ವಿ.ಶ್ರೀನಿವಾಸ್ ಪ್ರಸಾದ್ ಜೆಡಿಎಸ್ ಸೇರ್ಪಡೆ?

ಬೆಂಗಳೂರು, ಅ.19: ಸಚಿವ ಸ್ಥಾನದಿಂದ ವಂಚಿತರಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿ.ಶ್ರೀನಿವಾಸ್‌ಪ್ರಸಾದ್‌ರನ್ನು ಜೆಡಿಎಸ್ ಪಕ್ಷಕ್ಕೆ ಕರೆತರಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಯತ್ನಿಸಿದ್ದಾರೆ.
ಬುಧವಾರ ಮಧ್ಯಾಹ್ನ ನಗರದಲ್ಲಿರುವ ಶ್ರೀನಿವಾಸ್‌ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ, ಅಲ್ಲಿಯೇ ಭೋಜನವನ್ನು ಸ್ವೀಕರಿಸಿ, ಜೆಡಿಎಸ್ ಪಕ್ಷ ಸೇರುವಂತೆ ಆಹ್ವಾನ ನೀಡಿದ್ದಾರೆ.
ಶಾಸಕ ಸ್ಥಾನಕ್ಕೆ ತಾನು ಸಲ್ಲಿಸಿರುವ ರಾಜೀನಾಮೆಯನ್ನು ಸ್ಪೀಕರ್ ಕೆ.ಬಿ.ಕೋಳಿವಾಡ ಇನ್ನೂ ಅಂಗೀಕರಿಸಿಲ್ಲ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸುತ್ತೇನೆ. ಶಾಸಕ ಸ್ಥಾನಕ್ಕೆ ಸಲ್ಲಿಕೆಯಾಗಿರುವ ರಾಜೀನಾಮೆ ಅಂಗೀಕಾರಗೊಂಡ ನಂತರ, ಬೆಂಬಲಿಗರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಕುಮಾರಸ್ವಾಮಿಗೆ ಶ್ರೀನಿವಾಸ್‌ಪ್ರಸಾದ್ ಹೇಳಿದ್ದಾರೆ.
Next Story





