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ

ತೀರ್ಥಹಳ್ಳಿ: ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 Oct 2016 10:19 PM IST
share
ಪ್ರಜಾಪ್ರಭುತ್ವ ವ್ಯವಸ್ಥೆ  ದಾರಿ ತತಪ್ಪುತ್ತಿದೆ: ವಿಶ್ರಾಂತ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ

ತೀರ್ಥಹಳ್ಳಿ,ಅ.17: ಸಂಪೂರ್ಣ ವೌಲ್ಯದ ಕುಸಿತದಿಂದ ನಮ್ಮ ಪ್ರಮುಖ ಆಧಾರ ಸ್ತಂಭಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ದಾರಿತಪ್ಪುತ್ತಿವೆೆ. ಮನುಷ್ಯನಲ್ಲಿ ತೃಪ್ತಿ, ಮಾನವೀಯತೆ ದೂರವಾಗಿದ್ದು, ದುರಾಸೆ ಹೆಚ್ಚಾಗಿದೆ. ದುರಾಸೆಯ ಮಟ್ಟ ಮಿತಿಮೀರಿ ಮಾನವೀಯತೆ ನಮ್ಮಿಂದ ದೂರವಾಗಿರುವುದು ವ್ಯವಸ್ಥೆಯ ದುರಂತ ಎಂದು ನಿವೃತ್ತ ನ್ಯಾಯಮೂರ್ತಿ ಹಾಗೂ ವಿಶ್ರಾಂತ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಪಟ್ಟಣದ ಗೋಪಾಲಗೌಡ ರಂಗ ಮಂದಿರದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕುಸಿಯುತ್ತಿರುವ ಸಾಮಾಜಿಕ ವೌಲ್ಯಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಆಗುತ್ತಿರುವ ಪರಿಣಾಮದ ಬಗ್ಗೆ ಯುವ ಪೀಳಿಗೆ ಜಾಗೃತರಾಗಬೇಕು. ತೃಪ್ತಿ ಹಾಗೂ ಮಾನವೀಯತೆಯ ವೌಲ್ಯಗಳನ್ನು ಯುವ ಪೀಳಿಗೆ ಬೆಳೆಸಿಕೊಂಡಾಗ ಮಾತ್ರ ದೇಶದ ಉಜ್ವಲ ಭವಿಷ್ಯವನ್ನು ಮುಂದಿನ ದಿನಗಳಲ್ಲಿ ನಾವು ನೋಡಬಹುದು. ಮನುಷ್ಯರು ದುರಾಸೆಗೆ ಇಳಿಯದೆ ಜಾಗೃತರಾಗಬೇಕು ಎಂಬ ಮಾತನ್ನು ಎಷ್ಟೇ ಹೇಳಿದರೂ ವ್ಯವಸ್ಥೆಯಲ್ಲಿ ಬದಲಾವಣೆಯಾಗುತ್ತಿಲ್ಲ. ರೂಪಾಯಿ ಆಣೆ ಎಂಬುದು ವೌಲ್ಯದ ಅರ್ಥವಲ್ಲ. ಮಾನವೀಯತೆಯನ್ನು ಮರೆತು ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯನಿರ್ವಹಿಸುವ ವ್ಯವಸ್ಥೆಯಲ್ಲಿ ನಾವಿಂದು ಬದುಕುತ್ತಿದ್ದೇವೆ ಎಂದರು.

ಪ್ರಜಾಪ್ರಭುತ್ವ ಎಂಬುದು ಪ್ರತಿಯೊಬ್ಬ ಭಾರತೀಯನ ಹಕ್ಕು ಎಂದು ಹೇಳಿದ ಡಾ. ಅಂಬೇಡ್ಕರ್‌ರವರ ಮಾತು ಕೇವಲ ಮಾತಾಗಿ ಉಳಿದಿದೆ. ಅಂತಾರಾಷ್ಟ್ರೀಯ ಮಟ್ಟದ ರಾಜನೀತಿಯೇ ಪ್ರಜಾಪ್ರಭುತ್ವ. ಹಿರಿಯರು ಹೇಳಿದ ರಾಜನೀತಿಯನ್ನು ನಾವು ಪ್ರಜಾಪ್ರಭುತ್ವವೆಂದು ಅರಿತೆವು. ಆದರಿಂದ ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಪ್ರಜಾಪ್ರಭುತ್ವದ ವೌಲ್ಯ ಕುಸಿದು ಆಡಳಿತಕ್ಕೆ ಕುಂದು ಬಂದಿದೆ ಎಂದರು.

