Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಾದಿ ತಪ್ಪಿದ ‘ಚಲೋ ಉಡುಪಿ’: ಲೋಲಾಕ್ಷ

ಹಾದಿ ತಪ್ಪಿದ ‘ಚಲೋ ಉಡುಪಿ’: ಲೋಲಾಕ್ಷ

ವಾರ್ತಾಭಾರತಿವಾರ್ತಾಭಾರತಿ18 Oct 2016 7:22 PM IST
share
ಹಾದಿ ತಪ್ಪಿದ ‘ಚಲೋ ಉಡುಪಿ’: ಲೋಲಾಕ್ಷ

ಮಂಗಳೂರು, ಅ.18: ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಇತ್ತೀಚೆಗೆ ನಡೆಸಿದ ಸ್ವಾಭಿಮಾನಿ ಸಂಘರ್ಷ ಜಾಥಾ ‘ಚಲೋ ಉಡುಪಿ’ಯು ತನ್ನ ಮೂಲ ಉದ್ದೇಶ ಮರೆತು ಹಾದಿ ತಪ್ಪಿದೆ ಎಂದು ಅಹಿಂದ ನಾಯಕ ಲೋಲಾಕ್ಷ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ‘ಚಲೋ ಉಡುಪಿ’ಯ ಬಗ್ಗೆ ಬಗ್ಗೆ ಆಕ್ಷೇಪಿಸಿದ ಅವರು, ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಅಥವಾ ಬೇರೆ ದೇವಸ್ಥಾನಗಳಲ್ಲಿ ಪಂಕ್ತಿಭೇದ ಇದ್ದರೆ ಅದನ್ನು ಸರಕಾರದಲ್ಲಿ ಪ್ರಶ್ನಿಸಬೇಕೇ ಹೊರತು ಮುತ್ತಿಗೆ ಹಾಕಿ ಯಾವುದೇ ಪ್ರಯೋಜನವಾಗದು. ಅದಕ್ಕಾಗಿ ಪಂಕ್ತಿಭೇದ ನಿಷೇಧ ಕಾಯ್ದೆ ಜಾರಿಗೊಳ್ಳಬೇಕು. ‘ಆಹಾರ ನಮ್ಮ ಆಯ್ಕೆ, ಭೂಮಿ ನಮ್ಮ ಹಕ್ಕು’ ಎಂಬ ಚಲೋ ಉಡುಪಿಯ ಘೋಷ ವಾಕ್ಯದ ವಿಚಾರಕ್ಕೆ ಆದ್ಯತೆ ನೀಡದೆ, ಉಡುಪಿ ಶ್ರೀ ಕೃಷ್ಣ ಮಠದ ವಿಚಾರವನ್ನು ಅನಗತ್ಯವಾಗಿ ಎಳೆದುಹಾಕಲಾಗಿದೆ ಎಂದು ಆಕ್ಷೇಪಿಸಿದರು.

ಪಂಕ್ತಿಭೇದವನ್ನು ಎರಡು ತಿಂಗಳಲ್ಲಿ ನಿಲ್ಲಿಸದಿದ್ದರೆ ಮುತ್ತಿಗೆ ಹಾಕಲಾಗುವುದು ಎಂದು ಸಮಾರೋಪದಲ್ಲಿ ಕಾರ್ಯಕ್ರಮದ ಮುಖ್ಯ ಭಾಷಣಗಾರ ಜಿಗ್ನೇಶ್ ಮೇವಾನಿ ಹೇಳುವ ಮೂಲಕ ಕೃಷ್ಣ ಮಠದ ಆಡಳಿತ ಮಂಡಳಿಯ ಮೂಲಭೂತ ಹಕ್ಕುಗಳ ಮೇಲಿನ ಅತಿಕ್ರಮಣದ ಬೆದರಿಕೆ ನೀಡಲಾಗಿದೆ ಇದು ಅನಗತ್ಯ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧ ಎಂದವರು ಹೇಳಿದರು.

