Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಪರ್ಧೆ ಎದುರಿಸಲು ಸಿದ್ಧತೆ ಅಗತ್ಯ:...

ಸ್ಪರ್ಧೆ ಎದುರಿಸಲು ಸಿದ್ಧತೆ ಅಗತ್ಯ: ಡಿಸಿ

ಒರಿಯಂಟೇಶನ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ18 Oct 2016 10:52 PM IST
share

ಕಾರವಾರ, ಅ.18: ಸೂಕ್ತ ಉದ್ಯೋಗ ಗಿಟ್ಟಿಸಲು ಉದ್ಯೋಗ ಮಾರುಕಟ್ಟೆಯಲ್ಲಿ ವಿಪರೀತ ಸ್ಪರ್ಧೆಯಿದ್ದು ಕಠಿಣ ಪರಿಶ್ರಮ ಮತ್ತು ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಸಿದ್ಧತೆ ನಡೆಸಿದರೆ ಉದ್ಯೋಗ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದರು.

ನವೆಂಬರ್ 12ಮತ್ತು 13ರಂದು ಕಾರವಾರದಲ್ಲಿ ನಡೆಯಲಿರುವ ಉದ್ಯೋಗ ಮೇಳದ ಪೂರ್ವಭಾವಿಯಾಗಿ ಬುಧವಾರ ಕಾರವಾರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಓರಿಯೆಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಪ್ರತೀ ಕ್ಷೇತ್ರದಲ್ಲಿ ಸ್ಪರ್ಧೆಯನ್ನು ಎದುರಿಸಬೇಕಾಗಿದೆ. ಅಭ್ಯರ್ಥಿಗಳು ತೆರೆದ ಮನಸ್ಸು ಹೊಂದಿದ್ದು ದೂರದ ಊರುಗಳಲ್ಲಿ ಕೆಲಸ ಮಾಡಲು ಸನ್ನದ್ಧರಾಗಿರಬೇಕು. ಹೊಸ ಸವಾಲುಗಳನ್ನು ಎದುರಿಸಲು, ಉದ್ಯೋಗ ಮಾರುಕಟ್ಟೆಯ ಏರಿಳಿತಗಳನ್ನು ಮತ್ತು ವಸ್ತುಸ್ಥಿತಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಕೇವಲ ಶೈಕ್ಷಣಿಕ ಹಿನ್ನೆಲೆ ಇದ್ದರೆ ಮಾತ್ರ ಸಾಲದು. ಉತ್ತಮ ಅಂಕಗಳು ಮಾತ್ರ ಉದ್ಯೋಗವನ್ನು ದೊರಕಿಸಿ ಕೊಡದು. ಉತ್ತಮ ವ್ಯಕ್ತಿತ್ವ, ನಿರ್ವಹಣಾ ಕೌಶಲ್ಯ, ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದರು.

ಕಾರವಾರ ಉದ್ಯೋಗ ಮೇಳದ ಮೂಲಕ ಯಾವುದೇ ಅಭ್ಯರ್ಥಿಗಳಿಗೆ ಉದ್ಯೋಗ ಖಾತ್ರಿ ಯನ್ನು ಜಿಲ್ಲಾಡಳಿತ ನೀಡುವುದಿಲ್ಲ. ಉದ್ಯೋಗಿಗಳ ಅಗತ್ಯವಿರುವ ಕಂಪೆನಿಗಳನ್ನು ಮತ್ತು ಉದ್ಯೋಗಾಕಾಂಕ್ಷಿಗಳನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಉದ್ಯೋಗಾಕಾಂಕ್ಷಿಗಳಿಗೆ ಮಾರುಕಟ್ಟೆಯಲ್ಲಿರುವ ಅವಕಾಶಗಳನ್ನು ತೆರೆದಿಡುವ ಕಾರ್ಯವನ್ನು ಉದ್ಯೋಗ ಮೇಳದ ಮೂಲಕ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಪಂ ಮುಖ್ಯ ಸಿಇಒ ಚಂದ್ರಶೇಖರ ನಾಯಕ್ ಮಾತನಾಡಿ, ಓರಿಯೆಂಟೇಶನ್ ಕಾರ್ಯಕ್ರಮದ ಮೂಲಕ ಉದ್ಯೋಗ ಮೇಳವನ್ನು ಎದುರಿಸಲು ಅಭ್ಯರ್ಥಿಗಳಿಗೆ ಟಿಪ್ಸ್ ನೀಡಲಾಗುತ್ತಿದೆ. ಉತ್ತಮ ವ್ಯಕ್ತಿತ್ವ ರೂಪಿಸಲು, ಮಾರುಕಟ್ಟೆ ಅಗತ್ಯಗಳನ್ನು ಅರಿಯಲು ಸಹಕಾರಿಯಾಗಲಿದೆ. ತಾವು ಯಾವ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದ್ದೇವೆ ಎಂಬುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಉದ್ಯೋಗ ಮೇಳದ ನೋಡಲ್ ಅಧಿಕಾರಿ ಸದಾಶಿವ ಪ್ರಭು, ಪ್ರಸ್ತುತ 100ಕ್ಕೂ ಅಧಿಕ ಕಂಪೆನಿಗಳು ಮೇಳದಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಿವೆ. 8ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಸಹ ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿದ್ದಾರೆ. ಕಾರವಾರ ತಾಲೂಕಿನಿಂದ 3,445 ಅಭ್ಯರ್ಥಿಗಳು ಹೆಸರು ದಾಖಲಿಸಿದ್ದಾರೆ. ಪ್ರಥಮ ಹಂತದಲ್ಲಿ ಕಾರವಾರ ತಾಲೂಕಿನ ಅಭ್ಯರ್ಥಿಗಳಿಗೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇತರ ತಾಲೂಕಿನ ಅಭ್ಯರ್ಥಿಗಳಿಗೂ ಮುಂದಿನ ದಿನಗಳಲ್ಲಿ ಈ ರೀತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು. ಐಎಎಸ್ ಪ್ರೊಬೆಷನರಿ ಅಧಿಕಾರಿ ಫೌಝಿಯಾ ತರನ್ನಮ್ ಮಾತನಾಡಿ, ಅಭ್ಯರ್ಥಿಗಳಿಗೆ ಶುಭ ಹಾರೈಸಿದರು. ಸರಕಾರಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲೆ ಶಾಂತಲಾ, ಸಮನ್ವಯ ಅಧಿಕಾರಿ ದೀಕ್ಷಿತ್ ಮತ್ತಿತರರು ಉಪಸ್ಥಿತರಿದ್ದರು. ಕಾರವಾರ ಉಪವಿಭಾಗಾಧಿಕಾರಿ ಶಿವಾನಂದ ಕರಾಳೆ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X