ಈ ದೇಶದಲ್ಲಿ ಯಾವುದೇ ಕ್ರಾಂತಿಯಿಂದ ಬದಲಾವಣೆ ಸಾಧ್ಯವಿಲ್ಲ. ಅಮಾಯಕರಿಂದು ನಿರಂತರವಾಗಿ ಶಿಕ್ಷೆಗೆ ಒಳಪಡುತ್ತಿದ್ದಾರೆ. ಭ್ರಷ್ಟಾಚಾರವನ್ನು ಹುಟ್ಟಿಸಿದ್ದು ಸೃಷ್ಟಿಕರ್ತ. ನಮ್ಮ ಮುಂದೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಉತ್ತಮ ಸಮಾಜವನ್ನು ಕಟ್ಟಿ ಅನ್ಯಾಯವನ್ನು ಮೆಟ್ಟಿ ಮಾನವೀಯತೆ ಹಾಗೂ ತೃಪ್ತಿಯೊಂದಿಗೆ ಹೊಸ ಬದುಕನ್ನು ಕಟ್ಟಿಕೊಳ್ಳುವ ವಿದ್ಯಾರ್ಥಿ ಸಮೂಹ ವ್ಯವಸ್ಥೆಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

 ಮುಖ್ಯ ಅತಿಥಿಗಳಾಗಿ ಮಾತನಾಡಿದ ಶಾಸಕ ಕಿಮ್ಮನೆ ರತ್ನಾಕರ, ರಾಜ್ಯದ ಆರ್ಥಿಕತೆ ಹಾಗೂ ಸದನಗಳಲ್ಲಿ ನಡೆಯುವ ಬಜೆಟ್‌ಗಳ ಬಗ್ಗೆ ನಮ್ಮ ಜನಪ್ರತಿನಿಧಿಗಳು ಅಧ್ಯಯನ ಹಾಗೂ ಚರ್ಚೆ ಮಾಡುವ ಅಗತ್ಯವಿದೆ. ಆದರೆ, ಈ ದೇಶದ ಶೇ.50ರಷ್ಟು ಸಂಸದರು ಹಾಗೂ ಶಾಸಕರಿಗೆ ಬಜೆಟ್‌ನ ಸಂಪೂರ್ಣ ಮಾಹಿತಿಯೇ ಇರುವುದಿಲ್ಲ ಎಂದರು.

ಬದಲಾವಣೆಯ ಪರ್ವತದ ಅಗತ್ಯ ನಮಗಿಂದು ಬೇಕಾಗಿದ್ದು, ಸಮಾಜದ ಸೈದ್ಧಾಂತಿಕ ನಿಲುವುಗಳನ್ನು ಅರಿತುಕೊಳ್ಳಲು ಯುವ ಪೀಳಿಗೆ ಇಂದು ಬುದ್ಧ, ಗಾಂಧಿ, ಅಂಬೇಡ್ಕರ್, ಲೋಹಿಯಾರವರ ಪುಸ್ತಕಗಳನ್ನು ಅಧ್ಯಯನ ಮಾಡುವ ಅಗತ್ಯವಿದೆ ಎಂದರು.

 ಸಮಾರಂಭದ ವೇದಿಕೆಯಲ್ಲಿ ಕಾಲೇಜು ಆಡಳಿತ ಮಂಡಳಿಯ ಕೂಳೂರು ಸತ್ಯನಾರಾಯಣರಾವ್, ಕಾಲೇಜು ಪ್ರಾಚಾರ್ಯ ದೇವರಾಜ್, ಉಪನ್ಯಾಸಕ ಡಾ. ಎ.ಸಿ.ನಾಗೇಶ್, ಉಪಸ್ಥಿತರಿದ್ದರು.

 ಇದೇ ಸಂದರ್ಭದಲ್ಲಿ ಕಾಲೇಜಿನ ರ್ಯಾಂಕ್ ವಿಜೇತ ವಿದ್ಯಾರ್ಥಿನಿಯರಾದ ಸ್ವಾತಿ ಕೆ.ಎಂ., ವಿಜಯಾ ಹಾಗೂ ಸ್ವಾತಿ ಎಚ್.ಆರ್. ರನ್ನು ಸನ್ಮಾನಿಸಲಾಯಿತು. ಪಟ್ಟಣದ ಗೋಪಾಲಗೌಡ ರಂಗ ಮಂದಿರದಲ್ಲಿ ನಡೆದ ಸಪ್ರದ ಕಾಲೇಜಿನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ನಿವೃತ್ತ ಲೋಕಾಯುಕ್ತ ಡಾ. ಸಂತೊೀಷ್ ಹೆಗ್ಡೆ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X