ಇಷ್ಟಕ್ಕೂ ದಲಿತರಿಗೂ ಉಡುಪಿ ಮಠಕ್ಕೆ ಏನು ಸಂಬಂಧ? ಮಠದ ವಿಚಾರದಲ್ಲಿ ದಲಿತರು ಯಾಕೆ ಹಸ್ತಕ್ಷೇಪ ಮಾಡಬೇಕು ಎಂದು ಪ್ರಶ್ನಿಸಿದ ಅವರು, ಅಲ್ಲಿ ಪಂಕ್ತಿಭೇದ ಇದ್ದರೂ ಇಲ್ಲದಿದ್ದರೂ ನನ್ನದೇನು ತಕರಾರು ಇಲ್ಲ. ಅದು ಅವರ ಮಠ. ಅದರ ನಿರ್ವಹಣೆ ಅವರದ್ದು. ನಾವು ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಮಠದ ಮೇಲೆ ಬೆದರಿಕೆ ಹಾಕಿರುವ ಕ್ರಮ ಸರಿಯಲ್ಲ. ಇದಕ್ಕೆ ಪ್ರತೀಕಾರವಾಗಿ ಹಿಂದೂ ಸಂಘಟನೆಗಳು ಉಡುಪಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳುವುದು ಸಮಂಜಸವಲ್ಲ. ದಲಿತರು ನೋವು ಹೇಳಿಕೊಂಡರೆ ಧರ್ಮರಕ್ಷಕರು ಹಿಂದೂ ಸಮಾಜದಲ್ಲಿನ ನ್ಯೂನತೆಯನ್ನು ಸರಿಪಡಿಸಬೇಕು. ಅಷ್ಟಕ್ಕೂ ದಲಿತರಿಗೂ ಗೋಮಾಂಸಕ್ಕೂ ಇಲ್ಲಿ ಸಂಬಂಧವಿಲ್ಲ. ಹೊರಗಿನಿಂದ ಬಂದವರು ಚಳುವಳಿಗೆ ಸಂಬಂಧವೇ ಇಲ್ಲದ ವಿಚಾರವನ್ನು ಮಾತನಾಡಿದ್ದಾರೆ. ರಾಜ್ಯದಲ್ಲಿರುವ ದಲಿತರಿಗೆ ಗೋಮಾಂಸ ವಿವಾದವೇ ಅಲ್ಲ. ಇನ್ನೊಬ್ಬರ ಹಕ್ಕು ಕಸಿಯುವುದಕ್ಕಾಗಿ ಹೋರಾಡುವ ಅಗತ್ಯ ಇಲ್ಲ ಎಂದು ಲೋಲಾಕ್ಷ ಹೇಳಿದರು.

ವೈಷ್ಣವ ದೀಕ್ಷೆ ಪಡೆದವರಿಗೆ ಸಹ ಪಂಕ್ತಿ ನೀಡಿ!

ಪೇಜಾವರದ ವಿಶ್ವೇಶ ತೀರ್ಥ ಸ್ವಾಮೀಜಿ ರಾಜ್ಯದ ಹಲವೆಡೆ ದಲಿತ ಕಾಲನಿಗಳಿಗೆ ಭೇಟಿ ನೀಡಿ ದಲಿತರಿಗೆ ವೈಷ್ಣವ ದೀಕ್ಷೆ ನೀಡುತ್ತಾರೆ. ಹೀಗೆ ದೀಕ್ಷೆ ಪಡೆದ ದಲಿತ ವೈಷ್ಣವರಿಗೆ ಸಂಪ್ರದಾಯಸ್ಥ ಬ್ರಾಹ್ಮಣರ ಜೊತೆಗೆ ಸಹಭೋಜನಕ್ಕೆ ಅವಕಾಶ ನೀಡುತ್ತಾರೆಯೇ ಎಂದು ಪ್ರಶ್ನಿಸಿದ ಲೋಲಾಕ್ಷ, ಹಾಗಾದರೆ ಮಾತ್ರ ವೈಷ್ಣವ ದೀಕ್ಷೆಗೆ ಮಹತ್ವ ದೊರೆಯುವುದು ಎಂದು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X