ಅಪರಿಚಿತ ವಾಹನದಡಿಗೆ ಬಿದ್ದು ಮೃತ್ಯು
ಉಡುಪಿ, ಅ.18: ಉಡುಪಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ದಲ್ಲಿ ಅಪರಿಚಿತ ವಾಹನದಡಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಹಾಸನದ ರಮೇಶ್(40) ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ 5:30ರ ಸುಮಾರಿಗೆ ಇವರ ಮೃತದೇಹ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಇವರ ತಲೆಯ ಮೇಲೆ ಅಪರಿಚಿತ ವಾಹನದ ಚಕ್ರ ಹಾದು ಹೋದ ಪರಿಣಾಮ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ನಿನ್ನೆ ರಾತ್ರಿ ಸಂಭವಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





